ಜೈ ಭಾರತ್ ಮಾತಾ ಸೇವಾ ಸಮಿತಿ ಸಂಸ್ಥಾಪಕ, ಕಲಬುರಗಿ ಮಹಾರಾಷ್ಟ್ರಗಳಲ್ಲಿ ಪ್ರಭಾವಿ ಸ್ವಾಮೀಜಿಗಳಾದ ನಿರಗುಡಿ ಹವಾ ಮಲ್ಲಿನಾಥ ಮುತ್ಯಾಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕಲಬುರಗಿ 2 ನೇ ಜಿಲ್ಲಾ ಸತ್ರ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.
ಹವಾ ಮಲ್ಲಿನಾಥ ಮುತ್ಯ ಅವರ ಸಂಬಂಧಿ ಪ್ರಕಾಶ್ ಮೇಲೆ ಅಟ್ರಾಸಿಟಿ ಮತ್ತು ಅತ್ಯಾಚಾರ ನಡೆಸಿದ ಬಗ್ಗೆ ದೂರು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಹವಾ ಮಲ್ಲಿನಾಥ ಮುತ್ಯಾ ವಿರುದ್ಧವೂ ಕುಮ್ಮಕ್ಕು ನೀಡಿದ್ದಾರೆಂಬ ಆರೋಪದ ಮೇಲೆ 498/A, 506,109, 34 ಅಡಿ 2018 ರಲ್ಲಿ ಕಲಬುರಗಿ ನಗರದ ಎಮ್ ಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗಿಲ್ಲ.
ಹಾಜರಾಗದ ಹಿನ್ನೆಲೆ ನ್ಯಾಯಾಲಯ ಬಾಡಿ ವಾರೆಂಟ್ ಮಾಡಿದ ಕಾರಣ ಇಂದು ನ್ಯಾಯಾಲಯದ ಮುಂದೆ ಶರಣಾಗಿದ್ದ ಹವಾ ಮಲ್ಲಿನಾಥ್ ಮುತ್ಯಾ.
ನ್ಯಾಯಾಲಯದ ಆದೇಶ ಹೊರಬೀಳುತ್ತಿದ್ದಂತೆಯೇ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದ ಪೊಲೀಸರು. ಕಲಬುರಗಿ ಜಿಲ್ಲೆಯಲ್ಲಿ ಅಪಾರ ಭಕ್ತರನ್ನು ಹೊಂದಿರುವ ಸ್ವಾಜೀಜಿ. ಹಲವು ಸಾಮಾಜಿಕ ಕಾರ್ಯಗಳ ಮೂಲಕ ಜನಪ್ರಿಯರಾಗಿದ್ದಾರೆ.