ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಲೋಕಾರ್ಪಣೆ

Suvarna News   | Asianet News
Published : Aug 27, 2020, 01:49 PM ISTUpdated : Aug 27, 2020, 02:04 PM IST

ಬೆಂಗಳೂರು(ಆ.27): ನಗರದ ಆನಂದ್ ರಾವ್ ಸರ್ಕಲ್ ಬಳಿ ಇರುವ ಮೇಲ್ಸೇತುವೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ನಾಮಕರಣ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು(ಗುರುವಾರ) ನೂತನ ಮೇಲ್ಸೇತುವೆಯನ್ನ ಉದ್ಘಾಟಿಸಿದ್ದಾರೆ. 

PREV
16
ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಲೋಕಾರ್ಪಣೆ

ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಮೇಲ್ಸೇತುವೆಗೆ ರಾಯಣ್ಣ ಹೆಸರು ನಾಮಕರಣ ಮಾಡಿದ್ದೇವೆ‌. ಸ್ವಾತಂತ್ರ್ಯ ದಿನ ರಾಯಣ್ಣ ಹುಟ್ಟಿದ್ದು, ಬ್ರಿಟಿಷರ ವಿರುದ್ಧ ಹೋರಾಡಿದ ಕನ್ನಡ ಕಲಿಯಾಗಿದ್ದಾನೆ ರಾಯಣ್ಣ. ಇಂತಹ ಮಹಾನ್ ವ್ಯಕ್ತಿಯ ಹೆಸರು ನೂತನ ಮೇಲ್ಸೇತುವೆಗೆ ಇಡಲಾಗಿದೆ ಎಂದು ತಿಳಿಸಿದ್ದಾರೆ. 

26

ಇನ್ನು ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಗಲಾಟೆ ವಿಚಾರದ ಬಗ್ಗೆ ಮಾತನಾಡಿದ ಸಿಎಂ, ನಿನ್ನೆ(ಬುಧವಾರ) ಸ್ವಾಮೀಜಿಗಳು ಆಗಮಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದೇನೆ. ಇಂದು ಸಚಿವರು ಸಭೆ ನಡೆಸಿ ಗೊಂದಲವನ್ನ ಪರಿಹಾರ ಮಾಡುತ್ತಾರೆ ಎಂದು ಹೇಳಿದ್ದಾರೆ. 

36

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, ಗಾಂಧಿನಗರ ಕ್ಷೇತ್ರದಲ್ಲಿ ರಾಯಣ್ಣ ಸ್ಮರಣೆ ‌ಮಾಡುವ ಸ್ಮಾರಕಗಳು ಬಂದಿರುವುದು ಸಂತಸ ತಂದಿದೆ. ಬೆಳಗಾವಿ ಬಿಟ್ಟರೆ ಗಾಂಧಿನಗರ ಕ್ಷೇತ್ರದಲ್ಲಿ ಅತೀ ಹೆಚ್ಚು ಸ್ಮಾರಕಗಳು ಇವೆ. ಮೇಲ್ಸೇತುವೆಗೆ ಒಂದು ವರ್ಷದ ಹಿಂದೆಯೇ ರಾಯಣ್ಣನ ಹೆಸರು ಇಡಲಾಗಿದೆ. ಇಂದು ಅಧಿಕೃತ ಉದ್ಘಾಟನೆಯಾಗಿದೆ. ಬೆಳಗಾವಿ ವಿಚಾರಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ. 

46

ಇದೇ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರು, ನಗರದಲ್ಲಿ ಮೆಟ್ರೋ ಸೇವೆ ಶೀಘ್ರದಲ್ಲಿ ಆರಂಭಿಸೋದಾಗಿ ಸಿಎಂ ಹೇಳಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗೃತಾ ಕ್ರಮ ಕೈಗೊಂಡು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

56

ಬಿಬಿಎಂಪಿ ವತಿಯಿದ ಸೆ. 2 ರಂದು ಕೆಂಪೇಗೌಡ ಜಯಂತಿಯನ್ನ ಆಚರಿಸಲು ತೀರ್ಮಾನಿಸಲಾಗಿದೆ. ಕೆಲವೇ ಕೆಲವು ಜನ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಕೊರೋನಾ ವಾರಿಯರ್ಸ್‌ಗಳಿಗೆ ಮಾತ್ರ ಕೆಂಪೇಗೌಡ ಪ್ರಶಸ್ತಿ ನೀಡಲಾಗುತ್ತದೆ. 20 ಜನಕ್ಕೆ ಮಾತ್ರ ಪ್ರಶಸ್ತಿ ನೀಡಲು ತೀರ್ಮಾನ ಮಾಡಿದ್ದೇವೆ. ತಜ್ಞರ ಮಾಹಿತಿಯಂತೆ ಯಾರಿಗೆ ಕೊಡಬೇಕು ಎಂದು ನಿರ್ಧಾರ ಮಾಡುತ್ತೇವೆ. ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಇರುತ್ತದೆ. ಕೊರೋನಾ ಇದ್ದಿದ್ದರಿಂದ ಸರಿಯಾದ ದಿನಾಂಕಕ್ಕೆ ಕೆಂಪೇಗೌಡ ಜಯಂತಿ ಆಗಿರಲಿಲ್ಲ. ಇದೀಗ ಸೆಪ್ಟೆಂಬರ್‌ನಲ್ಲಿ ಜಯಂತಿ ಮಾಡಲು ತೀರ್ಮಾನ ಮಾಡಲಾಗುತ್ತಿದೆ. ಎಂಟು ಗೋಪುರಗಳಿಗೆ ಅಲ್ಲಿನ ಜನ ಪ್ರತಿನಿಧಿಗಳು ಸೇರಿ ಪೂಜೆ ಮಾಡುತ್ತಾರೆ. ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಬಿಡುಗಡೆಯಾಗುತ್ತದೆ. ಅದರ ಅನ್ವಯ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಬಿಬಿಎಂಪಿ ಮೇಯರ್‌ ಗೌತಮ್‌ ಕುಮಾರ್‌ ಅವರು ತಿಳಿಸಿದ್ದಾರೆ. 

66

ಕಾರ್ಯಕ್ರಮದಲ್ಲಿ ಮೇಯರ್ ಗೌತಮ್ ಕುಮಾರ್, ಉಪ ಮೇಯರ್ ರಾಮ್ ಮೋಹನ್ ರಾಜ್, ಆಯುಕ್ತ ಮಂಜುನಾಥ್ ಪ್ರಸಾದ್, ಶಾಸಕ ದಿನೇಶ್ ಗುಂಡೂರಾವ್ ಸೇರಿ ಹಲವರು ಭಾಗಿಯಾಗಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories