ಕಾಸ್ಟಿಂಗ್ ಕೌಚ್ ಬಗ್ಗೆ ಆಗಾಗ್ಗೆ ಆರೋಪಗಳು ಕೇಳಿ ಬರ್ತಿರುತ್ತವೆ. #MeToo ಸಮಯದಲ್ಲಿ ಹಲವು ನಟಿಯರು, ನಿರ್ದೇಶಕರು ಮತ್ತು ನಟರ ವಿರುದ್ಧ ಆರೋಪ ಮಾಡಿದ್ದರು. ಅರ್ಜುನ್ ಸರ್ಜಾ ಕೂಡ ವಿವಾದಕ್ಕೆ ಸಿಲುಕಿದ್ದರು. ನಟಿ ಶೃತಿ ಹರಿಹರನ್, ಅರ್ಜುನ್ ಸರ್ಜಾ ಶೂಟಿಂಗ್ ಸಮಯದಲ್ಲಿ ತಮ್ಮನ್ನು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಆಗ ಈ ಆರೋಪಗಳು ಸಂಚಲನ ಮೂಡಿಸಿದ್ದವು.