ಇಂದು ಸಿಎಂ ಗೃಹ ನಿವಾಸ ಕಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ದಾನಿಗಳ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸ ಪತ್ರ ನೀಡಿ ಗೌರವಿಸಿ ಸನ್ಮಾನಿಸಿದರು.
ಸಿಎಂ ಗೃಹ ನಿವಾಸ ಕಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಚಿವ ಚಲುವರಾಯಸ್ವಾಮಿ, ಹಿರಿಯ ಅಧಿಕಾರಿಗಳು ಉಪಸ್ಥಿತಿಯಿದ್ದರು.
ಜೀವಸಾರ್ಥಕತೆ ಅಡಿಯಲ್ಲಿ ಅಂಗಾಂಗ ದಾನಕ್ಕೆ ಒತ್ತು ನೀಡಿರುವ ಆರೋಗ್ಯ ಇಲಾಖೆ. ಅಂಗಾಂಗ ದಾನ ಮಾಡಿದ 7 ಕುಟುಂಬಗಳನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸನ್ಮಾನಿಸಿದರು.
ಅಂಗಾಂಗ ದಾನ ಮಾಡುವುದು ಮಹತ್ಕಾರ್ಯ. ಒಬ್ಬರ ಜೀವ ಹೋಗಿರುವ ಸಂದರ್ಭದಲ್ಲಿ ಇನ್ನೊಬ್ಬರ ಜೀವ ಉಳಿಸುವ ಬಗ್ಗೆ ದಾನಿಗಳ ಕುಟುಂಬ ಯೋಚಿಸುವುದು ಸಾಮಾನ್ಯವಲ್ಲ. ಅಂಗಾಂಗ ದಾನ ಹೆಚ್ಚಾಗಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೆಚ್ಚಿನ ಒತ್ತು ನೀಡಿದ್ದಾರೆ. ದೇಶದಲ್ಲಿಯೇ ಕರ್ನಾಟಕ ಇಂದು ಅಂಗಾಂಗ ದಾನದಲ್ಲಿ ಎರಡನೇ ಸ್ಥಾನದಲ್ಲಿದೆ. ಅಂಗಾಂಗ ದಾನಿಗಳ ಯಾವುದೇ ತೊಂದರೆಗಳಾದಂತೆ ಸರ್ಕಾರ ಕೂಡ ನೋಡಿಕೊಳ್ಳಲಿದೆ.ಅಂಗಾಂಗ ದಾನಿಗಳ ಪರ ಸರ್ಕಾರ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದರು.