ಅಪರಾಧಿ ಪ್ರಜ್ವಲ್ ರೇವಣ್ಣ ಶಿಕ್ಷೆಗೆ ಕೌಂಟ್‌ಡೌನ್ ಸ್ಟಾರ್ಟ್, ಮಧ್ಯಾಹ್ನ 2.45ಕ್ಕೆ ತೀರ್ಪು ಎಂದ ಕೋರ್ಟ್

Published : Aug 02, 2025, 12:22 PM ISTUpdated : Aug 02, 2025, 04:47 PM IST

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಅತ್ಯಾ1ಚಾರ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ.  ಇಂದು ಮತ್ತೆ ವಿಚಾರಣೆ ನಡೆಸಿದ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಮಧ್ಯಾಹ್ನ 2.45ಕ್ಕೆ ಪ್ರಕಟಿಸುವುದಾಗಿ ಹೇಳಿದೆ. ಹೀಗಾಗಿ ಇಂದು ಮಧ್ಯಾಹ್ನ ಶಿಕ್ಷೆಯ ಪ್ರಮಾಣ ಪ್ರಕಟಗೊಳ್ಳಲಿದೆ.

PREV
16

ಬೆಂಗಳೂರು: ಕೆ ಆರ್‌ ನಗರದ ಮನೆಗೆಲಸದವಳ ಮೇಲಿನ ಅತ್ಯಾ*ಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅಪರಾಧಿ ಎಂದು ತೀರ್ಮಾನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಮಹತ್ವದ ತೀರ್ಪು ನೀಡಿತ್ತು. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ಶುಕ್ರವಾರ ತೀರ್ಪು ಪ್ರಕಟಿಸಿದ್ದರು. ಇದೀಗ ಶಿಕ್ಷೆ ಪ್ರಮಾಣವನ್ನು ಶನಿವಾರಕ್ಕೆ ನಿಗದಿಪಡಿಸಿದ್ದ ನ್ಯಾಯಾಲಯ ವಾದ ಪ್ರತಿವಾದ ಆಲಿಸಿ ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣ ಘೋಷಿಸಲು ಮುಹೂರ್ತ ಇಟ್ಟಿದೆ  

26

ಪ್ರಜ್ವಲ್ ರೇವಣ್ಣ ಮುಂದಿನ ಕಾನೂನು ಆಯ್ಕೆಗಳು ಯಾವುವು?

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ವಿರುದ್ಧವಾಗಿ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬಹುದಾದ ಅವಕಾಶವಿದೆ. ಹೈಕೋರ್ಟ್ ಈ ತೀರ್ಪಿಗೆ ತಾತ್ಕಾಲಿಕ ತಡೆ ನೀಡಿದರೆ, ಉಳಿದ ಮೂರು ಪ್ರಕರಣಗಳಲ್ಲಿ ಜಾಮೀನಿಗಾಗಿ ಅವರು ಮುಂದಿನ ಕ್ರಮ ಕೈಗೊಳ್ಳಬಹುದು.

ಒಮ್ಮೆ ಹೈಕೋರ್ಟ್ ಕೂಡ ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದರೆ, ಆಗ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಮಾರ್ಗ ಮಾತ್ರ ಉಳಿಯುತ್ತದೆ. ಆದರೆ ಸುಪ್ರೀಂ ಕೋರ್ಟ್ ಸಹ ಹೈಕೋರ್ಟ್ ತೀರ್ಪನ್ನು ಸಮರ್ಥಿಸಿದರೆ, ಆಗ ಅವರು ವಿಧಿಸಲಾದ ಶಿಕ್ಷೆಯನ್ನು ಅನುಭವಿಸಲೇಬೇಕಾಗುತ್ತದೆ.

36

ಕಣ್ಣೀರಿಟ್ಟ ಪ್ರಜ್ವಲ್

ಶುಕ್ರವಾರ ನ್ಯಾಯಾಧೀಶರು ತೀರ್ಪು ಓದುವ ವೇಳೆ ಕಟಕಟೆಯಲ್ಲಿ ಕೈಕಟ್ಟಿ ನಿಂತಿದ್ದ ಪ್ರಜ್ವಲ್‌, ನ್ಯಾಯಾಧೀಶರ ತೀರ್ಪು ಘೋಷಣೆ ಕೇಳಿ ದುಃಖತಪ್ತರಾಗಿ ಕಣ್ಣೀರಾದರು. ಅಳುತ್ತಲೇ ಹಾಲ್‌ ನಿಂದ ಹೊರಬಂದು ಸ್ವಲ್ಪ ಸಮಯ ಕುಳಿತರು. ಬಳಿಕ ಪೊಲೀಸ್‌ ವಾಹನದಲ್ಲಿ ಅಳುತ್ತಲೇ ಕುಳಿತರು. ಬಳಿಕ ಅವರನ್ನಿ ಪರಪ್ಪನ ಅಗ್ರಹಾರಕ್ಕೆ ಪೊಲೀಸರು ಕರೆದೊಯ್ದರು.

14 ತಿಂಗಳಲ್ಲೇ ಹೊರಬಿದ್ದ ತೀರ್ಪು

ಆಶ್ಲೀಲ ವಿಡಿಯೋ ಮತ್ತು ಅತ್ಯಾ8ಚಾರಕ್ಕೆ ಸಂಬಂಧಿಸಿದ ಪ್ರಜ್ವಲ್‌ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳಿವೆ. ಈ ತೀರ್ಪಿನೊಂದಿಗೆ ಮೊದಲ ಪ್ರಕರಣದಲ್ಲಿ ಪ್ರಜ್ವಲ್‌ ಅಪರಾಧಿ ಎಂದು ಸಾಬೀತಾಗಿದೆ. ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ಈ ಪ್ರಕರಣ ದಾಖಲಾಗಿ 14 ತಿಂಗಳೊಳಗೆ ವಿಚಾರಣೆ ಪೂರ್ಣಗೊಂಡು ತೀರ್ಪು ಹೊರಬಿದ್ದಿರುವುದು ಗಮನಾರ್ಹ ವಿಷಯವಾಗಿದೆ.

46

ಏನೆಲ್ಲಾ ಸಾಕ್ಷಿಗಳು

ಮಿಕ್ಕ ಮೂರು ಪ್ರಕರಣಗಳು ಇದೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ. ಇವುಗಳ ವಿಚಾರಣೆಯೂ ಈ ವರ್ಷದೊಳಗೆ ಪೂರ್ಣಗೊಂಡು ತೀರ್ಪು ಹೊರಬೀಳುವ ನಿರೀಕ್ಷೆಯಿದೆ. ಎಸ್‌ಐಟಿ ತನಿಖೆ ಪೂರ್ಣಗೊಳಿಸಿ ಸಂತ್ರಸ್ತೆ ಹೇಳಿಕೆ, ಆರೋಪಿ ಹೇಳಿಕೆ, 113 ಸಾಕ್ಷಿಗಳು, ಸಾಂದರ್ಭಿಕ ಸಾಕ್ಷಿಗಳು, ಡಿಜಿಟಲ್‌ ಸಾಕ್ಷಿಗಳು, ಎಫ್‌ಎಸ್ಎಲ್‌ ವರದಿ, ತಾಂತ್ರಿಕ ಸಾಕ್ಷಿಗಳು ಒಳಗೊಂಡಂತೆ ಸುಮಾರು 1,632 ಪುಟಗಳ ದೋಷಾರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

56

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಹಲವು ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು. ಅದರಲ್ಲಿ ಕೆ.ಆರ್‌.ನಗರ ಮೂಲದ 48 ವರ್ಷದ ಸಂತ್ರಸ್ತೆಯ ಖಾಸಗಿ ವಿಡಿಯೋ ಸಹ ಇತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಿತ್ತು. ವಿಡಿಯೋ ವೈರಲ್‌ ಬೆನ್ನಲ್ಲೇ ಸಂತ್ರಸ್ತೆಯು ಕಾಣೆಯಾಗಿದ್ದರು. ಈ ವೇಳೆ ಆಕೆಯ ಪುತ್ರ 2024ರ ಮೇ 2ರಂದು ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಮತ್ತು ಸಂಬಂಧಿ ಸತೀಶ್‌ ಬಾಬಣ್ಣ ವಿರುದ್ಧ ಅಪಹರಣ ಪ್ರಕರಣ ದೂರು ನೀಡಿದ್ದರು.

66

ಈ ಪ್ರಕರಣ ಭೇದಿಸಿದ ಎಸ್‌ಐಟಿ ಪೊಲೀಸರು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಾಳೇನಹಳ್ಳಿಯ ರೇವಣ್ಣನ ಆಪ್ತ ರಾಜಗೋಪಾಲ್‌ ಎಂಬುವವರ ತೋಟದ ಮನೆಯಲ್ಲಿ ಆಕೆಯನ್ನು ರಕ್ಷಿಸಿ ಕರೆತಂದಿದ್ದರು. ಬಳಿಕ ಎಸ್‌ಐಟಿ ವಿಚಾರಣೆ ವೇಳೆ ಸಂತ್ರಸ್ತೆಯು ಪ್ರಜ್ವಲ್ ರೇವಣ್ಣ ತನ್ನನ್ನು ಬಲವಂತವಾಗಿ ಬಳಸಿಕೊಂಡಿದ್ದಾರೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಳು.

Read more Photos on
click me!

Recommended Stories