ರಾಜ್ಯದ ಇತರ ನಗರಗಳಲ್ಲಿ ಉದ್ದಿಮೆ ಸ್ಥಾಪನೆಗೆ ಸರ್ಕಾರ ಬದ್ಧ: ಸಿಎಂ ಯಡಿಯೂರಪ್ಪ

First Published Aug 1, 2020, 8:13 AM IST

ಬೆಂಗಳೂರು(ಆ.01): ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರಕಿಸಿಕೊಡಲು ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಮಾಹಿತಿ ತಂತ್ರಜ್ಞಾನ ಆಧಾರಿತ ಉದ್ದಿಮೆಗಳು ನೆಲೆಗೊಳ್ಳುವಂತೆ ಮಾಡಲು ಸರ್ಕಾರ ಬದ್ಧವಾಗಿದ್ದು, ಈ ದಿಸೆಯಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.
 

ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ವತಿಯಿಂದ ಕಿಯೋನಿಕ್ಸ್‌ ವೇರ್‌ ಹೌಸ್‌, ಇನ್‌ಕ್ಯೂಬೇಷನ್‌ ಮತ್ತು ಸ್ಟಾರ್ಟ್‌ ಅಪ್‌ ಸಂಸ್ಥೆಗಳಿಗೆ ಸೌಲಭ್ಯ ಕಲ್ಪಿಸಲು ನಗರದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸಿದ್ದಾರೆ.
undefined
ಸುಮಾರು 75,000 ಚದರ ಅಡಿ ವಿಸ್ತೀರ್ಣದಲ್ಲಿ 34 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಸೇವೆಯಿಂದ ನಿವೃತ್ತರಾದ ಕಿಯೋನಿಕ್ಸ್‌ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಟಿ.ಆರ್‌. ಸುರೇಶ್‌ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು. ಸಂಸದ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್‌ ರೆಡ್ಡಿ, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕಿಯೋನಿಕ್ಸ್‌ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
undefined
ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ವತಿಯಿಂದ ಕಿಯೋನಿಕ್ಸ್‌ ವೇರ್‌ ಹೌಸ್‌, ಇನ್‌ಕ್ಯೂಬೇಷನ್‌ ಮತ್ತು ಸ್ಟಾರ್ಟ್‌ ಅಪ್‌ ಸಂಸ್ಥೆಗಳಿಗೆ ಸೌಲಭ್ಯ ಕಲ್ಪಿಸಲು ನಗರದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸಿದರು.
undefined
ಡಿಸಿಎಂ ಡಾ.ಸಿ.ಎನ್‌.ಅಶ್ವತ್‌ ನಾರಾಯಣ, ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್‌ ರೆಡ್ಡಿ, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮತ್ತಿತರರಿದ್ದರು.
undefined
click me!