ದಂಡಂ ದಶಗುಣಂ ನಟಿ ರಮ್ಯಾ ಬೆನ್ನಿಗೆ ನಿಂತ FIRE; ನೇರವಾಗಿ ಸರ್ಕಾರಕ್ಕೆ ಹೋಯ್ತು ಪತ್ರ

Published : Jul 28, 2025, 04:49 PM ISTUpdated : Jul 28, 2025, 04:51 PM IST

Actress Ramya And Darshan Fans: ನಟಿ ರಮ್ಯಾ ಅವರ ಸಾಮಾಜಿಕ ಜಾಲತಾಣ ಪೋಸ್ಟ್‌ಗೆ ಅಸಭ್ಯ ಕಾಮೆಂಟ್‌ಗಳನ್ನು ಖಂಡಿಸಿ FIRE ಸಂಸ್ಥೆ ಗೃಹ ಸಚಿವರಿಗೆ ಪತ್ರ ಬರೆದಿದೆ. ದರ್ಶನ್ ಅಭಿಮಾನಿಗಳೆಂದು ಹೇಳಲಾದವರಿಂದ ಈ ಟ್ರೋಲಿಂಗ್ ನಡೆದಿದ್ದು, ಪ್ರಥಮ್ ಸೇರಿದಂತೆ ಹಲವರು ರಮ್ಯಾ ಪರ ನಿಂತಿದ್ದಾರೆ.

PREV
16

ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ ಅವರ ಪೋಸ್ಟ್‌ಗೆ ಕಿಡಿಗೇಡಿಗಳು ಅಸಭ್ಯವಾಗಿ ಕಮೆಂಟ್ ಹಾಕುತ್ತಿದ್ದಾರೆ. ಈ ಸಂಬಂಧ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು, ನಟ ದರ್ಶನ್ ಅಭಿಮಾನಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

26

ಇತ್ತೀಚೆಗೆ ನಟ ದರ್ಶನ್ ಆಂಡ್ ಗ್ಯಾಂಗ್ ಜಾಮೀನಿನ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆದಿತ್ತು. ಈ ವಿಚಾರಣೆ ಸಂಬಂಧ ಕುರಿತ ಕೆಲವು ಲೇಖನಗಳನ್ನು ರಮ್ಯಾ ಶೇರ್ ಮಾಡಿಕೊಂಡಿದ್ದರು. ಈ ಪೋಸ್ಟ್ ಶೇರ್ ಮಾಡಿಕೊಂಡ ನಂತರ ನಟ ದರ್ಶನ್ ಅಭಿಮಾನಿಗಳು ಎಂದು ಕರೆದುಕೊಳ್ಳುವ ಪುಂಡರು ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ ಎಂದು ರಮ್ಯಾ ಆರೋಪಿಸಿದ್ದಾರೆ.

36

ಇದೀಗ ರಮ್ಯಾ ಧ್ವನಿಗೆ ಒಬ್ಬೊಬ್ಬರೇ ಸಾಥ್ ನೀಡುತ್ತಿದ್ದಾರೆ. ಬಿಗ್‌ಬಾಸ್ ವಿನ್ನರ್, ನಟ ಪ್ರಥಮ್, ಪ್ರತಿಯೊಬ್ಬರು ರಮ್ಯಾ ಪರವಾಗಿ ನಿಲ್ಲಬೇಕೆಂದು ಕರೆ ನೀಡಿದ್ದಾರೆ. ಇದೀಗ ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ & ಈಕ್ವಾಲಿಟಿ ಸಂಸ್ಥೆ, ನಟಿಯ ವಿರುದ್ಧ ಟ್ರೋಲಿಂಗ್ ಖಂಡಿಸಿದೆ. ಈ ಸಂಬಂಧ ಗೃಹ ಸಚಿವರಿಗೆ FIRE ಸಂಸ್ಥೆ ಪತ್ರವನ್ನು ಬರೆದಿದೆ

46

ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ & ಈಕ್ವಾಲಿಟಿ (FIRE) ಸಂಸ್ಥೆಯು ನಟಿ ಹಾಗೂ ಮಾಜಿ ಸಂಸದರಾದ ರಮ್ಯಾ (ದಿವ್ಯ ಸ್ಪಂದನ) ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಶ್ಲೀ ಲ ಹಾಗೂ ಮಹಿಳಾವಿರೋಧಿ ಟ್ರೋಲಿಂಗ್ ಅನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ರಮ್ಯಾರವರಿಗೆ ನಮ್ಮ ಬೆಂಬಲವನ್ನು ವ್ಯಕ್ತಪಡಿಸುತ್ತದೆ

56

ಭಾರತದ ಸಂವಿಧಾನದಲ್ಲಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮಗಳ ಹಕ್ಕುಗಳು (ಆರ್ಟಿಕಲ್ 19) ನಮ್ಮ ಪ್ರಜಾಪ್ರಭುತ್ವದ ಬಾಳಿಗೆ ಆಧಾರಸ್ತಂಭವಾಗಿವೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು ಅವುಗಳ ನಡುವೆ ಸಂವಾದ ನಡೆಯಬೇಕು. ಆದರೆ ಆ ಸಂವಾದ ಸಭ್ಯತೆಯೊಂದಿಗೆ ಮತ್ತು ಗೌರವಪೂರ್ಣ ವಾಗಿ ನಡೆಯಬೇಕು. ರಮ್ಯಾ ಅವರ ವಿರುದ್ಧ ನಡೆಯುತ್ತಿರುವ ದ್ವೇಷಪೂರಿತ ದೌರ್ಜನ್ಯ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅಪಮಾನವಾಗಿದೆ ಮತ್ತು ಇದು ಆನ್ ಲೈನ್ ಮಹಿಳಾ ದ್ವೇಷದ ಆಳವಾದ ಸಮಸ್ಯೆಯನ್ನು ತೋರಿಸುತ್ತದೆ.

66

ಮಹಿಳೆಯರ ವಿರುದ್ಧದ ಅವಮಾನಕಾರಕ ಸಾಮಾಜಿಕ ಜಾಲತಾಣ ಪೋಸ್ಟ್ ಗಳು ಭಾರತ ದಂಡ ಸಂಹಿತೆಯ ಸೆಕ್ಷನ್ ಗಳು (499, 500, 505(2), 509) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ (ಸೈಬರ್ ಕಾನೂನು) ಅಡಿಯಲ್ಲಿ ದಂಡನೀಯವಾಗಿವೆ. ಕರ್ನಾಟಕ ಗೃಹ ಇಲಾಖೆ ಮತ್ತು ಸೈಬರ್ ಕ್ರೈ ಮ್ ಪ್ರಾಧಿಕಾರಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು FIRE ಸಂಸ್ಥೆಯು ಒತ್ತಾಯಿಸುತ್ತಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದೆ.

Read more Photos on
click me!

Recommended Stories