ರೋಹಿಣಿ ಸಿಂಧೂರಿ ಮತ್ತೆ ಎತ್ತಂಗಡಿ: ಬಿಜೆಪಿ ಸರ್ಕಾರದಲ್ಲಿ ಇದು 2ನೇ ಬಾರಿ

First Published Feb 20, 2020, 6:20 PM IST

ನಿಷ್ಠ ಅಧಿಕಾರಿಗಳಿಗಿದು ಕಾಲವಲ್ಲ ಎಂಬುದು ಪದೇಪದೆ ಸಾಬೀತಾಗುತ್ತಲೇ ಇದೆ. ತಮ್ಮ ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತದಿಂದಲೇ ಹೆಸರುವಾಸಿಯಾದವರು ಖಡಕ್ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನ ಮತ್ತೆ ಎತ್ತಂಗಡಿ ಮಾಡಲಾಗಿದೆ. ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೇರಿದ ಬಳಿಕ 2009ನೇ ಬ್ಯಾಚ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು 2ನೇ ಬಾರಿಗೆ ವರ್ಗಾವಣೆ ಭಾಗ್ಯ ಸಿಕ್ಕಿದೆ.

ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು (ಗುರುವಾರ) ಆದೇಶ ಹೊರಡಿಸಿದ್ದು, ರೋಹಿಣಿ ಸಿಂಧೂರಿ ಅವರನ್ನ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆಯನ್ನಾಗಿ ಟ್ರಾನ್ಸ್‌ಫರ್ ಮಾಡಲಾಗಿದೆ.
undefined
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ರೋಹಿಣಿ ಸಿಂಧೂರಿ ಅವರು ಕಾರ್ಮಿಕ ಇಲಾಖೆ (ಕಟ್ಟಡ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿ) ಕಾರ್ಯದರ್ಶಿಯಾಗದ್ದರು.
undefined
ಮೈತ್ರಿ ಸರ್ಕಾರದ ಬಳಿಕ ಜುಲೈನಲ್ಲಿ ಬಿಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸೆಪ್ಟೆಂಬರ್‌ನಲ್ಲಿ ರೋಹಿಣಿ ಸಿಂಧೂರಿ ಅವರನ್ನ ಅವರನ್ನ ಕಟ್ಟಡ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿಯಿಂದ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತೆಯಾಗಿ ವರ್ಗಾವಣೆ ಮಾಡಲಾಗಿತ್ತು.
undefined
ಇದೀಗ ಮತ್ತೆ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದಿಂದ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆಯನ್ನಾಗಿ ಟ್ರಾನ್ಸ್‌ಫರ್ ಮಾಡಲಾಗಿದೆ.
undefined
2009ನೇ ಬ್ಯಾಚ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಬಿಜೆಪಿ ಸರ್ಕಾರದಲ್ಲಿ 2ನೇ ಬಾರಿಗೆ ವರ್ಗಾವಣೆ ಭಾಗ್ಯ
undefined
ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ಅನ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಲು ಒಪ್ಪಿಲ್ಲ ಎಂಬ ಕಾರಣಕ್ಕೆ ಯಾವುದೇ ಹುದ್ದೆ ತೋರಿಸದೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ಎತ್ತಂಗಡಿ ಮಾಡಲಾಗಿತ್ತು.
undefined
ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ‘ಕಲ್ಯಾಣ ನಿಧಿ’ಯ ಹಣವನ್ನು ನೆರೆ ಪರಿಹಾರಕ್ಕೆ ಬಳಸಲು ವರ್ಗಾವಣೆ ಮಾಡಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಎತ್ತಂಗಡಿಯಾಗಿತ್ತು ಎನ್ನುವ ಮಾತುಗಳು ಕೇಳಿಬಂದಿದ್ದವು.
undefined
ಈ ಮೂಲಕ ಬಿಜೆಪಿ ಸರ್ಕಾರ ಅದಿಕಾರಕ್ಕೆ ಬಂದು 6 ತಿಂಗಳಲ್ಲಿ ರೋಹಿಣಿ ಸಿಂಧೂರಿಗೆ ಎರಡನೇ ಬಾರಿಗೆ ವರ್ಗಾವಣೆ ಭಾಗ್ಯ ಸಿಕ್ಕಿದೆ.
undefined
click me!