ಸಿಲಿಂಡ‌ರ್ ಬೆಲೆ ಹೆಚ್ಚಳ ಶರಣಾಗತಿಯ ಫಲ: ಮೋದಿ ಅವಧಿಯಲ್ಲಿ ದೇಶದ ಸಾಲ 218 ಲಕ್ಷ ಕೋಟಿ: ಸಿದ್ದರಾಮಯ್ಯ

Published : Mar 08, 2026, 07:38 AM IST

ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದು, ಇದು ಮೋದಿ ಸರ್ಕಾರದ ವಿಫಲ ವಿದೇಶಾಂಗ ನೀತಿಯ ಪರಿಣಾಮ ಎಂದು ಟೀಕಿಸಿದ್ದಾರೆ. ದೇಶದ ಮಾನ ಕಳೆದ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

PREV
15
ಎಲ್‌ಪಿಜಿ ಸಿಲಿಂಡರ್ ದರ ದರ 60 ಹೆಚ್ಚಿಸಿರುವುದು ನೆಲಕ್ಕೆ ಬಿದವನಿಗೆ ಒದಂತಾಗಿದೆ : ಸಿದ್ದು

ಬೆಂಗಳೂರು: ದೇಶದ ಬಡ, ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿರುವಾಗ ಪ್ರಧಾನಿ ಮೋದಿ ಸರ್ಕಾರ ಎಲ್‌ಪಿಜಿ ಸಿಲಿಂಡರ್ ದರ ದರ 60 ಹೆಚ್ಚಿಸಿರುವುದು ನೆಲಕ್ಕೆ ಬಿದವನಿಗೆ ಒದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಸಿಲಿಂಡ‌ರ್ ಬೆಲೆ ಏರಿಕೆ ಅನಿವಾರ್ಯವಾಗಿರಲಿಲ್ಲ. ಶರಣಾಗತಿಯೇ ವಿದೇಶಾಂಗ ನೀತಿ, ರಾಜತಾಂತ್ರಿಕತೆ ಎಂಬುದು ಪ್ರದರ್ಶನದ ವಸ್ತು ಎಂದು ತಿಳಿದಿರುವುದರ ಫಲವೇ ಈ ದರ ಏರಿಕೆ. ಜಾಗತಿಕ ಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿಯವರು ಬಹಿರಂಗವಾಗಿ ದೇಶದ ಜನರ ಕ್ಷಮೆಯಾಚಿಸಿ, ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

25
ಭಾರತದ ವ್ಯೂಹಾತ್ಮಕ ಸ್ವಾತಂತ್ರ್ಯವನ್ನು ಬೇರೊಂದು ರಾಷ್ಟ್ರದ ಪಾದದಡಿ ಇಟ್ಟಿದ್ದಾರೆ: ಸಿದ್ದು

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರು ಅಮೆರಿಕದ ಮಾತುಗಳಿಗೆ ಮೂಕರಂತೆ ತಲೆಯಾಡಿಸುವ ಮೂಲಕ ಭಾರತದ ವ್ಯೂಹಾತ್ಮಕ ಸ್ವಾತಂತ್ರ್ಯವನ್ನು ಬೇರೊಂದು ರಾಷ್ಟ್ರದ ಪಾದದಡಿ ಇಟ್ಟಿದ್ದಾರೆ. ರಷ್ಯಾ ಹಾಗೂ ಇರಾನ್‌ನಂಥ ದೇಶಗಳೊಂದಿಗಿನ ಭಾರತದ ದೀರ್ಘ ಕಾಲೀನ ಇಂಧನ ಸಹಭಾಗಿತ್ವ ಹಾಳುಗೆಡವಿದ್ದಾರೆ ಎಂದು ಟೀಕಿಸಿದ್ದಾರೆ.

ಜವಾಹರಲಾಲ್ ನೆಹರೂ ಅವರ ಪ್ರಕಾರ 'ವಿದೇಶಾಂಗ ನೀತಿಯು ಆರ್ಥಿಕ ನೀತಿಯ ಪರಿಣಾಮವಾಗಿದೆ'. ನೆಹರೂ ಅವರು 7-8 ದಶಕಗಳ ಹಿಂದೆಯೇ ನೀಡಿದ್ದ ಎಚ್ಚರಿಕೆ ಇಂದು ಅಕ್ಷರಶಃ ಸತ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತೀಚೆಗೆ ತಮ್ಮ ಪುಸ್ತಕದಲ್ಲಿ ಮಾಜಿ ಸೇನಾಧಿಕಾರಿ ಜನರಲ್ ಎಂ.ಎಂ.ನರವಣೆ ಅವರು ಭಾರತದ ವಿದೇ ಶಾಂಗ ನೀತಿ ನಿರ್ಧಾರಗಳಲ್ಲಿ ತಿಳಿವಳಿಕೆಯ ಕೊರತೆ ಬಗ್ಗೆ ಗಂಭೀರ ಆತಂಕ ವ್ಯಕ್ತಪಡಿಸಿದ್ದರು ಎಂದಿದ್ದಾರೆ.

35
ಪ್ರಧಾನಿ ಮೋದಿ ಅವರಿಗೆ ಎಫ್ ಸ್ಟೀನ್ ಫೈಲ್ಸ್‌ನ ಬಗ್ಗೆ ಭಯ: ಸಿದ್ದು

ಭಾರತದ ಇಂದಿನ ವಿದೇಶಾಂಗ ನೀತಿ ವಿಫಲವಾಗಿದೆ. ಇದು ಪ್ರಧಾನಿ ಮೋದಿ ಅವರಿಗೆ ಎಫ್ ಸ್ಟೀನ್ ಫೈಲ್ಸ್‌ನ ಬಗೆಗಿನ ಭಯ ಮತ್ತು ರಾಜತಾಂತ್ರಿಕ ತೀರ್ಮಾನಗಳ ಬಗ್ಗೆ ಇರುವ ಅಜ್ಞಾನ ತೋರಿಸುತ್ತದೆ. ಪ್ರಧಾನಿಗಳು ರಾಜತಾಂತ್ರಿಕ ವೈಫಲ್ಯಕ್ಕೆ ಕೋಟ್ಯಂತರ ಭಾರತೀಯರು ಯಾಕೆ ಬೆಲೆ ತೆರಬೇಕು ಎನ್ನುವುದನ್ನು ತಿಳಿಸಲಿ, ಜಾಗತಿಕ ಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿಯವರು ಬಹಿರಂಗವಾಗಿ ದೇಶದ ಜನರ ಕ್ಷಮೆಯಾಚಿಸಲಿ ಮತ್ತು ರಾಜೀನಾಮೆ ನೀಡಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

45
ಮೋದಿಯ ಅವಧಿಯಲ್ಲಿ ದೇಶದ ಸಾಲ ₹218 ಲಕ್ಷ ಕೋಟಿ: ಸಿದ್ದು

ಇನ್ನೊಂದೆಡೆ ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರದ ಸಾಲದ ಪ್ರಮಾಣ ₹218 ಲಕ್ಷ ಕೋಟಿ ಇದೆ. ಮೋದಿಯವರು ಅಧಿಕಾರಕ್ಕೆ ಬಂದ ನಂತರ 2165 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದು ಸದರಿ ಕಾಯ್ದೆಯ ಪ್ರಕಾರ ಶೇ.55.6ರಷ್ಟಿದೆ. ಆದರೆ, ನಮ್ಮ ರಾಜ್ಯದ ಸಾಲದ ಪ್ರಮಾಣ, ಆರ್ಥಿಕ ಹೊಣೆಗಾರಿಕೆ ಕಾಯ್ದೆ ತಿಳಿಸಿರುವ ಮಾನ ದಂಡಗಳ ಮಿತಿಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ:  ಬಳ್ಳಾರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯ ಹುಚ್ಚಾಟ: ಓರ್ವ ಸಾವು, ವಾರ್ಡನ್ ಸೇರಿ 7 ಜನರಿಗೆ ಗಾಯ

55
ಅಭಿವೃದ್ಧಿಗಾಗಿ ಸಾಲ ಮಾಡಬೇಕಾಗುತ್ತದೆ: ಸಿದ್ದು

ಮೈಸೂರು ತಾಲೂಕು ಪಿಲ್ಲಹಳ್ಳಿಯ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಬಜೆಟ್ ಬಗೆಗಿನ ಬಿಜೆಪಿ ಟೀಕೆ ಕುರಿತು ಪ್ರತಿಕ್ರಿಯಿಸಿ, ಅಭಿವೃದ್ಧಿಗಾಗಿ ಸಾಲ ಮಾಡಬೇಕಾಗುತ್ತದೆ. ಹೀಗಾಗಿ, ಸಾಲ ಮಾಡಿದ್ದೇನೆ. ರಾಜ್ಯದ ಮಿತಿಯ ಒಳಗಡೆ ಸಾಲ ಮಾಡಿದ್ದೇನೆ. ಸಾಲದಿಂದ ರಾಜ್ಯದ ಜನರಿಗೆ ಹೊರೆಯಾಗಿಲ್ಲ. ಆದರೆ, ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿದ ಅನ್ಯಾಯದಿಂದ ರಾಜ್ಯದ ಜನರಿಗೆ ಹೊರೆಯಾಗಿದೆ ಎಂದರು.

ಇದನ್ನೂ ಓದಿ: ಕೇವಲ 4 ಲಕ್ಷ ವೆಚ್ಚದಲ್ಲಿ ಹಳೆಯ ಮಾರುತಿ 800 ಕಾರಿಗೆ ಲ್ಯಾಂಬೋರ್ಘಿನಿ ರೂಪ ಕೊಟ್ಟ ಯುವಕ: ಮೆಕಾನಿಕ್‌ನ ಸ್ಕಿಲ್‌ಗೆ ನೆಟ್ಟಿಗರು ಫಿದಾ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories