ಡಿಬಿಟಿ ಮೊಬೈಲ್‌ ಆ್ಯಪ್‌ಗೆ ಸಿಎಂ ಯಡಿಯೂರಪ್ಪ ಚಾಲನೆ

Kannadaprabha News   | Asianet News
Published : Jun 11, 2021, 08:41 AM IST

ಬೆಂಗಳೂರು(ಜೂ.11): ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಅಭಿವೃದ್ಧಿಪಡಿಸಿರುವ ಡಿಬಿಟಿ ಮೊಬೈಲ್‌ ಆ್ಯಪ್‌ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

PREV
15
ಡಿಬಿಟಿ ಮೊಬೈಲ್‌ ಆ್ಯಪ್‌ಗೆ ಸಿಎಂ ಯಡಿಯೂರಪ್ಪ ಚಾಲನೆ

ಗುರುವಾರ ತಮ್ಮ ಗೃಹ ಕಚೇರಿಯಲ್ಲಿ ಈ ಆ್ಯಪ್‌ಗೆ ಹಸಿರು ನಿಶಾನೆ ತೋರಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಈವರೆಗೆ ಸುಮಾರು 120 ಯೋಜನೆಗಳನ್ನು ಈ ವೇದಿಕೆಗೊಳಪಡಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ 12 ಸಾವಿರ ಕೋಟಿ ರು.ಗಿಂತ ಹೆಚ್ಚು ಮೊತ್ತವನ್ನು ಫಲಾನುಭವಿಗಳ ಆಧಾರ್‌ ಜೋಡಣೆಯಾದ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ. ಈ ವ್ಯವಸ್ಥೆಯಿಂದ ಹಣ ದುರುಪಯೋಗ, ಲೋಪದೋಷ ಅಥವಾ ಮಧ್ಯವರ್ತಿಗಳ ಹಾವಳಿ ಇಲ್ಲ ಎಂದು ಹರ್ಷ ವ್ಯಕ್ತಪಡಿಸಿದರು.

25

ಕೋವಿಡ್‌ ಮೊದಲನೆ ಮತ್ತು ಎರಡನೆಯ ಅಲೆಯ ಸಂದರ್ಭದಲ್ಲಿ ಸರ್ಕಾರವು ಘೋಷಿಸಿದ ಎಲ್ಲಾ ಪ್ಯಾಕೇಜ್‌ಗಳು ಈ ವೇದಿಕೆ ಮೂಲಕವೇ ಪಾವತಿ ಮಾಡಲಾಗಿದೆ. ಈ ಬಾರಿಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯದಲ್ಲಿ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವ ಎಲ್ಲ ಯೋಜನೆಗಳನ್ನು ಡಿಬಿಟಿ ವೇದಿಕೆಯಡಿ ತರಲಾಗುವುದು. ಈ ವೇದಿಕೆಯು ಫಲಾನುಭವಿಯನ್ನು ಆಧಾರ್‌ ಸಂಖ್ಯೆ ಮೂಲಕ ಗುರುತಿಸಿ ಫಲಾನುಭವಿಯ ಆಧಾರ್‌ ಅನ್ನು ಆರ್ಥಿಕ ವಿಳಾಸವಾಗಿ ಪರಿಗಣಿಸಿ ನಗದು ವರ್ಗಾವಣೆಯನ್ನು ಆಧಾರ್‌ ಜೋಡಣೆಯಾದ ಬ್ಯಾಂಕ್‌ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು. ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಮಾಹಿತಿಯು ಯುಐಡಿಐ ಜಾಲತಾಣದಲ್ಲಿ ಮಾತ್ರ ಲಭ್ಯವಿದ್ದು, ನಾಗರಿಕರು ತಮ್ಮ ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆಯಾಗಿರುವ ಬಗ್ಗೆ ತಿಳಿದುಕೊಳ್ಳಲು ಕಷ್ಟವಾಗಿತ್ತು ಎಂದರು.

35

ನಾಗರಿಕರ ಆಧಾರ್‌ ಬ್ಯಾಂಕ್‌ ಖಾತೆಗೆ ಜೋಡಣೆಯಾಗದಿದ್ದಲ್ಲಿ ರಾಜ್ಯ ಸರ್ಕಾರವು ನಗದು ಸೌಲಭ್ಯ ವರ್ಗಾವಣೆಗೆ ಬಳಸುತ್ತಿರುವ ಆಧಾರ್‌ ಆಧಾರಿತ ನಗದು ವರ್ಗಾವಣೆ ವ್ಯವಸ್ಥೆ ಮೂಲಕ ಹಣ ಪಡೆಯಲು ಸಾಧ್ಯವಾಗುವುದಿಲ್ಲ. ಬಹಳಷ್ಟುನಾಗರಿಕರಿಗೆ ತಮ್ಮ ಯಾವ ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆಯಾಗಿದೆ ಎಂಬ ಮಾಹಿತಿ ತಿಳಿದಿರುವುದಿಲ್ಲ. ಇದರಿಂದ ಸರ್ಕಾರವು ಯಾವ ಬ್ಯಾಂಕ್‌ ಖಾತೆಗೆ ನಗದು ಸೌಲಭ್ಯವನ್ನು ಜಮೆ ಮಾಡಿದೆ ಎಂಬ ವಿವರಗಳನ್ನು ತಿಳಿದುಕೊಳ್ಳಲು ಇವರುಗಳಿಗೆ ಬಹಳ ಕಷ್ಟವಾಗುತ್ತದೆ. ಅಲ್ಲದೆ ಇತ್ತೀಚಿಗೆ ರಾಜ್ಯ ಸರ್ಕಾರವು ನಾಗರಿಕರಿಂದ ಯಾವುದೇ ಅರ್ಜಿ ಪಡೆಯದೇ ಅರ್ಹತೆ ಆಧಾರದ ಮೇಲೆ ನಗದು ವರ್ಗಾವಣೆಯನ್ನು ಮಾಡುತ್ತಿರುವುದರಿಂದ ಇವರುಗಳಿಗೆ ಹಣ ಬ್ಯಾಂಕ್‌ ಖಾತೆಯಲ್ಲಿ ಜಮೆಯಾಗುವ ಬಗ್ಗೆಯು ಮಾಹಿತಿ ಲಭ್ಯ ಇರುವುದಿಲ್ಲ. 

45

ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಡಿಬಿಟಿ ಮೊಬೈಲ್‌ ಆಪ್‌ ಅನ್ನು ಅಭಿವೃದ್ಧಿಪಡಿಸಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

55

ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌. ಪ್ರಸಾದ್‌, ಇ-ಆಡಳಿತ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್‌ ಚಾವ್ಲಾ, ಡಿಬಿಟಿ ಯೋಜನಾ ನಿರ್ದೇಶಕ ಶ್ರೀವತ್ಸ ಇತರರು ಉಪಸ್ಥಿತರಿದ್ದರು.

click me!

Recommended Stories