RSS ಅತ್ಯುನ್ನತ ಹುದ್ದೆಗೇರಿದ ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ನಡೆದು ಬಂದ ಹಾದಿ

First Published | Mar 20, 2021, 2:44 PM IST

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌)  ಅತ್ಯುನ್ನತ ಹುದ್ದೆಗೆ ಕರ್ನಾಟಕದ  ದತ್ತಾತ್ರೇಯ ಹೊಸಬಾಳೆ ನೇಮಕವಾಗಿದ್ದಾರೆ. ಇವರು ಕರ್ನಾಟಕದಿಂದ ಈ ಹುದ್ದೆಗೆ ನೇಮಕವಾದ ಎರಡನೆಯವರು. ಈ ಮೊದಲು ಹೊ.ವೆ. ಶೇಷಾದ್ರಿ ಅವರು ಸರಕಾರ್ಯವಾಹರಾಗಿದ್ದರು. ಹಾಗಾದ್ರೆ ದತ್ತಾತ್ರೇಯ ಹೊಸಬಾಳೆ ಅವರಿಗೆ ದೊರೆತ ಹುದ್ದೆ ಯಾವುದು.? ಅವರ ಸಂಕ್ಷಿಪ್ತ ಪರಿಚಯ ಇಲ್ಲಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ನೂತನ 'ಸರಕಾರ್ಯವಾಹ' ಆಗಿ ದತ್ತಾತ್ರೇಯ ಹೊಸಬಾಳೆ ಅವರು ಆಯ್ಕೆಯಾಗಿದ್ದಾರೆ.
ಇಂದು (ಶನಿವಾರ) ಮಾಗಡಿ ರಸ್ತೆಯ ಚನ್ನೇನಹಳ್ಳಿಯಲ್ಲಿ ನಡೆದ ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ (ಎಬಿಪಿಎಸ್) ಸರಕಾರ್ಯವಾಹ ಆಗಿ ದತ್ತಾತ್ರೇಯ ಹೊಸಬಾಳೆ ಅವರನ್ನ ಆಯ್ಕೆ ಮಾಡಲಾಗಿದೆ.
Tap to resize

ಸಂಘದ ಸರಸಂಘಚಾಲಕರ ಹುದ್ದೆಯ ನಂತರದ ಹುದ್ದೆ ಇದಾಗಿದೆ. ಇವರು ಕರ್ನಾಟಕದಿಂದ ಈ ಹುದ್ದೆಗೆ ನೇಮಕವಾದ ಎರಡನೆಯವರು. ಈ ಮೊದಲು ಹೊ.ವೆ. ಶೇಷಾದ್ರಿ ಅವರು ಸರಕಾರ್ಯವಾಹರಾಗಿದ್ದರು.
ದತ್ತಾತ್ರೇಯ ಹೊಸಬಾಳೆ ಅವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹೊಸಬಾಳೆ ಗ್ರಾಮದವರು. ದತ್ತಾಜಿ ಎಂದೇ ಸಂಘದ ವಲಯದಲ್ಲಿ ಅವರನ್ನು ಗುರುತಿಸಿಕೊಂಡಿದ್ದಾರೆ. 1954ರ ಡಿ. ‌1ರಂದು ಜನಿಸಿದ ಅವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಸಾಗರದಲ್ಲಿ ಪಡೆದರು. ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಪಡೆದರು. ಅಲ್ಲಿ ಎಚ್. ನರಸಿಂಹಯ್ಯ ಅವರ ಒಡನಾಟ ಮತ್ತು ಮಾರ್ಗದರ್ಶನ ಪಡೆದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
1968ರಲ್ಲಿ ಅವರು ಆರ್‌ಎಸ್‌ಎಸ್‌ ಪ್ರವೇಶಿಸಿದ್ದರು. 1972ರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸದಸ್ಯರಾಗಿ, ಬಳಿಕ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ 15 ವರ್ಷ ಕೆಲಸ ಮಾಡಿದ್ದಾರೆ. ಸಂಘಟನೆ, ಸಾಮಾಜಿಕ ಸಮರಸತೆ, ಸಾಹಿತ್ಯ ಮತ್ತು ಕಲೆ ಹೊಸಬಾಳೆಯವರ ಆಸಕ್ತಿಯ ಕ್ಷೇತ್ರಗಳು. ಉತ್ತಮ ವಾಗ್ಮಿಗಳು, ಸಂಘಟನಾಕಾರರು ಆಗಿರುವ ಅವರು ಹಲವು ಲೇಖನಗಳನ್ನು ಬರೆದಿದ್ದಾರೆ.

Latest Videos

click me!