International Yoga Day 2026: ಇಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಯೋಗ, ಸಾರ್ವಜನಿಕರಿಗೂ ಮುಕ್ತ ಅವಕಾಶ!

Kannadaprabha News   | Kannada Prabha
Published : Jun 21, 2026, 06:39 AM IST

International Yoga Day 2026: ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದಡಿ ಭಾನುವಾರ ಬೆಳಗ್ಗೆ 7 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್‌ ತಿಳಿIಸಿದರು.

PREV
14
International Yoga Day: ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದಡಿ ಭಾನುವಾರ ಬೆಳಗ್ಗೆ 7 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ವರ್ಷ ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದಡಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ನಟ ವಶಿಷ್ಠ ಶಿಂಹ, ಕಲಾವಿದೆಯರಾದ ಸುಧಾರಾಣಿ, ಹರಿಪ್ರಿಯಾ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

24
ಸಾರ್ವಜನಿಕರಿಗೆ ಮುಕ್ತ ಅವಕಾಶ

ಕೇಂದ್ರ ಸರ್ಕಾರದ ಯೋಗ ಶಿಷ್ಟಾಚಾರದಂತೆ ಮೊದಲು 40 ನಿಮಿಷ ಗಣ್ಯರು ಹಾಗೂ ಸಾರ್ವಜನಿಕರು ಒಟ್ಟಾಗಿ ಯೋಗಾಸನ ನೆರವೇರಿಸಲಿದ್ದಾರೆ. ಸಾರ್ವಜನಿಕರಿಗೆ ಮುಕ್ತ ಅವಕಾಶವಿದ್ದು ಸುಮಾರು 2000 ಯೋಗ ಸಾಧಕರು ಭಾಗವಹಿಸುವ ಸಾಧ್ಯತೆ ಇದೆ. ರಾಜ್ಯಾದ್ಯಂತ ನಡೆಯುವ ವಿವಿಧ ಯೋಗ ದಿನಾಚರಣೆ ಕಾರ್ಯಕ್ರಮಗಳಲ್ಲಿ ಒಟ್ಟಾರೆ 10 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ವಿವರಿಸಿದರು.

ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಆಗಮಿಸುವವರಿಗೆ ಅನುಕೂಲವಾಗಲಿ ಎಂದು ಭಾನುವಾರ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ರೈಲು ಸಂಚರಿಸಲಿವೆ. ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಸಾವಿರ ಸರ್ಕಾರಿ ಶಾಲೆಯಲ್ಲಿ ನಿರಂತರ ಯೋಗ ಪ್ರಚಾರ ಹಮ್ಮಿಕೊಳ್ಳಲಾಗಿದ್ದು, ಯೋಗ ಕ್ವಿಜ್, ರಂಗೋಲಿ, ಪ್ರಬಂಧ, ಚಿತ್ರಪಟ ರಚನೆ, ಪತಂಜಲಿ ಯೋಗ ಸೂತ್ರ ಪಾರಾಯಣದಂಥ ಸ್ಪರ್ಧೆಗಳಲ್ಲಿ 25 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.

34
ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವವರಿಗೆ ಡಿಜಿಟಲ್ ಸರ್ಟಿಫಿಕೇಟ್

ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವವರಿಗೆ ನೀಡುವ ಡಿಜಿಟಲ್ ಸರ್ಟಿಫಿಕೆಟ್ ಹಾಗೂ ಪ್ರತಿ ದಿನ ಯೋಗ ಕುರಿತ ಬ್ರೋಚರ್‌ಗಳನ್ನು ಇದೇ ವೇಳೆ ಬಿಡುಗಡೆಗೊಳಿಸಲಾಯಿತು. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ರಂಜನ್‌ ಪಾಂಡೆ, ಆಯುಕ್ತ ಗುರುದತ್ತ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

44
365 ದಿನವೂ ಕಾರ್ಯಕ್ರಮ:

ಯೋಗವನ್ನು ಕೇವಲ ಒಂದು ದಿನ ಆಚರಿಸದೆ ನಿತ್ಯೋತ್ಸವವಾಗಿಸಲು ಆಯುಷ್‌ ಇಲಾಖೆ ಕ್ರಮಕೈಗೊಂಡಿದೆ. ಎಲ್ಲ ಆಯುಷ್‌ ಸಂಸ್ಥೆಗಳು ಮತ್ತು ಗ್ರಾಮೀಣ ಭಾಗದ ಆಯುಷ್ಮಾನ್‌ ಆರೋಗ್ಯ ಕೇಂದ್ರಗಳಲ್ಲಿ ವರ್ಷದ 365 ದಿನವೂ ನಿರಂತರ ಯೋಗಾಭ್ಯಾಸ ನಡೆಸಲು ‘ನಿತ್ಯ ಯೋಗ'' ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸಚಿವ ಖಾದರ್‌ ತಿಳಿಸಿದರು. ಕಳೆದ ವರ್ಷ ಘೋಷಿಸಿದಂತೆ ‘ಮೈಸೂರು ಯೋಗ ಹಬ್’ ಕಾರ್ಯಕ್ರಮ ಈಗಾಗಲೇ ಯಶಸ್ವಿಯಾಗಿ ಆರಂಭಗೊಂಡಿದ್ದು, ಮುಂದಿನ ದಿನಗಳಲ್ಲಿ ಉಳಿದ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಭರವಸೆ ನೀಡಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories