ವಾಯುಭಾರ ಕುಸಿತ; ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ!

Published : Apr 21, 2025, 09:42 AM IST

Karnataka Rain Alert: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಹಲವೆಡೆ ಐದು ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ. 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ.

PREV
17
ವಾಯುಭಾರ ಕುಸಿತ; ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದಾಗಿ ರಾಜ್ಯದ ಹಲವೆಡೆ ಐದು ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. 30-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.

27

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ನಗರ, ಕೋಲಾರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ,  ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಏ.21, 22 ರಂದು ಆಲಿಕಲ್ಲು ಸಹಿತ ಮಳೆ ಸಾಧ್ಯತೆಗಳಿವೆ. ಬಳಿಕ ಒಂದು ವಾರಗಳ ಕಾಲ ರಾಜ್ಯದ 24 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ.

37

24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30–50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಇನ್ನು ಮುಂದಿನ ಮೂರು ದಿನ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ  ನೀಡಲಾಗಿದೆ.

47

ಬೆಂಗಳೂರು ಹವಾಮಾನ

ಏಪ್ರಿಲ್ 25 ಮತ್ತು 26ರ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿಯೂ  ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ಹೇಳಿದೆ. ಮುಂದಿನ ಒಂದು ವಾರ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಳಗ್ಗೆಯಿಂದ ಬಿಸಿಲು ಕಂಡು ಬಂದ್ರು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಗಳ ದಟ್ಟವಾಗಿವೆ. ನಗರದಲ್ಲಿ ಪೂರ್ವ ಮುಂಗಾರು ಅವಧಿಯಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.113ರಷ್ಟು ಹೆಚ್ಚಿನ ಮಳೆಯಾಗಿದೆ.

57
Rain Alert In Bihar

ಮಾ.1 ರಿಂದ ಪೂರ್ವ ಮುಂಗಾರು ಅವಧಿ ಆರಂಭಗೊಂಡಿದ್ದು, ಏ.20ರವರೆಗೆ ವಾಡಿಕೆ ಪ್ರಕಾರ ನಗರದಲ್ಲಿ ಈ ಅವಧಿಯಲ್ಲಿ 28.8 ಸೆಂ.ಮೀ ನಷ್ಟು ಮಳೆಯಾಗಬೇಕು. ಆದರೆ, ನಗರದಲ್ಲಿ ಈ ಬಾರಿ 61.2 ಸೆಂ.ಮೀ ಮಳೆಯಾಗಿದೆ. ಈ ಮೂಲಕ ವಾಡಿಕೆ ಪ್ರಮಾಣಕ್ಕಿಂತ ಶೇ.113ರಷ್ಟು ಹೆಚ್ಚಿನ ಪ್ರಮಾಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

67
Bihar Rain Alert

ಕೊಡಗಿನ ಹಲವೆಡೆ ಭರ್ಜರಿ ಮಳೆ

ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಗಾಳಿಬೀಡು, ಮೇಕೇರಿ, ಮಕ್ಕಂದೂರು, ಸುಂಟಿಕೊಪ್ಪ, ಬೋಯಿಕೇರಿ ಸೇರಿದಂತೆ ಹಲವೆಡೆ ಭರ್ಜರಿ ಮಳೆ ಸುರಿದಿದೆ. ಹಲವು ದಿನಗಳಿಂದ ಮಳೆಯಿಲ್ಲದೆ ಬಿಸಿಲ ಧಗೆ ಇದ್ದ ಮಡಿಕೇರಿಗೆ ಉತ್ತಮ ಮಳೆಯಾಗಿ ಇಳೆಯನ್ನು ತಂಪು ಮಾಡಿತು. ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ಬಳಿಕ ಜಿಲ್ಲೆಯ ಹಲವೆಡೆ ಮಳೆಯಾಯಿತು.

77

ಹಾವೇರಿ ಜಿಲ್ಲೆಯಲ್ಲಿಯೂ ಮಳೆ

ಜಿಲ್ಲೆಯ ವಿವಿಧೆಡೆ ಭಾನುವಾರ ಮಳೆಯಾಗಿದೆ. ಬ್ಯಾಡಗಿ, ರಾಣಿಬೆನ್ನೂರು ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾನುವಾರ ಮಳೆಯಾಗಿದೆ. ಬ್ಯಾಡಗಿ ಪಟ್ಟಣದಲ್ಲಿ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಿದೆ. ಗಾಳಿ ರಭಸಕ್ಕೆ 4 ಮರಗಳು ಹಾಗೂ 9 ವಿದ್ಯುತ್‌ ಕಂಬಗಳು ಧರೆಗುರುಳಿವೆ. ಜಿಲ್ಲೆಯ ಇನ್ನುಳಿದ ತಾಲೂಕುಗಳಲ್ಲಿ ಮೋಡ, ಗಾಳಿ ಗುಡುಗು ಆಗಿದ್ದು, ಕೆಲವು ಕಡೆ ತುಂತುರು ಮಳೆಯಾಗಿದೆ.

Read more Photos on
click me!

Recommended Stories