Karnataka Rain Pictures: ಮುಳುಗಿದ ಹಲವು ಗ್ರಾಮ, ಜನಜೀವನ ಅಸ್ತವ್ಯಸ್ತ
First Published | Aug 2, 2022, 3:41 PM ISTರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಹಾಮಳೆಯಾಗುತ್ತಿದ್ದು, ಆಗಿರುವ ಅವಾಂತರ ಒಂದೆಡರಡಲ್ಲಿ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಜನ ಹೈರಾಣರಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಆಗಸ್ಟ್ ತಿಂಗಳ ಮೊದಲ ವಾರ ರಾಜ್ಯದ ಕರಾವಳಿ ಮತ್ತು ಒಳನಾಡಿನಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ಮಂಗಳವಾರದಿಂದ ಶನಿವಾರದವರೆಗೆ ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ‘ಆರೆಂಜ್’ ಮತ್ತು ‘ಯೆಲ್ಲೋ ಅಲರ್ಚ್’ ಘೋಷಣೆಯಾಗಿದೆ.