ಕೊರೋನಾ ತುರ್ತು ಚಿಕಿತ್ಸೆಗಾಗಿ 'ಆಕ್ಸಿಬಸ್'ಗೆ ಸಿಎಂ ಬಿಎಸ್‌ವೈ ಚಾಲನೆ

First Published | May 11, 2021, 7:24 PM IST

ಪ್ರಸ್ತುತ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಎದುರಾಗಿದ್ದು, ಸೋಂಕಿತರು ಆಕ್ಸಿಜನ್ ಸಿಗದೇ ನರಳಾಡಿ ಸಾಯುತ್ತಿದ್ದಾರೆ. ಇದನ್ನು ತಡೆ ರಾಜ್ಯ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ತುರ್ತು ಸಂದರ್ಭಗಳಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ 'ಆಕ್ಸಿಬಸ್' ಸೇವೆಗೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ತುರ್ತು ಸಂದರ್ಭಗಳಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ 'ಆಕ್ಸಿಬಸ್' ಸೇವೆಗೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು (ಮಂಗಳವಾರ) ಚಾಲನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಕ್ಸಿಜನ್ ಬಸ್ ಗಳ ಮೂಲಕ ಸಂಚಾರಿ ಸೇವೆ ಆರಂಭಿಸಿದ್ದು, ಪ್ರತಿ ತಾತ್ಕಾಲಿಕ ಆಕ್ಸಿಬಸ್ 8 ರೋಗಿಗಳಿಗೆ ನೆರವಾಗಲಿದೆ.
Tap to resize

ತಾತ್ಕಾಲಿಕವಾಗಿ ಆಕ್ಸಿಬಸ್ ಗಳು 8 ಕೊರೋನಾ ತುರ್ತು ಚಿಕಿತ್ಸೆಗಾಗಿ ರೋಗಿಗಳಿಗೆ ನೆರವಾಗಲಿದೆ.
20 ಬಸ್ ಗಳನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಚಿಕಿತ್ಸಾ ಕೇಂದ್ರಗಳ ಬಳಿ ಇರಿಸಲಾಗುವುದು ಅಲ್ಲದೆ ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯ ಬಸ್ ಗಳನ್ನು ಇರಿಸಲಾಗುವುದು ಎಂದು ಸಿಎಂ ಹೇಳಿದರು.
ಇದೇ ವೇಳೆ ಸಿಎಂ ಬಿಎಸ್‌ವೈ, ಗಂಭೀರ ರೋಗಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ಪಡೆಯಲು ದಾರಿ ಮಾಡಿಕೊಡಿ ಅನಗತ್ಯವಾಗಿ ಆಸ್ಪತ್ರೆಗಳಲ್ಲಿ ಉಳಿದುಕೊಳ್ಳಬೇಡಿ ಕೋವಿಡ್ ರೋಗಿಗಳು ಮನೆಗೆ ಹೋಗಿ ಎಂದು ಮನವಿ ಮಾಡಿದರು.
ಸಂಸದ ತೇಜಸ್ವಿ ಸೂರ್ಯ ಅವರು ಸಹ ಕೊರೋನಾ ಸೋಂಕಿತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 250 ಯೂನಿಟ್ ಗಳ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್‌ಗೆ ಚಾಲನೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹದು.

Latest Videos

click me!