ಕೊರೋನಾ ಲಸಿಕೆ ಕುರಿತು ಮಹತ್ವದ ಮಾಹಿತಿ ಕೊಟ್ಟ ಸಚಿವ ಸುಧಾಕರ್

First Published | Jan 16, 2021, 5:22 PM IST

ಬೆಂಗಳೂರು ಮೆಡಿಕಲ್ ಕಾಲೇಜಿನ ಪಿಎಂಎಸ್ ಎಸ್‍ವೈ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ, ಬಿಡದಿಯ ಶ್ರೀಮತಿ ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡಲಾಯಿತು. ಇನ್ನು ಈ ಲಸಿಕೆ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಅವರು ಮಹತ್ವದ ಮಾಹಿತಿಯನ್ನು ಕೊಟ್ಟರು.

ಬೆಂಗಳೂರು ಮೆಡಿಕಲ್ ಕಾಲೇಜಿನ ಪಿಎಂಎಸ್ ಎಸ್‍ವೈ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.
undefined
ನಂತರ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್,ಇದು ಐತಿಹಾಸಿಕ ದಿನವಾಗಿದ್ದು, ದಾಖಲೆಯಂತಿದೆ. ಬೇರೆ ರೋಗಗಳಿಗೆ ಲಸಿಕೆ ಪಡೆಯಲು ವರ್ಷಗಳು ತಗುಲಿದೆ. ಆದರೆ ಹತ್ತೇ ತಿಂಗಳಲ್ಲಿ ಕೊರೊನಾ ಲಸಿಕೆ ಅಭಿವೃದ್ಧಿಪಡಿಸಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
undefined

Latest Videos


ಮೊದಲು ಸಂಶೋಧಕರಿಗೆ, ಸಂಸ್ಥೆಗಳಿಗೆ ಭಾರತೀಯರು ಆಭಾರಿಯಾಗಿದ್ದಾರೆ. ಇವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ರಾಜ್ಯದಲ್ಲಿ ಮಾರ್ಗದರ್ಶನ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದಗಳು ಎಂದರು.
undefined
ರಾಜ್ಯದ 243 ಸ್ಥಳಗಳಲ್ಲಿ ಕೊರೊನಾ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಿದ್ದು, ಇವತ್ತು ಒಂದೇ ದಿನ 24,300 ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು
undefined
ಖ್ಯಾತ ವೈದ್ಯರು ಲಸಿಕೆ ಪಡೆಯುವ ಮೂಲಕ ಸಾರ್ವಜನಿಕರಲ್ಲಿರುವ ಅಂಜಿಕೆ ನಿವಾರಿಸಲಾಗುತ್ತಿದೆ. ಈ ಲಸಿಕೆ ಅತ್ಯಂತ ಸಮರ್ಪಕವಾಗಿರುವುದಕ್ಕೆ ವೈದ್ಯರು ಲಸಿಕೆ ಪಡೆದಿದ್ದಾರೆ ಎಂಬುದನ್ನು ಜನರು ತಿಳಿಯಬೇಕು ಎಂದು ಹೇಳಿದರು.
undefined
ಸರ್ಕಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಮಾಹಿತಿ ಮಾತ್ರ ಅಧಿಕೃತವಾಗಿದೆ. ಬೇರೆ ಕಡೆ ಪ್ರಕಟಿಸುವ ತಪ್ಪು ಮಾಹಿತಿಯನ್ನು ಜನರು ನಂಬಬಾರದು ಎಂದು ಮನವಿ ಮಾಡಿದರು.
undefined
ಆತಂಕ ಪಡಬೇಕಿಲ್ಲ. ವಿದೇಶಗಳಲ್ಲೂ ಈ ಲಸಿಕೆಗೆ ಬೇಡಿಕೆಯಿದ್ದು, ಅತ್ಯಂತ ಕಡಿಮೆ ದರದ ಲಸಿಕೆಯಾಗಿದೆ. ಕೇವಲ 210 ರೂ. ನಲ್ಲಿ ಲಸಿಕೆ ಹಾಕಿಸಿಕೊಳ್ಳಬಹುದು. ವಿದೇಶಗಳಲ್ಲಿ 2-3 ಸಾವಿರ ರೂ. ದರವಿದೆ ಎಂದು ಮಾಹಿತಿ ನೀಡಿದರು.
undefined
click me!