ಮಾದವಿ ಲತಾ, ಪ್ರತಾಪ್ ಸಿಂಹ, ಸಿ.ಟಿ ರವಿ ಭಾಗಿ.
ನಾಳೆ ಸಾವಿರಾರು ದತ್ತಮಾಲಾಧಾರಿಗಳು ನಗರದಲ್ಲಿ ಬೃಹತ್ ಶೋಭಾಯಾತ್ರೆ, ಧರ್ಮಸಭೆ ನಡೆಸಿ ಇರುಮುಡಿ ಹೊತ್ತು ದತ್ತಾತ್ರೇಯ ಹಾಗೂ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ದಾಖಲೆಗಳ ಪ್ರಕಾರ ದತ್ತಪೀಠ ಹಿಂದೂ ಪೀಠವೇ ಆಗಿದೆ. ದತ್ತಪೀಠವೇ ಬೇರೆ, ದರ್ಗಾವೇ ಬೇರೆ. ಶೀಘ್ರವೇ ದತ್ತಪೀಠವನ್ನು ಹಿಂದುಗಳ ಪೀಠವೆಂದು ಘೋಷಿಸಬೇಕೆಂದು ಮಾಲಾಧಾರಿಗಳು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕಳೆದ ಏಳು ದಿನಗಳಿಂದ ನಡೆಯುತ್ತಿರೋ ದತ್ತಮಾಲಾ ಅಭಿಯಾನಕ್ಕೆ ನಾಳೆ ಅಂತಿಮ ತೆರೆ ಬೀಳಲಿದೆ. ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಚಿಕ್ಕಮಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಶೋಭಾಯಾತ್ರೆ ನಡೆಸಿ ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ.ನಂತರ ನಡೆಯುವ ಧಾರ್ಮಿಕ ಸಭೆಯಲ್ಲಿ ಹೈದಾರಬಾದ್ ನ ಮಾದವಿ ಲತಾ, ಮಾಜಿ ಸಂಸದ ಪ್ರತಾಪ್ ಸಿಂಹ, ಸಿ.ಟಿ ರವಿ ಸೇರಿದಂತೆ ಸ್ವಾಮೀಜಿ ಗಳು ಭಾಗಿಯಾಗಲಿದ್ದಾರೆ.