ಬಿಸಿಲಿಗೆ ಬಳಲಿರೋ ಸಿಲಿಕಾನ್‌ ಸಿಟಿ ಮಂದಿಗೆ ಗುಡ್‌ನ್ಯೂಸ್ : ಬೆಂಗಳೂರಿಗೆ ಬರಲಿದೆ ಮಳೆ

Published : Apr 29, 2026, 08:57 AM IST

ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿರುವ ಬೆಂಗಳೂರು ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 26 ಜಿಲ್ಲೆಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.

PREV
14

ಈ ಬಾರಿಯ ಬೇಸಿಗೆಯ ಬಿಸಿಲು ಸಿಲಿಕಾನ್ ಸಿಟಿ ಜನರನ್ನು ಅಕ್ಷರಶಃ ಬಿಸಿಯಿಂದ ಬೇಯುವಂತೆ ಮಾಡಿದೆ. ಜನರು ಸೆಖೆಯ ಧಗೆ ತಾಳಲಾರದೇ ಗೋಳಾಡುತ್ತಿದ್ದಾರೆ. ರಾತ್ರಿ ಸೆಖೆಗೆ ನಿದ್ದೇನೇ ಬರ್ತಿಲ್ಲ ಎಂಬುದು ಅನೇಕರ ಗೋಳು. ಹೀಗಿರುವಾಗ ಸೆಖೆಯಿಂದ ಬೆಂದ ಗಾರ್ಡನ್ ಸಿಟಿ ಜನರಿಗೆ ಒಂದು ಗುಡ್ ನ್ಯೂಸ್ ಇದೆ.

24

ಇಂದಿನಿಂದ ನಾಲ್ಕು ದಿನ ಬೆಂಗಳೂರಿನಲ್ಲಿ ಚೆನ್ನಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದ್ದು, ಬಿಸಿಲ ತಾಪಕ್ಕೆ ಕಂಗೆಟ್ಟ ಜನರಿಗೆ ಕೊಂಚ ನೆಮ್ಮದಿ ನೀಡಿದೆ.

34

ಇಂದಿನಿಂದ ನಾಲ್ಕು ದಿನ ಬೆಂಗಳೂರಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಇವತ್ತು 26 ಜಿಲ್ಲೆಗಳಿಗೆ ಎಲ್ಲೋ ಆಲರ್ಟ್ ನೀಡಿದ್ದು, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಸೇರಿದಂತೆ 26 ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

44

ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ,

ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ & ದಕ್ಷಿಣ ಕನ್ನಡ, ಚಿಕ್ಕ ಮಗಳೂರು ಹಾಸನ, ತುಮಕೂರು, ಕೊಡಗು, ಮೈಸೂರು ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories