ಸರ್ಕಾರದ ಫ್ರೀ ಯೋಜನೆ, ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್‌: ನಾಲ್ಕು ಲವ್ ಬರ್ಡ್ಸ್​​ಗೆ ಬರೋಬ್ಬರಿ 444ರೂ. ಟಿಕೆಟ್!

First Published Mar 27, 2024, 12:03 PM IST

ಇಂದು ಬೆಳಗ್ಗೆ 08.18ಕ್ಕೆ ಬೆಂಗಳೂರಿನಿಂದ ಮೈಸೂರು ಹೊರಟ್ಟಿದ್ದ ಅಜ್ಜಿ ಮೊಮ್ಮಗಳು ಕೆಎಸ್​ಆರ್​ಟಿಸಿ ಬಸ್​ ಹತ್ತಿ ಕುಳಿತಿದ್ದರು. ಕಂಡಕ್ಟರ್ ಬಂದೊಡನೆ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಪಡೆದಿದ್ದರು.

ಬೆಂಗಳೂರು (ಮಾ.27): ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ನಾಲ್ಕು ಲವ್ ಬರ್ಡ್ಸ್​ಗಳಿಗೆ ಕಂಡಕ್ಟರ್ ಬರೋಬ್ಬರಿ 444 ರೂ. ಟಿಕೆಟ್ ನೀಡಿದ್ದಾರೆ.

ಇಂದು ಬೆಳಗ್ಗೆ 08.18ಕ್ಕೆ ಬೆಂಗಳೂರಿನಿಂದ ಮೈಸೂರು ಹೊರಟ್ಟಿದ್ದ ಅಜ್ಜಿ ಮೊಮ್ಮಗಳು ಕೆಎಸ್​ಆರ್​ಟಿಸಿ ಬಸ್​ ಹತ್ತಿ ಕುಳಿತಿದ್ದರು. ಕಂಡಕ್ಟರ್ ಬಂದೊಡನೆ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಪಡೆದಿದ್ದರು. 

ಆದರೆ ಅಜ್ಜಿ-ಮೊಮ್ಮಗಳ ಕೈಯಲ್ಲಿದ್ದ ಪಂಜರದೊಳಗಿದ್ದ ನಾಲ್ಕು ಲವ್ ಬರ್ಡ್​ ಗಮನಿಸಿದ ಕಂಡಕ್ಟರ್​ ಬರೋಬ್ಬರಿ 444 ರೂಪಾಯಿ ಟಿಕೆಟ್ ಹರಿದಿದ್ದಾನೆ.

ಸರ್ಕಾರದ ಉಚಿತ ಯೋಜನೆಯಿಂದಾಗಿ ಅಜ್ಜಿ ಮೊಮ್ಮಗಳಿಗೆ ಫ್ರೀ ಟಿಕೆಟ್‌ ಸಿಕ್ಕರೆ, ನಾಲ್ಕು ಲವ್ ಬರ್ಡ್ಸ್ ಪಕ್ಷಿಗಳಿಗೆ ಟಿಕೆಟ್ ಹಣ ಕೊಡುವಂತಾಗಿದೆ. 

ಒಂದು ಪಕ್ಷಿಗೆ 111ರೂ. ನಂತೆ ನಾಲ್ಕು ಪಕ್ಷಿಗಳಿಗೆ 444ರೂ. ನೀಡಿ ಅಜ್ಜಿ-ಮೊಮ್ಮಗಳು ಮೈಸೂರಿಗೆ ಪ್ರಯಾಣಿಸಿದ್ದಾರೆ. ನಾಲ್ಕು ಮಕ್ಕಳು ಎಂದು ಟಿಕೆಟ್​ನಲ್ಲಿ ನಮೂದಿಸಲಾಗಿದೆ.

click me!