Gruhalakhmi scheme New Guidlines: ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಗಟ್ಟಲು ಮುಂದಾಗಿರುವ ರಾಜ್ಯ ಸರ್ಕಾರ, ಮತ್ತೊಮ್ಮೆ ಎಲ್ಲ ಫಲಾನುಭವಿಗಳು ಅರ್ಜಿ ಸಲ್ಲಿಸಲು ಮಾರ್ಗಸೂಚಿಗಳನ್ನು ಶೀಘ್ರ ಪ್ರಕಟಿಸಲಿದೆ. ಅರ್ಜಿ ಸಲ್ಲಿಸಲು ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ?
Gruhalakshmi scheme: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹೊಸ ಮಾರ್ಗಸೂಚಿ
ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಗಟ್ಟಲು ಮುಂದಾಗಿರುವ ರಾಜ್ಯ ಸರ್ಕಾರ, ಮತ್ತೊಮ್ಮೆ ಎಲ್ಲ ಫಲಾನುಭವಿಗಳು ಅರ್ಜಿ ಸಲ್ಲಿಸಲು ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿದ್ದು, ಅದನ್ನು ಎರಡ್ಮೂರು ದಿನದಲ್ಲಿ ಅಂತಿಮಗೊಳಿಸಲಿದೆ.
24
ಗೃಹಲಕ್ಷ್ಮಿ ಯೋಜನೆಗೆ ಯಾರು ಅರ್ಹರು, ಯಾರು ಅನರ್ಹರು?
ಮೃತಪಟ್ಟವರು, ಐಟಿ/ಜಿಎಸ್‌ಟಿ ಪಾವತಿದಾರರಿಗೂ ಹಣ ಸಂದಾಯವಾಗುತ್ತಿದ್ದುದನ್ನು ಗಂಭೀರವಾಗಿ ಪರಿಗಣಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇದೀಗ ಕೊನೇ ಹಂತದ ತಯಾರಿ ಮಾಡಿಕೊಳ್ಳುತ್ತಿದೆ. ಶೀಘ್ರದಲ್ಲೇ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಅವಕಾಶ ಕಲ್ಪಿಸಲಿದೆ. ಅನಕ್ಷರಸ್ಥರು ಸೇರಿ ಅರ್ಜಿ ಸಲ್ಲಿಸಲು ಬಾರದವರಿಗೆ ಸಹಾಯ ಮಾಡಲೆಂದು ಅಂಗನವಾಡಿ ಸಿಬ್ಬಂದಿ ಬಳಸಿಕೊಳ್ಳಲು ಇಲಾಖೆ ಮುಂದಾಗಿದೆ.
34
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಅಂಗನವಾಡಿ ಸಿಬ್ಬಂದಿಯ ಮೊಬೈಲ್‌ನಲ್ಲಿ ಆ್ಯಪ್ ಇನ್‌ಸ್ಟಾಲ್ ಆಗಲಿದ್ದು ಇದರ ಮೂಲಕ ಅನಕ್ಷರಸ್ಥರು, ಬಡವರು ಅರ್ಜಿ ಸಲ್ಲಿಸಬಹುದಾಗಿದೆ. ಇದಲ್ಲದೆ, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಸೇವಾ ಕೇದ್ರಗಳಲ್ಲೂ ಅರ್ಜಿ ಸಲ್ಲಿಸಬಹುದು. ಈ ಬಾರಿ ಅರ್ಜಿ ಸಲ್ಲಿಸುವಾಗ ಬಯೋಮೆಟ್ರಿಕ್, ಫೇಸ್ ರೆಕಗ್ನೇಷನ್ ಸಂಗ್ರಹಿಸಲು ತೀರ್ಮಾನಿಸಲಾಗಿದೆ.
ಹೆಸರು, ವಿಳಾಸ, ಆಧಾರ್ ಸಂಖ್ಯೆ ಸೇರಿ ಹಿಂದಿದ್ದ ಅರ್ಜಿಯಲ್ಲಿನ ಅಂಶಗಳನ್ನೇ ಮುಂದುವರೆಸಿದ್ದು, ಕರ್ನಾಟಕದಲ್ಲಿರುವ ಬ್ಯಾಂಕ್ ಖಾತೆ ಮಾಹಿತಿ ಕಡ್ಡಾಯವಾಗಿ ನೀಡಬೇಕಿದೆ. ಜಾತಿ ಪ್ರಮಾಣ ಪತ್ರ ನೀಡದಿದ್ದಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕಿದೆ. ಈಗಾಗಲೇ ಯೋಜನೆಯ ಪ್ರಯೋಜನ ಪಡೆಯುತ್ತಿರುವ ಮಹಿಳೆಯರು, ಹೊಸದಾಗಿ ಸೇರ್ಪಡೆ ಬಯಸುವವರು, ಬಿಪಿಎಲ್, ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಮೃತರ ಹೆಸರಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಐಟಿ/ಜಿಎಸ್‌ಟಿ ಪಾವತಿದಾರರೂ ಯೋಜನೆಗೆ ಅರ್ಹರಾಗಿರುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ