ಕರ್ನಾಟಕದಲ್ಲಿರುವವರೆಲ್ಲಾ ಕನ್ನಡ ಕಲಿಯಲೇಬೇಕು: ಸಿಎಂ ಸಿದ್ದರಾಮಯ್ಯ

First Published Jun 21, 2024, 8:08 AM IST

ಬೆಂಗಳೂರು(ಜೂ.21):  ಕನ್ನಡ ನಾಡಿನಲ್ಲಿ ಇರುವವರೆಲ್ಲರೂ ಕನ್ನಡ ಕಲಿಯಲೇ ಬೇಕು. ಕರ್ನಾಟಕದಲ್ಲಿ ಕನ್ನಡದ ವಾತಾವರಣ ನಿರ್ಮಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಅಂಗವಾಗಿ ಗುರುವಾರ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ನಾಡದೇವತೆ ಭುವನೇಶ್ವರಿಯ 25 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

 ಬೇರೆ ರಾಜ್ಯಗಳಿಗೆ ಹೋದರೆ ಅಲ್ಲಿ ಬದುಕಲು ಆ ರಾಜ್ಯದ ಭಾಷೆ ಕಲಿಯುವುದು ಅನಿವಾರ್ಯ. ಆದರೆ, ನಮ್ಮ ರಾಜ್ಯದಲ್ಲಿ ಕನ್ನಡ ಕಲಿಯದೇ ಬದುಕಬಹುದು ಎನ್ನುವ ವಾತಾವರಣ ಇದೆ. ನಮ್ಮ ಜನ ಉದಾರಿಗಳಾಗಿರಬಹುದು. ಆದರೆ, ನಾವು ನಮ್ಮ ಮಾತೃ ಭಾಷೆಯಲ್ಲೇ ಮಾತಾಡಬೇಕು.‌ ಕೀಳರಿಮೆ ಬಿಟ್ಟು ನಮ್ಮ ಭಾಷೆ ಬಗ್ಗೆ ಹೆಮ್ಮೆ ಹೊಂದಿರಬೇಕು. ಬೇರೆ ಭಾಷೆಯವರಂತೆ ದುರಾಭಿಮಾನಿಗಳು ಆಗುವ ಅಗತ್ಯವಿಲ್ಲ. ಕನ್ನಡ ಭಾಷೆ, ನುಡಿಯ ಬಗ್ಗೆ ಎಲ್ಲರಿಗೂ ಅಭಿಮಾನ ಮೂಡಿಸಬೇಕು. ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

Latest Videos


ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಆಚಾರ, ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ನಾವು ನಮ್ಮ ನೆಲ, ಜಲ, ಭಾಷೆಯನ್ನು ಕಾಪಾಡಿಕೊಂಡು ಹೋಗಬೇಕು. ಭುವನೇಶ್ವರಿ ಪ್ರತಿಮೆ ವೀಕ್ಷಣೆಗೆ ಬರುವವರ ಅನುಕೂಲಕ್ಕಾಗಿ ಪ್ರತ್ಯೇಕ ದ್ವಾರವನ್ನು ನಿರ್ಮಿಸಲಾಗುತ್ತದೆ ಎಂದರು.

ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮ ಹಿನ್ನೆಲೆಯಲ್ಲಿ ವಿಶೇಷ ಸಾಧನೆ ಮಾಡಿದ ತಲಾ 50 ಮಹಿಳೆ ಮತ್ತು ಪುರುಷರಿಗೆ ರಾಜ್ಯೋತ್ಸವದ ವೇಳೆ ಗೌರವಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಬೆಂಗಳೂರಿನಲ್ಲಿ ಬರೀ ಶೇ.27ರಷ್ಟು ಜನ ಮಾತ್ರ ಕನ್ನಡಿಗರಿದ್ದಾರೆ ಎಂಬ ಮಾಹಿತಿ ಇದೆ. ಬೆಂಗಳೂರಿನಲ್ಲಿ ಕನ್ನಡ ಉಳಿಸುವ ಪರಿಕಲ್ಪನೆಯೇ ಇಲ್ಲ. ಆದರೆ, ಇಂತಹ ಚಟುವಟಿಕೆಗಳ ಮೂಲಕ ಭಾಷೆ ಉಳಿಸುವ ಪ್ರಯತ್ನಗಳಾಗಬೇಕು ಎಂದರು.
6 ಸಚಿವರಾದ ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಚಿವರಾದ ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಹರ್ಷಿ ವಾಲ್ಮೀಕಿ, ಕನಕದಾಸ, ಬಸವಣ್ಣ, ಕೆಂಪೇಗೌಡ, ಮಹಾತ್ಮ ಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್, ಜವಹಾರ್ ಲಾಲ್ ನೆಹರು, ಕೆಂಗಲ್ ಹನುಮಂತಯ್ಯ, ದೇವರಾಜ ಅರಸು, ಬಾಬು ಜಗಜೀವನ್‌ ರಾಂ, ಎಸ್‌. ನಿಜಲಿಂಗಪ್ಪ, ಲಾಲ್‌ ಬಹಾದ್ದೂರ್‌ ಶಾಸ್ತ್ರಿ, ಕೆ.ಸಿ.ರೆಡ್ಡಿ.

click me!