Published : Oct 07, 2025, 04:07 PM ISTUpdated : Oct 07, 2025, 04:11 PM IST
HD Devegowda Admitted Hospital ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವೇಗೌಡರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
24
ಚಿಕಿತ್ಸೆಗೆ ಸ್ಪಂದನೆ
ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಶೀಘ್ರದಲ್ಲಿಯೇ ಕುಟುಂಬ ಅಥವಾ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಬರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
34
ಬಿಜೆಪಿ ಜೊತೆ ಮೈತ್ರಿ
92 ವರ್ಷದ ಹೆಚ್‌ಡಿ ದೇವೇಗೌಡರು, ರಾಜ್ಯಸಭೆ ಸಂಸದರಾಗಿದ್ದಾರೆ. ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ದೇವೇಗೌಡರ ಪುತ್ರ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ ಸಚಿವರಾಗಿದ್ದಾರೆ.
ಹೆಚ್‌ಡಿ ದೇವೇಗೌಡರ ವಯಸ್ಸು 92 ಆಗಿದ್ರೂ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ರಾಜ್ಯಸಭಾ ಅಧಿವೇಶನದಲ್ಲಿಯೂ ದೇವೇಗೌಡರು ಭಾಗಿಯಾಗುತ್ತಾರೆ. ಲೋಕಸಭಾ ಚುನಾವಣೆ ಮತ್ತು ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿಯೂ ದೇವೇಗೌಡರು ಪ್ರಚಾರ ನಡೆಸಿದ್ದರು.