ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿಗಳಿಗೆ ಚಾಲನೆ: ಏನಿದರ ವಿಶೇಷತೆ!

First Published | Jun 6, 2024, 11:28 AM IST

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಒಟ್ಟು 75 ಕಾಂಪ್ಯಾಕ್ಟ್‌ SUV ಎಲೆಕ್ಟ್ರಿಕ್‌ ಟ್ಯಾಕ್ಸಿಗಳಿಗೆ ವಿಮಾನ ನಿಲ್ದಾಣದ ಆವರಣದಲ್ಲಿ ಬಿಐಎಎಲ್‌ನ ಸಿಇಒ ಹರಿ ಮರಾರ್, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ರವಿ ಬಿ.ಪಿ. ಚಾಲನೆ ನೀಡಿದರು. 

ಬೆಂಗಳೂರು (ಜೂ.06): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (BLR ವಿಮಾನ ನಿಲ್ದಾಣ) ರಿಫೆಕ್ಸ್‌ ಇವೀಲ್ಜ್‌ (Refex eVeelz) ಸಹಯೋಹದೊಂದಿಗೆ ಈ ಬಾರಿ ವಿಶ್ವ ಪರಿಸರ ದಿನದ ಪ್ರಯುಕ್ತ ನೂತನವಾಗಿ "ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿ"ಗಳನ್ನು ಪರಿಚಯಿಸಿದೆ. ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಒಟ್ಟು 75 ಕಾಂಪ್ಯಾಕ್ಟ್‌ SUV ಎಲೆಕ್ಟ್ರಿಕ್‌ ಟ್ಯಾಕ್ಸಿಗಳಿಗೆ ವಿಮಾನ ನಿಲ್ದಾಣದ ಆವರಣದಲ್ಲಿ ಬಿಐಎಎಲ್‌ನ ಸಿಇಒ ಹರಿ ಮರಾರ್, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ರವಿ ಬಿ.ಪಿ. ಚಾಲನೆ ನೀಡಿದರು. 
 

ಬಳಿಕ ಮಾತನಾಡಿದ ಬಿಐಎಎಲ್‌ನ ಸಿಇಒ ಹರಿ ಮರಾರ್, ಏರ್‌ಪೋರ್ಟ್‌ನಲ್ಲಿ ಪರಿಸರಯುಕ್ತ ವಾತಾವರಣ ನಿರ್ಮಾಣ ಮಾಡಲು ಈ ಪರಿಸರ ದಿನದಂದೇ ಬಹುತೇಕ ಇಂಧನಯುಕ್ತ ಟ್ಯಾಕ್ಸಿಗಳನ್ನು ಎಲೆಕ್ಟ್ರಿಕ್‌ ಟ್ಯಾಕ್ಸಿಗಳಾಗಿ ಪರಿವರ್ತಿಸಲಾಗಿದೆ. ಇದೀಗ 75 ಕಾಂಪ್ಯಾಕ್ಟ್‌ SUV ಎಲೆಕ್ಟ್ರಿಕ್‌ ಟ್ಯಾಕ್ಸಿಗಳು ಸೇರಿದಂತೆ ಶೇ.50 ಟ್ಯಾಕ್ಸಿಗಳು ಎಲೆಕ್ಟ್ರಿಕ್‌ ವಾಹನಗಳಾಗಿ ಪರಿವರ್ತಿಸಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲಿದ್ದೇವೆ ಎಂದರು.

Tap to resize

ರಿಫೆಕ್ಸ್ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಅನಿಲ್ ಜೈನ್ ಮಾತನಾಡಿ, "ರಿಫೆಕ್ಸ್‌ನ ಗ್ರೀನ್, ರಿಫೆಕ್ಸ್ ಇವೀಲ಼್ ಮೂಲಕ ಏರ್‌ಪೋರ್ಟ್‌ನಲ್ಲಿ ಇವಿ ಟ್ಯಾಕ್ಸಿ ಒದಗಿಸುವ ಅವಕಾಶ ನಮಗೆ ದೊರೆತಿದೆ. ಈ ನೂತನ EV ಏರ್‌ಪೋರ್ಟ್‌ ಟ್ಯಾಕ್ಸಿಗಳನ್ನು ಪ್ರಯಾಣಿಕರು ಸುಲಭವಾಗಿ ಬುಕ್ ಮಾಡಬಹುದು, ವಿಮಾನ ನಿಲ್ದಾಣದ ಟ್ಯಾಕ್ಸಿ ನಿಲ್ದಾಣಗಳ ಎರಡೂ ಟರ್ಮಿನಲ್‌ಗಳಲ್ಲಿ ಹಾಗೂ ಬಳಕೆದಾರ ಸ್ನೇಹಿ BLR ಪಲ್ಸ್ ಮೊಬೈಲ್ ಅಪ್ಲಿಕೇಶನ್ ಮೂಲಕವೂ ಬುಕ್‌ ಮಾಡಬಹುದು. 

ಇನ್ನು, ಮರುವಿನ್ಯಾಸಗೊಳಿಸಲಾದ EV ಟ್ಯಾಕ್ಸಿಗಳು ಎರಡು ವಿಶಿಷ್ಟ ಬಣ್ಣಗಳಲ್ಲಿ ಇರಲಿವೆ: ತಿಳಿನೀಲಿ ಬಣ್ಣ ಹಾಗೂ ಗುಲಾಬಿ ಬಣ್ಣ. ತಿಳಿನೀಲಿ ಬಣ್ಣದ ಎಲೆಕ್ಟ್ರಿಕ್‌ ಟ್ಯಾಕ್ಸಿಗಳು ಎಲ್ಲರೂ ಬಳಸಬಹುದಾಗಿದ್ದು, ಈ ಬಣ್ಣವು ಸುಸ್ಥಿರತೆಯನ್ನು ಒತ್ತಿ ಹೇಳುತ್ತದೆ. ಇನ್ನು, ಗುಲಾಬಿ ಬಣ್ಣದ ಎಲೆಕ್ಟ್ರಿಕ್‌ ಟ್ಯಾಕ್ಸಿಗಳು ಮಹಿಳೆಯರಿಗಾಗಿ ಮೀಸಲಿಟ್ಟಿದ್ದು, ಈ ಟ್ಯಾಕ್ಸಿಗಳನ್ನು ಮಹಿಳಾ ಚಾಲಕಿಯರೇ ಚಲಾಯಿಸಲಿರುವುದು ವಿಶೇಷ. ಇನ್ನು, ಪ್ರತಿ ಪ್ರಯಾಣಿಕರಿಗೆ ಡ್ಯೂಟಿ ಮ್ಯಾನೇಜರ್, ಸ್ಥಳೀಯ ಪೋಲೀಸ್ ಮತ್ತು ಆಂಬ್ಯುಲೆನ್ಸ್ ಸೇವೆಗಳಿಗೆ ತುರ್ತು ಸಂಪರ್ಕ ಸಂಖ್ಯೆಗಳನ್ನು ಒಳಗೊಂಡಿರುವ ಪೂರಕ "ಪಿಂಕ್ ಕಾರ್ಡ್" ಅನ್ನು ಸಹ ಒದಗಿಸಲಾಗುತ್ತದೆ, 
 

ಇದರಿಂದ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಹೆಚ್ಚಿಸಿದಂತಾಗಿದೆ. ಅರೆ-ರೊಬೊಟಿಕ್ ವಿಮಾನ ಟೋಯಿಂಗ್ ವಾಹನಗಳು ಮತ್ತು EV ವಾಹನಗಳನ್ನು ಏರ್‌ಸೈಡ್ ಮತ್ತು ಲ್ಯಾಂಡ್‌ಸೈಡ್ ಎರಡೂ ಕಡೆಯಲ್ಲೂ ಅನುಷ್ಠಾನಗೊಳಿಸಲಾಗಿದೆ. ಹೀಗಾಗಿ BLR ಏರ್‌ಪೋರ್ಟ್‌ನಲ್ಲಿರುವ ಎಲ್ಲಾ ವಾಹನಗಳನ್ನು ಸಮರ್ಥನೀಯ ಆಯ್ಕೆಗಳಿಗೆ ಪರಿವರ್ತಿಸುವ ದೀರ್ಘಾವಧಿಯ ದೃಷ್ಟಿಯೊಂದಿಗೆ BIAL ಹೊಂದಾಣಿಕೆಯನ್ನು ಮುಂದುವರೆಸಿದೆ. 

ಈ ಉಪಕ್ರಮಗಳು ಪ್ರಯಾಣಿಕರ ಯೋಗಕ್ಷೇಮಕ್ಕೆ ಆದ್ಯತೆ ನೀಡುವುದು ಮಾತ್ರವಲ್ಲದೆ ವಿಶಾಲವಾದ ಪರಿಸರಮಯ ವಾತಾವರಣ ನಿರ್ಮಾಣದ ಗುರಿ ಹೊಂದಿದ್ದು, ಎಲ್ಲರಲ್ಲೂ ಹಸಿರುಯುಕ್ತ ಭವಿಷ್ಯವನ್ನು ಉತ್ತೇಜಿಸುತ್ತವೆ ಎಂದರು. ಕಾರ್ಯಕ್ರಮದಲ್ಲಿ ವಿಶ್ವ ಪರಿಸರ ದಿನದ ನೆನಪಿನಾರ್ಹ, ವಿಮಾನ ನಿಲ್ದಾಣದ ಕ್ಯಾಂಪಸ್‌ನಲ್ಲಿ 100 ಸಸಿಗಳನ್ನು ನೆಡುವ ಮೂಲಕ, ಸುತ್ತಮುತ್ತಲಿನ ಪರಿಸರವನ್ನು ಪೋಷಿಸಲು ಮತ್ತು ಪುನರುಜ್ಜೀವನಗೊಳಿಸಲು ತನ್ನ ಸಮರ್ಪಣೆಯನ್ನು ಪ್ರದರ್ಶಿಸಿದೆ, ಇದರಿಂದ  ಪ್ರತಿಯೊಬ್ಬರಿಗೂ ನೆರಳು ನೀಡುವ ಹಸಿರುಮಯ ವಾತಾವರಣ ಸೃಷ್ಟಿಯಾಗಲಿದೆ.

Latest Videos

click me!