Gruha Lakshmi, Gruha Jyoti Schemes ನಿಲ್ಲುತ್ತವೆಯೇ? ಹೊಸ ಅರ್ಜಿ ಏಕೆ? ಸ್ಪಷ್ಟನೆ ಕೊಟ್ಟ ಸಿಎಂ ಡಿಕೆ ಶಿವಕುಮಾರ್

Published : Jun 14, 2026, 03:27 PM IST

'ಗೃಹಲಕ್ಷ್ಮಿ' ಮತ್ತು 'ಗೃಹಜ್ಯೋತಿ' ಯೋಜನೆಗಳು ನಿಲ್ಲುತ್ತವೆ ಎಂಬ ವದಂತಿಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಳ್ಳಿಹಾಕಿದ್ದಾರೆ. ನಕಲಿ ಫಲಾನುಭವಿಗಳನ್ನು ತೆಗೆದುಹಾಕಿ ಪಾರದರ್ಶಕತೆ ತರಲು ಮಾತ್ರ ದೃಢೀಕರಣ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

PREV
16

ಬೆಂಗಳೂರು (ಜೂ.14): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ 'ಗೃಹಲಕ್ಷ್ಮಿ' ಮತ್ತು 'ಗೃಹಜ್ಯೋತಿ' ನಿಂತುಹೋಗುತ್ತವೆ ಎಂಬ ವದಂತಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೆರೆ ಎಳೆದಿದ್ದಾರೆ. ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರಿಯಲಿವೆ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

26

ಕಳೆದ ಕೆಲವು ದಿನಗಳಿಂದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು ಅಥವಾ ದೃಢೀಕರಣ ನೀಡಬೇಕು ಎಂಬ ಸೂಚನೆ ಹೊರಬಿದ್ದ ಬೆನ್ನಲ್ಲೇ, ವಿರೋಧ ಪಕ್ಷಗಳು ಸರ್ಕಾರ ಹಣವಿಲ್ಲದೆ ಯೋಜನೆಗಳನ್ನು ನಿಲ್ಲಿಸಲು ಸಂಚು ರೂಪಿಸುತ್ತಿದೆ ಎಂದು ಆರೋಪಿಸಿದ್ದವು. ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಡಿ.ಕೆ. ಶಿವಕುಮಾರ್, ಪ್ರತಿಪಕ್ಷಗಳ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

36

ಮರು ಅರ್ಜಿ ಸಲ್ಲಿಕೆ ಅಥವಾ ದೃಢೀಕರಣದ ಉದ್ದೇಶವೇನು?

ಯೋಜನೆಗಳನ್ನು ನಿಲ್ಲಿಸುವುದು ಸರ್ಕಾರದ ಉದ್ದೇಶವಲ್ಲ. ಬದಲಾಗಿ, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆ ತಲುಪುವಂತೆ ಮಾಡುವುದು ಸರ್ಕಾರದ ಗುರಿಯಾಗಿದೆ. 'ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

46

ಈ ಬಗ್ಗೆ ಈಗಾಗಲೇ ಹಿರಿಯ ಅಧಿಕಾರಿಗಳು ಹಣ ಪೋಲಾಗುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಫಲಾನುಭವಿಗಳ ಹೆಸರು, ವಿಳಾಸ ಮತ್ತು ಬ್ಯಾಂಕ್ ಅಕೌಂಟ್ ನಂಬರ್ ಅನ್ನು ಖಚಿತಪಡಿಸಿಕೊಳ್ಳಲು ಈ ಪ್ರಕ್ರಿಯೆ ನಡೆಸಲಾಗುತ್ತಿದೆ' ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿವರಿಸಿದ್ದಾರೆ.

56

ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಯೋಜನೆ:

'ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಯೋಜನೆಗಳು. ಬಡ ಮತ್ತು ಮಧ್ಯಮ ವರ್ಗದ ಜನರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ. ಇದು ಕೇವಲ ಫಲಾನುಭವಿಗಳ ದೃಢೀಕರಣದ ಪ್ರಕ್ರಿಯೆಯೇ ಹೊರತು ಯೋಜನೆ ಸ್ಥಗಿತಗೊಳಿಸುವ ಮುನ್ಸೂಚನೆಯಲ್ಲ' ಎಂದು ಡಿಕೆಶಿ ಹೇಳಿದ್ದಾರೆ.

66

ಒಟ್ಟಿನಲ್ಲಿ, ತಾಂತ್ರಿಕ ಕಾರಣಗಳಿಗಾಗಿ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ಸರ್ಕಾರ ಮಾಹಿತಿ ನವೀಕರಣಕ್ಕೆ ಮುಂದಾಗಿದೆಯೇ ಹೊರತು, ಗ್ಯಾರಂಟಿಗಳಿಗೆ ಯಾವುದೇ ಕುತ್ತು ಬಂದಿಲ್ಲ ಎಂಬುದು ಸರ್ಕಾರದ ಸ್ಪಷ್ಟನೆಯಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories