ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿಯ ಲಾಂಛನ ಮತ್ತು ಜಾಲತಾಣವನ್ನು ಸಿಎಂ ಬೆಂಗಳೂರಿನಲ್ಲಿ ಉದ್ಘಾಟಿಸಿದ್ದಾರೆ.
ಆರ್ಥಿಕವಾಗಿ ಹಿಂದುಳಿದ ಜನರು ಬ್ರಾಹ್ಮಣ ಸಮುದಾಯದಲ್ಲಿಯೂ ಇರುವುದರಿಂದ ಅವರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಹಕಾರ ನೀಡುವುದಾಗಿ ಹೇಳಿದ್ದಾರೆ.
ಶಿಕ್ಷಣ ಹಾಗೂ ಸಾಂಸ್ಕೃತಿಕ ಪರಂಪರೆಯಲ್ಲಿ ಬ್ರಾಹ್ಮಣರ ಕೊಡುಗೆಯನ್ನು ಸಿಎಂ ಈ ಸಂದರ್ಭ ಸ್ಮರಿಸಿಕೊಂಡರು.
ಅಶಕ್ತರನ್ನು ಮೇಲೆತ್ತಲು ಬ್ರಾಹ್ಮಣ ಸಮುದಾಯದಲ್ಲಿ ಕೈಗೊಂಡ ಕಾರ್ಯಗಳು ಶ್ಲಾಘನೀಯ ಎಂದು ಅವರು ಹೇಳಿದ್ದಾರೆ,
ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ತೇಜಸ್ವಿ ಸೂರ್ಯ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
Suvarna News