ಮೇಕೆದಾಟು ಡ್ಯಾಂ ಬಗ್ಗೆ ಶೀಘ್ರ ಕೇಂದ್ರ ಜತೆ ಮಾತುಕತೆ: ಅಶ್ವತ್ಥನಾರಾಯಣ

Kannadaprabha News   | Asianet News
Published : Aug 27, 2020, 08:03 AM IST

ಬೆಂಗಳೂರು(ಆ.27): ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿಕ ಶೇಖರಣಾ ಜಲಾಶಯ ನಿರ್ಮಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ಜತೆ ತ್ವರಿತವಾಗಿ ಮಾತುಕತೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

PREV
14
ಮೇಕೆದಾಟು ಡ್ಯಾಂ ಬಗ್ಗೆ ಶೀಘ್ರ ಕೇಂದ್ರ ಜತೆ ಮಾತುಕತೆ: ಅಶ್ವತ್ಥನಾರಾಯಣ

ಮೇಕೆದಾಟು ಯೊಜನೆ ಜಾರಿ ಸಂಬಂಧ ಎದುರಾಗಿರುವ ಸಮಸ್ಯೆಗಳ ಕುರಿತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಮುಂದಿನ ದಿನದಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಕೊರತೆ ಎದುರಾಗಬಾರದು ಎನ್ನುವ ಪ್ರಮುಖ ಉದ್ದೇಶವೂ ಈ ಯೋಜನೆ ಹಿಂದೆ ಇದೆ ಎಂದು ತಿಳಿಸಿದ ಅಶ್ವತ್ಥನಾರಾಯಣ 

24

ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರು ಈಗಾಗಲೇ ಎರಡು ಬಾರಿ ಕೇಂದ್ರ ಸಚಿವರ ಜತೆಗೂ ಮಾತುಕತೆ ನಡೆಸಿದ್ದು, ಅದಷ್ಟು ಬೇಗ ಒಪ್ಪಿಗೆ ಸಿಗುವ ವಿಶ್ವಾಸ ಇದೆ ಎಂದು ಟ್ವಿಟರ್‌ನಲ್ಲಿ ಹೇಳಿದ್ದಾರೆ.

34

ಸಮಗ್ರ ಯೋಜನಾ ವರದಿಯ ಪರಿಶೀಲನೆ ಕೇಂದ್ರ ಜಲ ಆಯೋಗದ ಮುಂದೆ ಇದೆ. ಅದನ್ನು ತ್ವರಿತವಾಗಿ ಮಾಡಿ ಮುಗಿಸುವಂತೆಯೂ ಆಯೋಗವನ್ನು ಕೋರಲಾಗುವುದು. ಹಾಗೆಯೇ ಅರಣ್ಯ ಮತ್ತು ಪರಿಸರ ಸಚಿವಾಲಯದ ಒಪ್ಪಿಗೆ ಕೂಡ ಬೇಕಾಗಿದ್ದು, ಎಲ್ಲವನ್ನೂ ತ್ವರಿತವಾಗಿ ಪಡೆಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ. 

44

ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಕಾವೇರಿ ನೀರು ಹಂಚಿಕೆಗೆ ಈ ಯೋಜನೆಯಿಂದ ಹೆಚ್ಚು ಅನುಕೂಲವಾಗಲಿದೆ. ಹಾಗೆಯೇ 400 ಮೆಗಾವಾಟ್‌ ವಿದ್ಯುತ್‌ ಉತ್ಪಾದಿಸಬಹುದು. ಒಟ್ಟಾರೆ ಈ ಯೋಜನೆಗೆ .9 ಸಾವಿರ ಕೋಟಿ ಖರ್ಚಾಗುವ ಅಂದಾಜು ಮಾಡಿದ್ದು, ಕಾವೇರಿ ಅಚ್ಚುಕಟ್ಟು ಪ್ರದೇಶದ ರಾಜ್ಯಗಳಿಗೂ ಹೆಚ್ಚು ಅನುಕೂಲ ಆಗಲಿದೆ ಎಂದಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories