ಉಪ್ಪು ತಿಂದವ್ರು ನೀರು ಕುಡೀಬೇಕು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಕೇಸ್‌ಗೆ ಎಚ್‌ಡಿಕೆ ಪ್ರತಿಕ್ರಿಯೆ

First Published | Apr 29, 2024, 4:23 AM IST

ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಯಾರೇ ತಪ್ಪು ಮಾಡಿರಲಿ. ಈ ನೆಲದ ಕಾನೂನಿನ ಪ್ರಕಾರ ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ತಿಳಿಸಿದರು.

ಬೆಂಗಳೂರು (ಏ.29): ಹಾಸನ ಸಂಸದ ಹಾಗೂ ತಮ್ಮ ಸೋದರನ ಪುತ್ರ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪ ಸಂಬಂಧ ಎಸ್‌ಐಟಿ ರಚನೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದರು.

Tap to resize

ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಯಾರೇ ತಪ್ಪು ಮಾಡಿರಲಿ. ಈ ನೆಲದ ಕಾನೂನಿನ ಪ್ರಕಾರ ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ತಿಳಿಸಿದರು.

ತನಿಖೆಯ ಮೂಲಕ ಎಲ್ಲಾ ಸತ್ಯಾಂಶಗಳು ಹೊರಗೆ ಬರಲಿ. ಯಾರೇ ತಪ್ಪು ಎಸಗಿದ್ದರೂ, ಅವರು ಯಾರೇ ಆಗಿದ್ದರೂ ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸುವ ಪ್ರಶ್ನೆ ಬರುವುದಿಲ್ಲ. ಆದ್ದರಿಂದ ತನಿಖೆಯ ವರದಿ ಸಂಪೂರ್ಣವಾಗಿ ಹೊರ ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದರು.

ಮತದಾರರಿಗೆ ಹಣ ಕೊಡರೇ ರಣಹೇಡಿಗಳು: ತಮ್ಮನ್ನು ರಣಹೇಡಿ ಎಂದು ಕರೆದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತೀವ್ರ ಹರಿಹಾಯ್ದಿದ್ದಾರೆ. 

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್ ಗಿಫ್ಟ್ ಕೂಪನ್, ಹಣ ಹಂಚಿಕೆ ಮಾಡುವವರು ರಣಹೇಡಿಗಳು ಎಂದು ಕಿಡಿಕಾರಿದರು.

Latest Videos

click me!