ಹತೋಟಿಗೆ ಬಾರದ ಕೊರೋನಾ: ಹಿರಿಯ ಅಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಸಭೆ

First Published | Aug 24, 2020, 1:33 PM IST

ಬೆಂಗಳೂರು(ಆ.24):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಎಷ್ಟೇ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡರೂ ಕೂಡ ಕೋವಿಡ್‌ ಕೇಸ್‌ಗಳು ಮಾತ್ರ ಹತೋಟಿಗೆ ಬರುತ್ತಿಲ್ಲ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.  ರಾಜ್ಯದಲ್ಲಿ ಕೊರೋನಾ ಉಲ್ಬಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನ ಪಡೆದುಕೊಂಡಿದ್ದಾರೆ. 

ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಬಿ.ಎಸ್.ಯಡಿಯೂರಪ್ಪ
ರಾಜ್ಯದಲ್ಲಿ ಕೊರೋನಾ ಉಲ್ಬಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ
Tap to resize

ಸೋಂಕಿನ ಪ್ರಮಾಣ ಏರುತ್ತಲೇ ಇದ. ರಾಜ್ಯ ಸರ್ಕಾರ ಮತ್ತೆ ಯಾವೆಲ್ಲ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು ಎಂಬುದರ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಯಡಿಯೂರಪ್ಪ
ಸಭೆಯಲ್ಲಿ ಸಿಎಸ್ ವಿಜಯಭಾಸ್ಕರ್, ಬಿ.ಬಿ.ಎಂ.ಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ಮಹೇಂದ್ರ ಜೈನ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಉಪಸ್ಥಿತರಿದ್ದರು‌.

Latest Videos

click me!