2019ರ ಏಪ್ರಿಲ್ 1ಕ್ಕೂ ಮುನ್ನ ನೋಂದಣಿಯಾದ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ಈ ನಿಯಮವನ್ನು ಹಿಂಪಡೆದಿದೆ ಎಂಬ ಸುಳ್ಳು ಸುದ್ದಿಗಳನ್ನು ನಂಬದಂತೆ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದ್ದು, ಹೈಕೋರ್ಟ್ ಕೂಡ ಯಾವುದೇ ತಡೆಯಾಜ್ಞೆ ನೀಡಿಲ್ಲ ಎಂದು ತಿಳಿಸಿದೆ.
ರಾಜ್ಯದಲ್ಲಿ ಹಳೆಯ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ. ಈ ಬಗ್ಗೆ ಹರಿದಾಡುತ್ತಿರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಫಲಕ ಅಳವಡಿಕೆ ಮಾಡಬೇಕು ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
25
ವದಂತಿ ನಂಬಬೇಡಿ
ಕೆಲವು ಮಾಧ್ಯಮಗಳಲ್ಲಿ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ ನಿಯಮವನ್ನು ಸಾರಿಗೆ ಇಲಾಖೆ ಹಿಂಪಡೆದಿದೆ. ಹೀಗಾಗಿ ಕಡ್ಡಾಯವಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದ್ದು, ಯಾವುದೇ ವದಂತಿ ನಂಬಬೇಡಿ ಎಂದು ಮನವಿ ಮಾಡಿದೆ.
35
ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ
2019ರ ಏ.1ಕ್ಕಿಂತ ಮುಂಚಿತವಾಗಿ ನೋಂದಣಿಯಾದ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಈ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಎಚ್‌ಎಸ್ಆರ್‌ಪಿ ಅಳವಡಿಕೆ ಸಂಬಂಧ ಹೈಕೋರ್ಟ್ ರಿಟ್ ಅರ್ಜಿ ಆಲಿಸಿ ಪ್ರಕರಣ ಇತ್ಯರ್ಥಪಡಿಸುವಂತೆ ಏಕಸದಸ್ಯ ಪೀಠಕ್ಕೆ ವರ್ಗಾಯಿಸಿದೆ. ಆ ಆದೇಶದಲ್ಲೂ ಸಾರಿಗೆ ಇಲಾಖೆ ಆದೇಶಕ್ಕೆ ಯಾವುದೇ ತಡೆಯಾಜ್ಞೆ ನೀಡಿಲ್ಲ. ಬದಲಿಗೆ ಎಚ್ಎಸ್‌ಆರ್‌ಪಿ ವಿಷಯದಲ್ಲಿ ತರಾತುರಿ ಕ್ರಮ ಕೈಗೊಳ್ಳದಂತೆ ನಿರ್ದೇಶಿಸಿದೆ. ತಡೆಯಾಜ್ಞೆ ನೀಡದ ಹಿನ್ನೆಲೆಯಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ ನಿಯಮ ಮುಂದುವರೆದಿದೆ ಎಂದು ಸಾರಿಗೆ ಇಲಾಖೆ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ.
55
ಸ್ಪಷ್ಟನೆಯೇನು?:
ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯವಲ್ಲ ಎಂಬ ಸುದ್ದಿ ಪ್ರಸಾರ ಆಗುತ್ತಿರುವುದು ಇಲಾಖೆ ಗಮನಕ್ಕೆ ಬಂದಿದೆ. ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 50ರಡಿ ಕೇಂದ್ರ ಸರ್ಕಾರ 2018ರ ಡಿ.4 ರಂದು ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ