ಸಂಪೂರ್ಣ ಲಾಕ್‌ಡೌನ್‌: ಡಿಸಿಗಳ ಜೊತೆ ವಿಡಿಯೋ ಸಂವಾದ, ಸಿಎಂ ಬಿಎಸ್‌ವೈ ಪ್ರತಿಕ್ರಿಯೆ

First Published | Jul 13, 2020, 12:22 PM IST

ಬೆಂಗಳೂರು(ಜು.13): ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೆ ಮಹಾಮಾರಿ ಕೊರೋನಾ ವೈರಸ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಜೊತೆಗೆ  ಸಾವಿನ ಪ್ರಮಾಣವೂ ಕೂಡ ಅಷ್ಟೇ ತೀವ್ರಗತಿಯಲ್ಲಿ ಹೆಚ್ಚಾಗುತ್ತಿವೆ. ಹೀಗಾಗಿ ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೋನಾ ಕಟ್ಟಿಹಾಕಲು ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ನಾಳೆಯಿಂದ(ಮಂಗಳವಾರ) ಜು. 14 ರ ರಾತ್ರಿ 8  ರಿಂದ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಲು ತೀರ್ಮಾನಿಸಿದ್ದಾರೆ. 

ಇನ್ನು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳ ಸಂಬಂಧ ಮಾಹಿತಿ ಪಡೆಯಲು ಇಂದು ಅಧಿಕೃತ ನಿವಾಸ ಕಾವೇರಿಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ವಿಡಿಯೋ ಸಂವಾದ ನಡೆಸಿದ್ದಾರೆ.
undefined
ಜಿಲ್ಲಾಧಿಕಾರಿಗಳ ಜತೆಗಿನ ವೀಡಿಯೊ ಸಂವಾದದಲ್ಲಿ ಪ್ರಾಸ್ತಾವಿಕವಾಗಿ‌ ಮಾತನಾಡಿದ ಸಿಎಂ ಬಿಎಸ್‌ವೈ, ಲಾಕ್‌ಡೌನ್ ಮಾಡಿ ಎಂದು ‌ನಾನು‌ ಯಾರಿಗೂ ಸೂಚಿಸಲ್ಲ. ಲಾಕ್‌ಡೌನ್‌ನಿಂದ ಸಮಸ್ಯೆಗೆ ಪರಿಹಾರ ಸಿಗುತ್ತೆ ಎಂದು‌‌ ನನಗೇನೂ ಅನಿಸಲ್ಲ ಎಂದು ಹೇಳಿದ್ದಾರೆ.
undefined

Latest Videos


ಲಾಕ್‌ಡೌನ್ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಅಂತಿಮವಾಗಿ‌ ತಮಗೆ ಸರಿ‌ ಅನಿಸಿದ್ದನ್ನು ತೀರ್ಮಾನ ತೆಗೆದುಕೊಳ್ಳಬಹುದಾಗಿದೆ. ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡುವ ಸಂಪೂರ್ಣ ಅಧಿಕಾರ ಜಿಲ್ಲಾಡಳಿತಕ್ಕೆ ಬಿಡಲು ಸಿಎಂ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
undefined
ಲಾಕ್‌ಡೌನ್ ಮಾಡುವ ಸಂಬಂಧ ಸಭೆಯ ಆರಂಭದಲ್ಲಿಯೇ ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸಂದೇಶ ಕೊಟ್ಟಿರುವ ಸಿಎಂ
undefined
ಆಯಾ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಮಾಡುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಡಿಸಿಗಳು ಕುಳಿತು ತಿರ್ಮಾನ ಮಾಡಬೇಕು ಎಂದು ವಿಡಿಯೋ ಕಾನ್ಫರೆನ್ಸ್ ನಲ್ಲಿ ಸ್ಪಷ್ಟ ಸಂದೇಶ ರವಾನಿಸಿದ ಸಿಎಂ
undefined
click me!