ಬೀದರ್, ಬೆಳಗಾವಿಯಲ್ಲಿ ಭಾರಿ ಮಳೆ: ಶಿವಮೊಗ್ಗದಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

Published : Mar 15, 2026, 10:37 PM IST

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಶಿವಮೊಗ್ಗದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡರೆ, ಬೀದರ್ ಮತ್ತು ಬೆಳಗಾವಿಯಲ್ಲಿ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.

PREV
15
ಶಿವಮೊಗ್ಗ, ಬೀದರ್ ಬೆಳಗಾವಿಯಲ್ಲಿ ಮಳೆ

ಇಂದು ಸಂಜೆ ವೇಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮತ್ತೆ ಕೆಲವೆಡೆ ಧಾರಾಕಾರ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ, ಶಿವಮೊಗ್ಗ, ಬೀದರ್ ಬೆಳಗಾವಿಯಲ್ಲಿ ಮಳೆ ಜೋರಾಗಿ ಸುರಿದಿದೆ.

25
ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ

ಶಿವಮೊಗ್ಗದಲ್ಲಿಯೂ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಿದ್ದು, ಶಿವಮೊಗ್ಗ ಹೊರವಲಯದ ಗೋಪಿ ಶೆಟ್ಟಿ ಕೊಪ್ಪದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಗೆ ತೆಂಗಿನ ಗರಿಗಳು ಹೊತ್ತಿ ಉರಿದಿದ್ದು, ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದರು.

35
ಬೀದರ್‌ನಲ್ಲಿಯೂ ಗುಡುಗು ಸಹಿತ ಮಳೆ

ಹಾಗೆಯೇ ಬೀದರ್‌ನಲ್ಲಿಯೂ ಗುಡುಗು ಸಹಿತ ಮಳೆಯಾಗಿದ್ದು, ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಗಡಿ ಜಿಲ್ಲೆಯ ಜನರಿಗೆ ವರುಣ ತಂಪೆರೆದಿದ್ದಾನೆ. ಬೀದರ್ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.

45
ನಿರಂತರ ಮಳೆಗೆ ರಸ್ತೆಗಳು ಜಲಾವೃತ

ನಿರಂತರ ಮಳೆಗೆ ರಸ್ತೆಗಳು ಜಲಾವೃತವಾಗಿವೆ. ಭಾರಿ ಮಳೆಯಿಂದ ವಾಹನ ಸವಾರರ ಸಂಚರಿಸಲು ಪರದಾಟ ನಡೆಸಿದ್ದಾರೆ. ಔರಾದ್, ಕಮಲನಗರ, ಭಾಲ್ಕಿ, ಹುಲಸೂರು, ಬಸವಕಲ್ಯಾಣ, ಚಿಟಗುಪ್ಪಾ ಸೇರಿದಂತೆ ಹಲವೆಡೆ ಮಳೆಯಾಗಿದೆ.

55
ಬೆಳಗಾವಿಯಲ್ಲೂ ನಿರಂತರ ಒಂದು ಗಂಟೆ ಸುರಿದ ಧಾರಾಕಾರ ಮಳೆ

ಬೆಳಗಾವಿಯಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ನಿರಂತರ ಒಂದು ಗಂಟೆ ಸುರಿದ ಧಾರಾಕಾರ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನಿಚ್ಚಣಕಿ ಗ್ರಾಮದಲ್ಲಿ ಚರಂಡಿಗಳು ಬ್ಲಾಕ್ ಆಗಿ ರಸ್ತೆಗಳಲ್ಲೇ ನೀರು ಹರಿದಿದ್ದರಿಂದ ಗ್ರಾಪಂ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories