ಭಾರತದ ಪ್ರಥಮ ಮಹಿಳಾ ಹಾಕಿ ತೀರ್ಪುಗಾರ್ತಿ ಪುಚ್ಚಿಮಂಡ ಅನುಪಮಾ (41) ಕೊರೋನಾಗೆ ಬಲಿಯಾಗಿದ್ದಾರೆ. ಹಾಕಿ ಅಂಪೈರ್ ಆಗಿದ್ದ ಅನುಪಮ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ನೂರು ಅಂತಾರಾಷ್ಟ್ರೀಯ ಪಂದ್ಯಾಟದ ತೀರ್ಪುಗಾರಿಕೆ ಮಾಡಿದ್ದರು. ಶಾಂತಿ ನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನುಪಮಾ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.