ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿದಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಸಂಜೆಯಾಗ್ತಿದ್ದಂತೆ ಮಳೆ ಶುರುವಾಗುತ್ತಿದೆ. ಮುಂದಿನ 24 ಗಂಟೆ ಬೆಂಗಳೂರಿನ ಕೆಲ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆಗಳಿವೆ. ಇಂದು ಸಂಜೆ ಮತ್ತು ರಾತ್ರಿ ವೇಳೆಗೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಗಂಟೆಗೆ 30–40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಗಳಿವೆ. ಗರಿಷ್ಠ ತಾಪಮಾನ 33°C, ಕನಿಷ್ಠ 22°C ನಿರೀಕ್ಷೆಗಳಿವೆ
25
ಮುಂಗಾರು ಪೂರ್ವ ಮಳೆ ಅಬ್ಬರ
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಮುಂದುವರಿದಿದೆ. ನಗರದ ಹಲವೆಡೆ ಜಲಾವೃತ, ಟ್ರಾಫಿಕ್ ಸಮಸ್ಯೆಯುಂಟಾಗಿದ್ದು, ಬೆಂಗಳೂರು ನಗರದಲ್ಲಿ 46.0 ಮಿಮೀ ಮಳೆ ದಾಖಲಾಗಿದೆ. AWS ಕೇಂದ್ರಗಳ ಪ್ರಕಾರ ಬೆಂಗಳೂರಿನಲ್ಲಿ 44.5 ಮಿಮೀ, HAL ವಿಮಾನ ನಿಲ್ದಾಣದಲ್ಲಿ 20.8 ಮಿಮೀ ಮಳೆ ದಾಖಲಾಗಿದೆ.
35
ಎಲ್ಲೆಲ್ಲಿ ಎಷ್ಟು ಮಳೆ?
ಮಂಗಳೂರಿನಲ್ಲಿ 11.5 ಮಿಮೀ, ಹಾಸನ ಜಿಲ್ಲೆಯಲ್ಲಿ 3 ಮಿಮೀ, ರಾಮನಗರ ಜಿಲ್ಲೆಯ ಚಂದೂರಾಯನಘಳ್ಳಿಯಲ್ಲಿ 23.5 ಮಿಮೀ, ಮೈಸೂರು ಜಿಲ್ಲೆಯ ನಾಗನಹಳ್ಳಿಯಲ್ಲಿ 19 ಮಿಮೀ ಮಳೆ ದಾಖಲಾಗಿದೆ. KSNDMC ವರದಿ ಪ್ರಕಾರ ಬೆಂಗಳೂರು ದಕ್ಷಿಣದ ಎಲೆತೋಟದಹಳ್ಳಿಯಲ್ಲಿ 5.5 ಮಿಮೀ, ಹಾಸನ ಜಿಲ್ಲೆಯ ಕರೇಹಳ್ಳಿಯಲ್ಲಿ 5 ಮಿಮೀ ಮಳೆ ದಾಖಲಾಗಿದೆ.
ಗದಗ ಜಿಲ್ಲೆಯಲ್ಲಿ ಮಿಂಚು ಸಹಿತ ಮೋಡಗಳ ಅಬ್ಬರ ಶುರುವಾಗಿದೆ. ಕರಾವಳಿ ಭಾಗದಲ್ಲಿ ಮಳೆ ಜೊತೆಗೆ ಗುಡುಗು-ಮಿಂಚಿನ ವಾತಾವರಣ ಇರಲಿದೆ. ಕೊಡಗು ಜಿಲ್ಲೆಯ ಬಿ.ಶೆಟ್ಟಿಗೆರೆಯಲ್ಲಿ 4.5 ಮಿಮೀ ಮಳೆ ದಾಖಲಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಮಳೆ ಮತ್ತಷ್ಟು ತೀವ್ರವಾಗುವ ಸಾಧ್ಯತೆಗಳಿವೆ. ಬೆಂಗಳೂರು, ಮೈಸೂರು, ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ನೀಡಲಾಗಿದೆ.
ಗುಡುಗು, ಮಿಂಚು ಹಾಗೂ ಬಿರುಗಾಳಿಯ ವೇಳೆ ಸಾರ್ವಜನಿಕರು ಸುರಕ್ಷತಾ ಕ್ರಮ ಪಾಲಿಸುವಂತೆ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆಗಳಿದ್ದು, ವಾಹನ ಸವಾರರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ