ಕರ್ನಾಟಕದ ರೆಬೆಲ್ ಆಫೀಸರ್, ಲೇಡಿ ಸಿಂಗಮ್ ರೋಹಿಣಿ ಸಿಂಧೂರಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಗಂಗಾವತಿಯ ಅಂಜನಾದ್ರಿಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ವಿಶೇಷ ಪೂಜೆ ಸಲ್ಲಿಸಿದದ್ದಾರೆ. ಹನುಮ ಹುಟ್ಟಿದ ನಾಡು ಎಂದು ಹೆಸರಾದ ಅಂಜನಾದ್ರಿ ಬೆಟ್ಟಕ್ಕೆ ರೋಹಿಣಿ ಸಿಂಧೂರಿ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿದ್ದು, ವಾಯುಪುತ್ರನ ದರ್ಶನ ಪಡೆದಿದ್ದಾರೆ.
ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಆಂಜನೇಯನ ಜನ್ಮಸ್ಥಳ ಅಂಜನಾದ್ರಿಅಭಿವೃದ್ಧಿಗೆ 100 ಕೋಟಿ ಘೋಷಣೆ ಮಾಡಿದೆ. ಈ ಬೆನ್ನಲ್ಲೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಭೇಟಿ ನೀಡಿದ್ದಾರೆ. ಇನ್ನು ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ಘೋಷಣೆ ಮಾಡಿರುವುದರಿಂದ ಜಿಲ್ಲಾಡಳಿತ ಕಾರ್ಯೋನ್ಮುಖವಾಗಿದ್ದು, ವಿವಿಧ ಖಾಸಗಿ ಏಜೆನ್ಸಿಗಳ ಮೂಲಕ ಪ್ರಸ್ತಾವನೆ ಆಹ್ವಾನಿಸಿದೆ.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕರ್ತವ್ಯ ನಿರ್ವಹಣೆಯಲ್ಲಿ ತಮಗೆ ಕಿರುಕುಳ ನೀಡುತ್ತಿದ್ದಾರೆ, ಅವರು ನೀಡುತ್ತಿರುವ ಕಿರುಕುಳ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಆರೋಪಿಸಿ ಶಿಲ್ಪಾ ರಾಜೀನಾಮೆ ಘೋಷಿಸಿದ್ದರು. ಇದರ ಬೆನ್ನಲ್ಲೇ ಶಿಲ್ಪಾ ನಾಗ್ ಅವರು ಸಿಎಸ್‌ಆರ್ ಅನುದಾನ ಬಳಕೆಯ ಲೆಕ್ಕ ನೀಡಿಲ್ಲ, ಕೊರೋನಾ ಕೇಂದ್ರಗಳನ್ನು ಸ್ಥಾಪಿಸಲು ಕೆಲಸ ಮಾಡಿಲ್ಲ. ಈ ಬಗ್ಗೆ ಕೇಳಿದ್ದಕ್ಕೆ ಅನಗತ್ಯ ವಿವಾದ ಮಾಡುತ್ತಿದ್ದಾರೆ ಎಂದು ರೋಹಿಣಿ ಸಿಂಧೂರಿ ದೂರಿದ್ದರು.
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್ ನಡುವಿನ ಜಟಾಪಟಿ ರಾಜಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡುವುದರ ಮೂಲಕ ರಾಜ್ಯ ಸರ್ಕಾರ ವಿವಾದಕ್ಕೆ ತೆರೆ ಎಳೆದಿತ್ತು.
ರೋಹಿಣಿ ಸಿಂಧೂರಿ ಅವರನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ. ಶಿಲ್ಪಾ ನಾಗ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತ ವಿಭಾಗದ ನಿರ್ದೇಶಕರ್ನಾಗಿ ನೇಮಿಸಿ ವರ್ಗಾಯಿಸಲಾಗಿದೆ. ರೋಹಿಣಿ ಸಿಂಧೂರಿ ವರ್ಗಾವಣೆಯಿಂದ ತೆರವಾದ ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಡಾ.ಗೌತಮ್ ಬಗಾದಿ ಅವರನ್ನು ನೇಮಿಸಲಾಗಿದೆ