ಸೈಬರ್ ಕ್ರೈಂ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇವುಗಳನ್ನು ತಡೆಯಲು ಪೊಲೀಸರು ಕೂಡ ಆಧುನಿಕ ತಂತ್ರಜ್ಞಾನ ಬಳಸಬೇಕು ಮತ್ತು ಹಿರಿಯ ಅಧಿಕಾರಿಗಳು ಕಿರಿಯ ಅಧಿಕಾರಿಗಳನ್ನು ತಾಂತ್ರಿಕವಾಗಿ ಸನ್ನದ್ಧಗೊಳಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
undefined
ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಕಾರ್ಯಕ್ರಮ
undefined
ಸೈಬರ್ ಹ್ಯಾಕರ್ಸ್ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದಾರೆ. ನಾನಾ ರೀತಿಯ ಕಾನೂನು ಬಾಹಿರ ಚಟವಟಿಕೆಗಳನ್ನು ನಡೆಸುತ್ತಿದ್ದಾರೆ. ಅದಕ್ಕೆ ಕಡಿವಾಣ ಹಾಕಲು ಪೊಲೀಸರು ಸಹ ಆಧುನಿಕ ತಂತ್ರಜ್ಞಾನ ಬಳಕೆ ಮಾಡಬೇಕು. ಅಲ್ಲದೇ, ಆಧುನಿಕ ತಂತ್ರಜ್ಞಾನ ಕುರಿತಂತೆ ಹಿರಿಯ ಅಧಿಕಾರಿಗಳು ಕಿರಿಯರನ್ನು ಸನ್ನದ್ಧಗೊಳಿಸಬೇಕು ಎಂದು ಸಲಹೆ ನೀಡಿದ ಬಸವರಾಜ ಬೊಮ್ಮಾಯಿ
undefined
ಸರ್ಕಾರದ ಎಲ್ಲಾ ಇಲಾಖೆಗಳನ್ನು ಹ್ಯಾಕ್ ಮಾಡಲಾಗುತ್ತಿದೆ. ಖಾಸಗಿ ಜೀವನಕ್ಕೆ ಭಂಗ ತರುವಂತಹ ದುಷ್ಕೃತ್ಯಗಳು ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ. ಪೊಲೀಸ್ ಇಲಾಖೆ ಸಹ ಆಧುನಿಕ ತಂತ್ರಜ್ಞಾನ ಬಳಕೆಯಲ್ಲಿ ನಿಪುಣತೆ ಸಾಧಿಸಬೇಕಾಗಿದೆ. ದಿನನಿತ್ಯ ಎದುರಾಗುವ ಅಪರಾಧ ಚಟುವಟಿಕೆಗಳು ಮತ್ತು ಸವಾಲುಗಳನ್ನು ಹಿಮ್ಮೆಟ್ಟಿಸಲು ಪೊಲೀಸರು ಸರ್ವಸನ್ನದ್ಧರಾಗಬೇಕು. ದೇಶದಲ್ಲಿ ಕರ್ನಾಟಕ ಪೊಲೀಸರಿಗೆ ಹೆಚ್ಚಿನ ಗೌರವ ಇದೆ. ರಾಜ್ಯದ ಪೊಲೀಸರು ದಕ್ಷತೆ, ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಮತ್ತು ಸಾಹಸಕ್ಕೆ ಖ್ಯಾತಿ ಪಡೆದಿದ್ದಾರೆ. ಇದನ್ನು ಮುಂದುವರಿಸಿಕೊಂಡು ಹೋಗಬೇಕು. ಆಧುನಿಕ ತಂತ್ರಜ್ಞಾನ ಬಳಸಿದ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರಿಗೆ ಅದನ್ನು ತಡೆಯುವುದು ದೊಡ್ಡ ಸವಾಲು. ಯಾವ ಸಮಯದಲ್ಲಿ ಎಂತಹ ದುಷ್ಕೃತ್ಯಗಳು ನಡೆಯುತ್ತಿವೆ ಎಂಬುದು ಗೊತ್ತಾಗುವುದಿಲ್ಲ. ಇದನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಬೇಕು ಎಂದು ಕರೆ ನೀಡಿದರು.
undefined
ಹಿಂದಿನ ಸರ್ಕಾರಗಳು ನೀಡದ ಸೌಲಭ್ಯಗಳನ್ನು ನಮ್ಮ ಸರ್ಕಾರವು ನೀಡಿದೆ. ಕೋವಿಡ್ ವೇಳೆ ಕರ್ತವ್ಯ ವೇಳೆ ಮೃತಪಟ್ಟಪೊಲೀಸ್ ಸಿಬ್ಬಂದಿಗೆ ಇಲಾಖೆಯ ಇತರೆ ಸೌಲಭ್ಯಗಳನ್ನು ಬಿಟ್ಟು 30 ಲಕ್ಷ ರು. ಪರಿಹಾರವನ್ನು ನೀಡಲಾಗಿದೆ. ಆರೋಗ್ಯ ಸೇವೆಯ ಬಿಲ್‌ಗಳನ್ನು ಯಾವುದೇ ಬಾಕಿ ಉಳಿಸಿಕೊಂಡಿಲ್ಲ ಎಂದು ಇದೇ ವೇಳೆ ತಿಳಿಸಿದರು.
undefined
ಉತ್ತಮ ಸೇವೆ ಸಲ್ಲಿಸಿದ 118 ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ನೀಡಿ ಗೌರವಿಸಲಾಯಿತು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‌ಸೂದ್, ಸರ್ಕಾರ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಇತರರು ಉಪಸ್ಥಿತರಿದ್ದರು.
undefined
ನಕಲ್ಸ್, ನಿಗ್ರಹ, ಉಗ್ರರ ವಿರುದ್ಧ ಹೋರಾಟ ಸೇರಿದಂತೆ ಯಾವುದೇ ಬಿಕ್ಕಟ್ಟು ಪರಿಸ್ಥಿತಿ ಉಂಟಾದಾಗಲೂ ಪೊಲೀಸರು ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಾರೆ. ಪೊಲೀಸರ ಕರ್ತವ್ಯದಲ್ಲಿ ದಕ್ಷ ಮತ್ತು ಪ್ರಾಮಾಣಿಕತೆ ತೋರುತ್ತಿದ್ದಾರೆ. ಅವರ ಹಿತ ಕಾಪಾಡುವುದು ಸರ್ಕಾರದ ಹೊಣೆ ಮತ್ತು ಅವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವುದು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ ಸಿಎಂ
undefined
ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಜನರು ಶಾಂತಿಯುತವಾಗಿ ಜೀವನ ನಡೆಸಲು ಪೊಲೀಸರು ಕಾರಣಿಭೂತರಾಗಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ತಡೆಯುವಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಪೊಲೀಸ್ ಗೃಹ ಯೋಜನೆಯಲ್ಲಿ ಪೊಲೀಸರಿಗೆ 11 ಸಾವಿರ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನಿರ್ಭಯಾ ಯೋಜನೆಯನ್ನು 662 ಕೋಟಿ ರು. ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದ್ದು, ಈ ಯೋಜನೆಯಿಂದ ಮಹಿಳೆಯರಿಗೆ, ಮಕ್ಕಳಿಗೆ ಸುರಕ್ಷತೆ ಒದಗಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿ ತುರ್ತು ಸ್ಪಂದನೆ ನೀಡುವ 150 ವಾಹನಗಳಿಗೆ ಚಾಲನೆ ಕೊಟ್ಟಿದ್ದಾರೆ. 112 ಸಂಖ್ಯೆಯ ಸಹಾಯವಾಣಿಗಳನ್ನು ತೆರೆದಿದ್ದೇವೆ. ಮಹಿಳೆಯರ ಸುರಕ್ಷತೆ, ನಾಗರಿಕರ ನೆಮ್ಮದಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಮೊದಲ ಕರ್ತವ್ಯ ಎಂದರು.
undefined