ಮಾಡ್ಯೂಲರ್‌ ICU ಲೋಕಾರ್ಪಣೆ ಮಾಡಿದ ಬಿಎಸ್‌ವೈ: ಇದು ದೇಶದಲ್ಲೇ ಮೊದಲು

Published : Feb 08, 2021, 03:27 PM IST

ಕೋವಿಡ್‌ನಂಥ ಸಂಕಷ್ಟ ಪರಿಸ್ಥಿತಿಯೂ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಲೋಕಾರ್ಪಣೆ ಮಾಡಿದರು. ಇದು ದೇಶದಲ್ಲೇ ಮೊದಲ ಪ್ರಯೋಗ.

PREV
17
ಮಾಡ್ಯೂಲರ್‌ ICU ಲೋಕಾರ್ಪಣೆ ಮಾಡಿದ ಬಿಎಸ್‌ವೈ: ಇದು ದೇಶದಲ್ಲೇ ಮೊದಲು

ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಮೂರು ತಿಂಗಳ ಕಾಲದಲ್ಲಿ ಸ್ಥಾಪಿಸಲಾಗಿರುವ 100 ಹಾಸಿಗೆಗಳ ಐಸಿಯು ಘಟಕವನ್ನು ಸಿಎಂ ಬಿಎಸ್ ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಿದರು.

27

ಮಾಡ್ಯೂಲರ್‌ ಐಸಿಯು ಎಂದರೇನು: ಸರಕು ಸಾಗಣೆ ಮಾಡುವ ಕಂಟೇನರ್ʼಗಳ ಮಾದರಿ ಇಟ್ಟುಕೊಂಡು ಈ ಐಸಿಯುಗಳನ್ನು ಸಿದ್ಧಪಡಿಸಲಾಗಿದ್ದು, ಒಟ್ಟು 100 ಹಾಸಿಗೆಗಳು ಲಭ್ಯ ಇರುತ್ತವೆ. ಪ್ರತೀ ಒಂದು ಕಂಟೇನರ್‌ʼನಲ್ಲಿ (ಐಸಿಯುನಲ್ಲಿ) ಐದು ಐಸಿಯು ಹಾಸಿಗೆಗಳು ಇವೆ. ಎಲ್ಲ ಮಾಡ್ಯೂಲರ್‌ ಐಸಿಯುಗಳ ನಿರ್ವಹಣೆಗೆ ತಜ್ಞ ವೈದ್ಯರು, ಅರೆವೈದ್ಯ ಸಿಬ್ಬಂದಿ, ನರ್ಸುಗಳು ಸೇರಿ ಒಟ್ಟು 150 ಮಂದಿ ಸಿಬ್ಬಂದಿಯನ್ನು ನೇಮಿಸಲಾಗಿದೆ.

37

ಕೋವಿಡ್‌ ಮಾತ್ರವಲ್ಲದೆ ಯಾವುದೇ ರೀತಿಯ ಹೆಲ್ತ್‌ ಎಮರ್ಜೆನ್ಸಿಯಂಥ ಸಂದರ್ಭಗಳಲ್ಲಿ ಇಂಥ ಮಾಡ್ಯೂಲರ್‌ ಐಸಿಯುಗಳು ಹೆಚ್ಚು ಪರಿಣಾಮಕಾರಿ. ಇವುಗಳನ್ನು ಎಲ್ಲಿಗೆ ಬೇಕಾದರೂ ಸುಲಭವಾಗಿ ಸಾಗಿಸಿ ಇಡಬಹುದು. ಪ್ರತಿ ಐಸಿಯು ಒಂದರ ಗಾತ್ರ 12.135 X 3.3 X 2.62 ಮೀಟರ್ ಇದ್ದು, ಯಾವುದೇ ವಾತಾವರಣಕ್ಕೂ ಸರಿಹೊಂದುವ ತಾಂತ್ರಿಕ ಸೌಲಭ್ಯ, ಕುಶಲತೆಯನ್ನು ಇವು ಹೊಂದಿರುತ್ತವೆ.

47

 ಹೈ ಸ್ಪೀಡ್‌ ವೈಫೈ, ಪ್ರತ್ಯೇಕ ಲ್ಯಾನ್‌ ಕೇಬಲ್‌, ಎಚ್‌ಡಿ ಕ್ಯಾಮೆರಾಗಳು, ಸೆಂಟ್ರಲ್‌ ಮಾನಿಟರಿಂಗ್‌ ಸಿಸ್ಟಂ, ಪ್ರತ್ಯೇಕ ನೀರು ಮತ್ತು ಒಳಚರಂಡಿ ವ್ಯವಸ್ಥೆ ಪ್ರತಿ ಮಾಡ್ಯೂಲರ್‌ ಐಸಿಯುಗೂ ಇರುತ್ತದೆ. ಜತೆಗೆ, ಸೆಂಟ್ರಲ್‌ ಮಾನಿಟರಿಂಗ್‌ ಸಿಸ್ಟಮ್‌ ಮೂಲಕ ವೈದ್ಯರು ಎಲ್ಲೇ ಇದ್ದರೂ ಸುಲಭವಾಗಿ ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಚಿಕಿತ್ಸೆ ನೀಡಬಹುದು.

57

ಲಿಕ್ವಿಡ್‌ ಆಕ್ಸಿಜನ್‌ (ದ್ರವರೂಪದ ಆಮ್ಲಜನಕ) ವ್ಯವಸ್ಥೆ ಇರುತ್ತದೆ. ಇದರ ಪ್ರಮಾಣವನ್ನು 2,000 ಲೀಟರುಗಳಿಂದ 8,000 ಲೀಟರಿಗೆ ಹೆಚ್ಚಿಸಲಾಗಿದೆ. ಹವಾನಿಯಂತ್ರಿತ ವ್ಯವಸ್ಥೆ ಜತೆಗೆ, ಶುದ್ಧ ಗಾಳಿ ತುಂಬಿಸಿ ಕಂಪ್ಲೀಟ್ ಏರ್ʼಟೈಟ್ ಮಾಡಲಾಗಿರುತ್ತದೆ. ನಮ್ಮ ದೇಶದಲ್ಲೇ ಇದೇ ಮೊದಲ ಪ್ರಯೋಗ. ತುರ್ತು ಸಂದರ್ಭಗಳು, ಅದರಲ್ಲೂ ನೈಸರ್ಗಿಕ ವಿಕೋಪದಂಥ ದುರಂತಗಳು ಎದುರಾದಾಗ ಇಂಥ ಐಸಿಯುಗಳು ಹೆಚ್ಚು ಪರಿಣಾಮಕಾರಿ. ಎಲ್ಲಿಗೆ ಬೇಕಾದರೂ ಸುಲಭವಾಗಿ ಸಾಗಿಸಬಹುದು.

67

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಅತ್ಯಂತ ಕಡಿಮೆ ಅವಧಿಯಲ್ಲಿ ಮಾಡ್ಯೂಲರ್‌ ಐಸಿಯು ಸ್ಥಾಪಿಸಿರುವುದು ಶ್ಲಾಘನೀಯ. ಇದರಿಂದ ಈ ಭಾಗದ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

77

ಇದೇ ವೇಳೆ ಎಲ್ಲ ದಾನಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ, ದಿನೇಶ್ ಗುಂಡೂರಾವ್ ಹಾಜರಿದ್ದರು.

click me!

Recommended Stories