Gopooja| ರಾಜ್ಯದ ದೇಗುಲಗಳಲ್ಲಿ ದೀಪಾವಳಿ ಗೋಪೂಜೆ

First Published Nov 7, 2021, 8:11 AM IST

ಬೆಂಗಳೂರು(ನ.07):  ದೀಪಾವಳಿ(Deepavali) ಹಿನ್ನೆಲೆಯಲ್ಲಿ ರಾಜ್ಯದ(Karnataka) ಎಲ್ಲಾ ದೇಗುಲಗಳಲ್ಲಿ(Temple) ಸರ್ಕಾರದ ನಿರ್ದೇಶನದಂತೆ ಶುಕ್ರವಾರ ಗೋಪೂಜೆ ನಡೆಸಲಾಯಿತು. ಗೋವುಗಳ ಕುರಿತು ಜಾಗೃತಿ ಮೂಡಿಸಲು ಮತ್ತು ಗೋ ಉತ್ಪನ್ನಗಳ ಖರೀದಿಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು.

ಬೀದರ್‌ ಜಿಲ್ಲೆಯ ಔರಾದ್‌ನ ಅಮರೇಶ್ವರ ದೇಗುಲದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌, ಬೆಳಗಾವಿಯ ಕಪಿಲೇಶ್ವರ ಮಂದಿರದಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂ.ಟಿ.ಬಿ. ನಾಗರಾಜು, ನಂಜನಗೂಡು ನಂಜುಂಡೇಶ್ವರ ಸನ್ನಿಧಿಯಲ್ಲಿ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ಮಂಡ್ಯದ ಮೇಲುಕೋಟೆ ಚಲುವರಾಯಸ್ವಾಮಿ ಸನ್ನಿಧಿಯಲ್ಲಿ ಶಾಸಕ ಸಿ.ಎಸ್‌.ಪುಟ್ಟರಾಜು, ಚಾಮುಂಡಿಬೆಟ್ಟದಲ್ಲಿ ಶಾಸಕ ಜಿ.ಟಿ. ದೇವೇಗೌಡ ದಂಪತಿ ಸೇರಿ ವಿವಿಧೆಡೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗೋಪೂಜೆ ಸಾಂಗವಾಗಿ ನೆರವೇರಿತು.

ಈ ಸಂದರ್ಭದಲ್ಲಿ ಮಾತನಾಡಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌, ದೇಶದಲ್ಲಿಯೇ ಗೋವುಗಳ ಸಂರಕ್ಷಣೆಗೆ ವಿಶೇಷ ಕಾಳಜಿ ವಹಿಸಿದ ಖ್ಯಾತಿ ರಾಜ್ಯ ಬಿಜೆಪಿ(BJP) ಸರ್ಕಾರಕ್ಕೆ ಸಲ್ಲುತ್ತದೆ. ಈಗಾಗಲೇ ರಾಜ್ಯದ ಕೆಲವೆಡೆ ಪಶುಗಳಿಗಾಗಿಯೇ ಆ್ಯಂಬುಲೆನ್ಸ್‌(Ambulance) ಒದಗಿಸಲಾಗಿದ್ದು, ಮುಂದೆ ಪ್ರತಿ ತಾಲೂಕಿಗೂ ಆ್ಯಂಬುಲೆನ್ಸ್‌ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆ ಬಗ್ಗೆ ಕೇಂದ್ರ ಸರ್ಕಾರ(Central Government) ಕೂಡ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

ಉಡುಪಿ ಸಮೀಪದ ದೊಡ್ಡಣಗುಡ್ಡೆಯ ಅಂಬೇಡ್ಕರ್‌ ಕಾಲನಿಯ ದಲಿತರ ಮನೆಯಲ್ಲಿ ಗೋಪೂಜೆ(Gopooja) ನೆರವೇರಿಸಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ

ವಿಧವೆ ಕಮಲಮ್ಮ ಕೇವಲ 3 ಸೆಂಟ್ಸ್‌ ಜಮೀನಿನಲ್ಲಿ 50ಕ್ಕೂ ಹೆಚ್ಚು ಶುದ್ಧ ದೇಸಿ ಹಸುಗಳನ್ನು(Cow) ಪೋಷಿಸುತ್ತಿದ್ದಾರೆ. ಯಾವುದೇ ಲಾಭದ ಉದ್ದೇಶವಿಲ್ಲದೆ ನಡೆಸುತ್ತಿರುವ ಈ ಗೋಶಾಲೆಗೆ ಆಗಮಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೋವುಗಳಿಗೆ ತಿಲಕವಿಟ್ಟು, ಮಾಲೆ ಹಾಕಿ, ಅವಲಕ್ಕಿ, ಕಜ್ಜಾಯ ತಿನ್ನಿಸಿ, ಆರತಿ ಬೆಳಗಿದರು. ಬಳಿಕ ಇಲಾಖೆಯಿಂದ ಕಮಲಮ್ಮ ಮತ್ತು ಅವರ ಮಗನಿಗೆ ಸಚಿವರು ಹೊಸ ಬಟ್ಟೆ ಮತ್ತು ಸಿಹಿತಿಂಡಿ ಹಾಗೂ ಹಸುಗಳಿಗೆ ಒಂದು ಕ್ವಿಂಟಲ್‌ ಹಿಂಡಿಯನ್ನು ಉಡುಗೊರೆಯಾಗಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಗೋವುಗಳನ್ನು ಕಸಾಯಿಖಾನೆಗೆ ಕಳುಹಿಸುವುದನ್ನು ತಪ್ಪಿಸಲು ಮುಜರಾಯಿ ಇಲಾಖೆಯ ‘ಎ’ ಮತ್ತು ‘ಬಿ’ ಗ್ರೇಡ್‌ ದೇವಸ್ಥಾನದಲ್ಲಿ ಗೋಶಾಲೆಗಳನ್ನು ಆರಂಭಿಸುವ ಉದ್ದೇಶವಿದೆ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. 

ಬೆಳಗಾವಿ(Belagavi) ನಗರದಲ್ಲಿ ಮಾತನಾಡಿದ ಸಚಿವೆ ಜೊಲ್ಲೆ, ರಾಜ್ಯದ 250ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಮುಂಬರುವ ದಿನಗಳಲ್ಲಿ ಗೋಶಾಲೆ ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾವಾರು ಎ ಮತ್ತು ಬಿ ಗ್ರೇಡ್‌ ದೇವಸ್ಥಾನಗಳ ಪಟ್ಟಿ ಪಡೆದುಕೊಂಡು ಗೋಶಾಲೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು ಸುದ್ದಿಗಾರರಿಗೆ ಬೆಳಗಾವಿಯಲ್ಲಿ ತಿಳಿಸಿದರು. ಇದೇ ವೇಳೆ, ಅರ್ಚಕರ ಕುಟುಂಬಕ್ಕೆ ಆರೋಗ್ಯ ವಿಮೆ ಒದಗಿಸಲು ಚಿಂತನೆ ನಡೆಸಲಾಗುತ್ತಿದೆ ಎಂದೂ ಮಾಹಿತಿ ನೀಡಿದರು.
 

click me!