ಮಾನ್ವಿ: ಬೆಳ್ಳಂಬೆಳಗ್ಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಎನ್‌ಎಸ್ ಬೋಸರಾಜು ಸಾಥ್

Published : Jan 22, 2025, 05:43 PM IST

ರಾಯಚೂರ ಜಿಲ್ಲೆಯ ಪ್ರವಾಸದಲ್ಲಿದ್ದ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್. ಬೋಸರಾಜು ಅವರೊಂದಿಗೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದರು.

PREV
14
ಮಾನ್ವಿ: ಬೆಳ್ಳಂಬೆಳಗ್ಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಎನ್‌ಎಸ್ ಬೋಸರಾಜು ಸಾಥ್

ಇಂದು ಬೆಳಗ್ಗೆಯೇ ಮಾನ್ವಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿರುವ ಸೇವೆಗಳು ಹಾಗೂ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಇದೆ ವೇಳೆ ಸಚಿವರು, ಆಸ್ಪತ್ರೆಯ ವಾರ್ಡ್‌ಗಳಿಗೆ ಸಂಚರಿಸಿ ಬಾಣಂತಿಯರ ಆರೋಗ್ಯ ವಿಚಾರಿಸಿದರು. ಪ್ರತಿ ದಿನ ನಿಮಗೆ ಸರಿಯಾದ ರೀತಿಯಲ್ಲಿ ಊಟ ನೀಡುತ್ತಾರೆಯೆ? ಚಿಕಿತ್ಸೆ ಮತ್ತು ಔಷಧಿಯನ್ನು ಸರಿಯಾಗಿ ಕೊಡುತ್ತಾರಾ? ಎಂದು ಕೇಳಿ ಬಾಣಂತಿಯರ ಯೋಗಕ್ಷೇಮ ವಿಚಾರಿಸಿದರು. ಆಸ್ಪತ್ರೆಯಲ್ಲಿ ನಮಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿದೆ. ಎಲ್ಲಾ ವೈದ್ಯರು ನಮಗೆ ಉತ್ತಮ ಚಿಕಿತ್ಸೆ ಕೊಡುತ್ತಾರೆ. ರೋಗಿಗಳಿಗೆ ಸ್ಪಂದಿಸುತ್ತಾರೆ ಎಂದು ಇದೆ ವೇಳೆ ಬಾಣಂತಿಯರು ಸಚಿವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
 

24

ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆ, ಲಭ್ಯವಿರುವ ಹಾಸಿಗೆಗಳ ಸಂಖ್ಯೆ ಹಾಗೂ ವೈದ್ಯರ ಲಭ್ಯತೆ ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಸಂಖ್ಯೆಯ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು. ರಾತ್ರಿ ವೇಳೆಯಲ್ಲೂ ಚಿಕಿತ್ಸೆ ನೀಡಿ: ಯಾವುದೇ ಗ್ರಾಮದಿಂದ ರಾತ್ರಿ ವೇಳೆಯಲ್ಲಿ ತುರ್ತು ಚಿಕಿತ್ಸೆ ಕೋರಿ ಬರುವ ಬಾಣಂತಿಯರಿಗೆ ವೈದ್ಯರು ಮತ್ತು ಆಸ್ಪತ್ರೆಯಲ್ಲಿನ ಸಿಬ್ಬಂದಿ ತಕ್ಷಣವೇ ಸ್ಪಂದನೆ ನೀಡಬೇಕು. ಯಾವುದೇ ನೆಪ ಹೇಳದೇ ಬೇರೆಡೆ ಕಳುಹಿಸಬಾರದು.  ಪ್ರಥಮ ಹಂತದ ಚಿಕಿತ್ಸೆಗೆ ಕ್ರಮವಹಿಸಿ, ಹೆಚ್ಚಿನ ಚಿಕಿತ್ಸೆಯ ಅವಶ್ಯವಿದ್ದರೆ ಮಾತ್ರ ಬೇರೆಡೆ ಕಳುಹಿಸಲು ಕ್ರಮವಹಿಸಬೇಕು ಎಂದು ಸಚಿವರು ಇದೆ ವೇಳೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
 

34

ಸಚಿವರಿಗೆ ಮನವಿ:
ನರ್ಸ್ ಸಿಬ್ಬಂದಿಯ ವೇತನ ಹೆಚ್ಚಳ ಮಾಡುವಂತೆ ಇದೆ ವೇಳೆ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ವೇತನ ಹೆಚ್ಚಳಕ್ಕೆ ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

44

ಖಾಲಿ ಹುದ್ದೆಗಳ ಶೀಘ್ರ ಭರ್ತಿಗೆ ಕ್ರಮ: 

ಮಾನ್ವಿ ಸೇರಿದಂತೆ ಕೆಲವು ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಕೊರತೆ ಇರುವುದು ಗಮನಕ್ಕೆ ಬಂದಿದೆ. ಶ್ರೀಘ್ರದಲ್ಲಿ ಭರ್ತಿಗೆ ಕ್ರಮವಹಿಸಲಾಗುವುದು. ಆಸ್ಪತ್ರೆಯಲ್ಲಿ ತುರ್ತ ಚಿಕಿತ್ಸೆಗೆ ಅನುಕೂಲವಾಗುವಂತೆ ಅವಶ್ಯಕತೆ ಇರುವ ಕಡೆಗಳಲ್ಲಿ ನಿಯಮಾನುಸಾರ ಹೊರಗುತ್ತಿಗೆ ಆಧಾರದ ಮೇಲೆ  ಸಿಬ್ಬಂದಿ ಪಡೆಯಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories