ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಈ ಸಮಿತಿಗಳು ಕಾರ್ಯಕರ್ತರಿಗೆ ಅಧಿಕಾರ ನೀಡುವುದಲ್ಲದೆ, ಗ್ಯಾರಂಟಿ ಫಲಾನುಭವಿಗಳ ದಾಖಲೆಗಳನ್ನು ಮರುಪರಿಶೀಲನೆ ಮಾಡುವ ಜವಾಬ್ದಾರಿ ಹೊರಲಿವೆ.
ಕಾರ್ಯಕರ್ತರಿಗೆ ಅಧಿಕಾರ ನೀಡಬೇಕು ಎಂಬ ಕಾರಣಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚಿಸಲಾಗುವುದು. ಆ ಸಮಿತಿ ಸದಸ್ಯರು ಗ್ಯಾರಂಟಿ ಫಲಾನುಭವಿಗಳ ದಾಖಲೆ ಮರುಪರಿಶೀಲನೆ ನಡೆಸುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
23
ಸಾವಿರಾರು ಕಾರ್ಯಕರ್ತರಿಗೆ ಅಧಿಕಾರ
ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಬಿ.ಕೆ. ಹರಿಪ್ರಸಾದ್ ಅವರ ಕೆಪಿಸಿಸಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದಾಗ ಹಲವು ಪದಾಧಿಕಾರಿಗಳು, ಶಾಸಕರು, ಮುಖಂಡರು ನನ್ನೊಂದಿಗೆ ಶ್ರಮಿಸಿದ್ದಾರೆ. ಎಷ್ಟೋ ಜನರಿಗೆ ಅಧಿಕಾರ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ, ಗ್ಯಾರಂಟಿ ಅನುಷ್ಠಾನ ಸಮಿತಿ ಮಾಡಿ ಸಾವಿರಾರು ಕಾರ್ಯಕರ್ತರಿಗೆ ಅಧಿಕಾರ ನೀಡಿದ್ದೇವೆ.
33
ರಾಜ್ಯದಲ್ಲಿ 7 ಸಾವಿರ ಗ್ರಾಪಂ, 4 ಸಾವಿರ ವಾರ್ಡ್
ಇದೀಗ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ಸಮಿತಿ ರಚನೆ ಮಾಡಲು ಪಕ್ಷದ ವರಿಷ್ಠರೊಂದಿಗೆ ಚರ್ಚೆ ಮಾಡಿದ್ದೇವೆ. ಎಲ್ಲ ವರ್ಗದವರಿಗೂ ಸಮಾನವಾಗಿ ಸಮಿತಿಗಳಿಗೆ ನೇಮಕ ಮಾಡಲಾಗುವುದು. ಪ್ರತಿ ಸಮಿತಿಯಲ್ಲಿ 5 ಜನರನ್ನು ಸದಸ್ಯರನ್ನಾಗಿ ಮಾಡಲಾಗುವುದು. ರಾಜ್ಯದಲ್ಲಿ 7 ಸಾವಿರ ಗ್ರಾಪಂ, 4 ಸಾವಿರ ವಾರ್ಡ್‌ಗಳಲ್ಲಿ ಗ್ಯಾರಂಟಿ ಸಮಿತಿ ರಚಿಸಲಾಗುವುದು. ಆಮೂಲಕ ನಾವು ಸಾವಿರಾರು ನಾಯಕರನ್ನು ಸಿದ್ಧಪಡಿಸುತ್ತಿದ್ದೇವೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ