Colonel sophia qureshi: ಕರ್ನಲ್ ಸೋಫಿಯಾ ಖುರೇಷಿ ಅವರ ಪತಿ ತಾಜುದ್ದೀನ್ ಬಾಗೇವಾಡಿ ಅವರು ಸಹ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತಿ ತಾಜುದ್ದೀನ್ ಅವರು ಬೆಳಗಾವಿ ಜಿಲ್ಲೆಯ ಗೋಕಾಲ್ ತಾಲೂಕಿನ ಕೊಣ್ಣೂರು ಗ್ರಾಮದ ನಿವಾಸಿಯಾಗಿದ್ದಾರೆ.
ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ ಆಪರೇಷನ್ ಸಿಂದೂರ ಹೆಸರಿನ ಏರಸ್ಟ್ರೈಕ್ ಯಶಸ್ವಿ ಕಾರ್ಯಾಚರಣೆ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಕರ್ನಾಟಕದ ಬೆಳಗಾವಿಯರು.
26
ಮಹಿಳಾ ಸೇನಾಧಿಕಾರಿಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ ಎಂಬ ವಿಷಯ ತಿಳಿದು ಕನ್ನಡಿಗರಿಗೂ ಹೆಮ್ಮೆ ವ್ಯಕ್ತಪಡಿಸುತ್ತಿದ್ದಾರೆ. ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಸೋಫಿಯಾ ಖುರೇಷಿ ಪಾತ್ರವಾಗಿದ್ದಾರೆ.
36
ಸೋಫೀಯಾ ಪತಿ ತಾಜುದ್ದೀನ್ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರು. ಪತಿ, ಪತ್ನಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಸೋಫಿಯಾ ಖುರೇಷಿ ಅವರ ಪತಿ ತಾಜುದ್ದೀನ್ ಬಾಗೇವಾಡಿ ಸಹ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. 2015 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾಜುದ್ದೀನ್ ಸೋಫಿಯಾ ಅವರದ್ದು ಪ್ರೇಮ ವಿವಾಹ. ಕರ್ನಲ್ ಸೋಫಿಯಾ ಮೂಲತಃ ಗುಜರಾತ್ ರಾಜ್ಯದ ಬರೋಡಾ ನಿವಾಸಿಯಾಗಿದ್ದಾರೆ.
56
ಸದ್ಯ ಸೋಫಿಯಾ ಖುರೇಷಿ ಜಮ್ಮುವಿನಲ್ಲಿ ಕರ್ನಲ್ ಆಗಿ, ಪತಿ ತಾಜುದ್ದೀನಿ ಬಾಗೇವಾಡಿ ಸಹ ಜಾನ್ಸಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಆಪರೇಷನ್ ಸಿಂದೂರದ ಮಾಹಿತಿಯನ್ನು ಕರ್ನಲ್ ಸೋಫಿಯಾ ಖುರೇಷಿ ಜಗತ್ತಿಗೆ ತಿಳಿಸಿದ್ದರು.
66
ಮಗಳ ಕುರಿತು ಹೆಮ್ಮೆ ವ್ಯಕ್ತಪಡಿಸಿದ ಸೋಫಿಯಾ ಖುರೇಷಿ ತಂದೆ ತಾಜುದ್ದೀನ್ ಮೊಹಮ್ಮದ್ ಖುರೇಷಿ, ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡುವುದಾಗಿ ಹೇಳಿದ್ದಾರೆ. ನನಗೆ ವಯಸ್ಸಾಗಿದೆ. ಈಗ ಹೆಚ್ಚು ನಡೆದಾಡಲು ಸಾಧ್ಯವಿಲ್ಲ. ಆದರೆ ಪಾಕಿಸ್ತಾನ ವಿಚಾರದಲ್ಲಿ ನನಗೆ ಅವಕಾಶ ಸಿಕ್ಕಿದರೆ, ಪಾಕಿಸ್ತಾನವನ್ನು ಈ ಭೂಪಟದಿಂದ ಅಳಿಸಿ ಬಿಡುತ್ತೇನೆ ಎಂದಿದ್ದಾರೆ.