ಸಿದ್ದರಾಮಯ್ಯ ಅವರು ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ನಿರಾಕರಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆಗೆ ತೀವ್ರವಾಗಿ ಪ್ರತಿಕ್ರಿಯಿಸಿರುವ ನಟ ಜಗ್ಗೇಶ್, ಇದು ರಾಯರಿಗೆ ಮಾಡಿದ ಅಪಮಾನವಾಗಿದ್ದು, ಇಂತಹ ಕೃತ್ಯದಿಂದ ಯೋಗ ಕೊನೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.
ಸೋಮವಾರದಿಂದ ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋಗೆ ಪ್ರತಿಕ್ರಿಯಿಸಿರುವಗ ನಟ ಜಗ್ಗೇಶ್, ಯೋಗ ಕೊನೆಯಾಗುವ ದಿನಗಳು ಸಮೀಪಿಸಿವೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
25
ರಾಯರಿಗೆ ಅಪಮಾನ!
ರಾಯರನ್ನ ಅಪಮಾನ ಮಾಡಿದ ಯಾರು ಉದ್ಧಾರವಾದ ಇತಿಹಾಸವಿಲ್ಲ. ರಾಯರ ಸಣ್ಣ ಕೃಪೆ ನಮ್ಮ ಮೇಲೆ ಬೀಳಲಿ ಎಂದು ಕೋಟ್ಯಂತರ ಭಕ್ತವೃಂದ ಜಪ ತಪ ವೈರಾಗ್ಯ ಉಪವಾಸದಿಂದ ಸೇವೆ ಮಾಡುತ್ತಾರೆ. ಭಕ್ತಿಯಿಂದ ಬಂದದ್ದು ಹೀಗೆ ತಿರಸ್ಕರಿಸಿದ ಪ್ರಥಮ ವ್ಯಕ್ತಿಯನ್ನು ನಾನು ನನ್ನ ಬದುಕಲ್ಲಿ ಕಂಡಿದ್ದು, ರಾಯರಿದ್ದಾರೆ, ಎದ್ದು ಬರುತ್ತಾರೆ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
35
ಭಕ್ತಿಯಿಂದ ಪಡೆಯಬೇಕು!
ಕಾಯಬೇಕು. ಭಕ್ತಿಯಿಂದ ರಾಯರ ಭಕ್ತರು ರಾಯರ ವಿಗ್ರಹ ಅಥವ ಮೃತ್ತಿಗೆ ಯಾರಿಗಾದರು ನೀಡಿದಾಗ ಭಕ್ತಿಯಿಂದ ಪಡೆಯಬೇಕು. ಒಂದು ವೇಳೆ ಅದನ್ನು ತಿರಸ್ಕರಿಸಿದರೆ ಅಂತಹ ವ್ಯಕ್ತಿಗೆ ಯೋಗ ಕೊನೆ ಆಗುವ ದಿನಗಳು ಸಮೀಪಿಸಿದೆ ಎಂದರ್ಥ ಎಂದು ಎಕ್ಸ್ ಖಾತೆ ಮೂಲಕ ಜಗ್ಗೇಶ್ ವಿಡಿಯೋ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಿಎಂ ನಿವಾಸದಿಂದ ಹೊರಗೆ ಬರುತ್ತಿದ್ದಂತೆ ಕಾರ್‌ನಲ್ಲಿಯೇ ಕುಳಿತುಕೊಂಡು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಾರೆ. ಈ ಮಧ್ಯೆ ವ್ಯಕ್ತಿಯೊಬ್ಬರು ರಾಘವೇಂದ್ರ ಸ್ವಾಮಿಗಳ ಫೋಟೋ ನೀಡುತ್ತಾರೆ. ಆದ್ರೆ ಮುಖ್ಯಮಂತ್ರಿಗಳು ರಾಘವೇಂದ್ರ ಸ್ವಾಮಿಗಳ ಫೋಟೋ ಪಡೆದುಕೊಳ್ಳದೇ ಹಿಂದಿರುಗಿ ನೀಡುತ್ತಾರೆ.
ಇದೇ ವೇಳೆ ಮತ್ತೋರ್ವ ವ್ಯಕ್ತಿ ನೀಡುವ ಚಾಣಕ್ಯ ನೀತಿ ಹೆಸರಿನ ಪುಸ್ತಕವನ್ನು ಸಿಎಂ ಸಿದ್ದರಾಮಯ್ಯ ತೆಗೆದುಕೊಳ್ಳುತ್ತಾರೆ. ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿಗಳು ತೆರಳುತ್ತಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಸಿಎಂ ಅವರ ನಡೆ ಬಗ್ಗೆ ರಾಘವೇಂದ್ರ ಸ್ವಾಮಿಗಳ ಭಕ್ತರು ಬೇಸರ ವ್ಯಕ್ತಪಡಿಸಿದ್ದಾರೆ. ನಟ ಜಗ್ಗೇಶ್ ಕೂಡ ರಾಯರ ಭಕ್ತರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ