ಮಕ್ಕಳ ದಿನಾಚರಣೆಯಂದು PU ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ನೀಡಲು ಸರ್ಕಾರ ಚಿಂತನೆ

Published : Nov 05, 2025, 09:15 AM IST

ಕರ್ನಾಟಕ ಸರ್ಕಾರ ಯೋಜನೆಯೊಂದನ್ನು ಪಿಯು ವಿದ್ಯಾರ್ಥಿಗಳಿಗೂ ವಿಸ್ತರಿಸಲು ಚಿಂತನೆ ನಡೆಸಿದೆ. ಮಕ್ಕಳ ದಿನಾಚರಣೆಯಂದು ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದ್ದು, ಇದರಿಂದ ಗ್ರಾಮೀಣ ಭಾಗದ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

PREV
14
ಸರ್ಕಾರದಿಂದ ಗುಡ್‌ನ್ಯೂಸ್!

ಮಕ್ಕಳ ದಿನಾಚರಣೆಯಂದು ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ನೀಡಲು ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ನವೆಂಬರ್ 14ರಂದು ಸರ್ಕಾರದಿಂದ ಈ ಸಂಬಂಧ ಅಧಿಕೃತ ಘೋಷಣೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

24
ಯೋಜನೆ ವಿಸ್ತರಣೆಗೆ ಚಿಂತನೆ

ಸದ್ಯ 1 ರಿಂದ 10ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ನೀಡಲಾಗುತ್ತಿದೆ. ಈ ಯೋಜನೆಯನ್ನು ಪಿಯು ವಿದ್ಯಾರ್ಥಿಗಳಿಗೆ ವಿಸ್ತರಣೆ ಮಾಡಲು ಸಿಎಂ ಸಿದ್ದರಾಮಯ್ಯ ಸರ್ಕಾರ ಚಿಂತನೆ ನಡೆಸಿದೆಯಂತೆ. ಈ ವರ್ಷದಿಂದಲೇ ಪಿಯು ವಿದ್ಯಾರ್ಥಿಗಳಿಗೆ ಊಟ ವಿತರಿಸುವ ಯೋಜನೆಗೆ ಚಾಲನೆ ನೀಡಲು ಸರ್ಕಾರ ಪ್ಲಾನ್ ಮಾಡಿಕೊಳ್ಳಲಾಗಿದೆ.

34
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ

ರಾಜ್ಯದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿದ್ದಾರೆ. ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಸರ್ಕಾರಿ ಕಾಲೇಜ್‌ಗೆ ದಾಖಲಾತಿ ಪಡೆದುಕೊಂಡಿದ್ದಾರೆ. ಹಾಗಾಗಿ ಈ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ವಿಸ್ತರಣೆಗೆ ಸರ್ಕಾರ ಮುಂದಾಗಿದ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:  ರಾಯಚೂರು: 57 ವರ್ಷಗಳಿಂದ ತೆಲುಗು ನೆಲದಲ್ಲಿ ಕನ್ನಡ ಕಂಪು!

44
ಮಧ್ಯಾಹ್ನದ ಬಿಸಿಯೂಟ ಯೋಜನೆ

2002-03ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ರಾಜ್ಯಾದ್ಯಂತ ಆರಂಭಿಸಿದೆ. ಶಾಲಾ ಮಕ್ಕಳಿಗೆ ಉತ್ತಮ ಪೋಷಕಾಂಶ ಭರಿತ ಆಹಾರವನ್ನು ಒದಗಿಸುವ ದೃಷ್ಟಿಯಿಂದ ಸರ್ಕಾರವು ಊಟದಲ್ಲಿ ತೊಗರಿಬೇಳೆ, ಸಂಸ್ಕರಿತ ತಾಳೆಎಣ್ಣೆ ಮತ್ತು ಕಡಲೆಬೇಳೆಗಳನ್ನೊಳಗೊಂಡ ಆಹಾರವನ್ನು ಒದಗಿಸುತ್ತಿದೆ.

ಇದನ್ನೂ ಓದಿ: ಧಾರವಾಡ: ಪಾರ್ಕ್‌ನಲ್ಲಿ ವಾಕ್‌ ಮಾಡಲೂ ಅನುಮತಿ ಬೇಕಾ?: ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

Read more Photos on
click me!

Recommended Stories