ಚಿಕ್ಕಮಗಳೂರು: ಕಾರ್ ಮೇಲೆ ಉರುಳಿ ಬಿದ್ದ ಕಟ್ಟಿಗೆ ತುಂಬಿದ ಲಾರಿ

Published : Mar 15, 2026, 05:04 AM IST

ಚಿಕ್ಕಮಗಳೂರು ಹೊರವಲಯದ ಲಕ್ಯಾ ಕ್ರಾಸ್ ಬಳಿ ಕಟ್ಟಿಗೆ ತುಂಬಿದ ಲಾರಿಯೊಂದು ಕಾರಿನ ಮೇಲೆ ಉರುಳಿಬಿದ್ದು ಭೀಕರ ಅಪಘಾತ ಸಂಭವಿಸಿದೆ. ಕಾರಿನೊಳಗೆ ಸಿಲುಕಿದ್ದ ದಂಪತಿ ಮತ್ತು ಮಗುವನ್ನು ಸ್ಥಳೀಯರು ರಕ್ಷಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

PREV
14
ಲಕ್ಯಾ ಕ್ರಾಸ್ ಬಳಿ ಭೀಕರ ಅಪಘಾತ

ಚಿಕ್ಕಮಗಳೂರು: ಚಿಕ್ಕಮಗಳೂರು ಹೊರವಲಯದ ಲಕ್ಯಾ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಕಟ್ಟಿಗೆ ತುಂಬಿದ ಲಾರಿಯೊಂದು ಉರುಳಿ ಬಿದ್ದಿದೆ.

24
ಕಾರಿನ ಮೇಲೆ ಉರುಳಿದ ಲಾರಿ

ಕಟ್ಟಿಗೆ ತುಂಬಿದ ಲಾರಿ ಕಾರಿನ ಮೇಲೆ ಉರುಳಿ ಬಿದ್ದಿದ್ದರಿಂದ ಕಾರಿನೊಳಗಿದ್ದ ದಂಪತಿ ಮತ್ತು ಮಗು ಒಳಗೆ ಸಿಲುಕಿದ್ದರು. ಆದರೆ ಸ್ಥಳೀಯರ ಸಹಾಯದಿಂದ ಅವರನ್ನು ರಕ್ಷಣೆ ಮಾಡಲಾಗಿದೆ.

34
ಕಾರಿನೊಳಗೆ ಸಿಲುಕಿದ ದಂಪತಿ, ಮಗುವಿನ ರಕ್ಷಣೆ

ಅದೃಷ್ಟವಶಾತ್ ದಂಪತಿ ಮತ್ತು ಮಗು ದೊಡ್ಡ ಅನಾಹುತದಿಂದ ಪಾರಾಗಿದ್ದಾರೆ ಘಟನೆಯಿಂದಾಗಿ ಈ ಮಾರ್ಗದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ.

44
ಕಡೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಲಾರಿ

ಈ ಲಾರಿ ಕಟ್ಟಿಗೆ ತುಂಬಿಸಿಕೊಂಡು ಕಡೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿತ್ತು. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories