ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್(Kannada Prabha and Asianet Suvarna News) ಪ್ರಧಾನ ಸಂಪಾದಕ ರವಿ ಹೆಗಡೆ(Ravi Hegde), ವಿಜಯವಾಣಿ ಪತ್ರಿಕೆ ಸಂಪಾದಕ ಕೆ.ಎನ್. ಚನ್ನೇಗೌಡ, ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸದಾಶಿವ ಶೆಣೈ, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ, ವಾರ್ತಾ ಇಲಾಖೆಯ ವಿಶ್ರಾಂತ ಜಂಟಿ ನಿರ್ದೇಶಕ ಎಚ್.ಬಿ. ದಿನೇಶ್, ಚಲನಚಿತ್ರ ನಟಿ ಸೋನು ಗೌಡ, ಬಹುರೂಪಿ ಸಂಸ್ಥೆಯ ಜಿ.ಎನ್. ಮೋಹನ್ ವೇದಿಕೆಯಲ್ಲಿದ್ದರು.