ಕಲಬುರಗಿ: ಕನ್ನಡ ತೆಗೆದು ಉರ್ದು ನಾಮಫಲಕ, ಅಧಿಕಾರಿಗಳ ಮುಖಕ್ಕೆ ಮಸಿ ಬಳಿದ ಕರವೇ

Published : Sep 18, 2025, 08:37 PM IST

ಕನ್ನಡ ಭಾಷೆಗೆ ಅವಮಾನ ಮಾಡಿರುವುದನ್ನ ಖಂಡಿಸಿ ಕರವೇ ಕಾರ್ಯಕರ್ತರು ಅಧಿಕಾರಿಗಳ ಮುಖಕ್ಕೆ ಮಸಿ ಬಳಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

PREV
13
ಕಲಬುರಗಿಯಲ್ಲಿ ಕನ್ನಡಕ್ಕೆ ಅವಮಾನ

ಕಲಬುರಗಿ ಜಿಲ್ಲೆಯ ಎಂ.ಎಸ್.ಕೆ. ಮಿಲ್ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ನೂತನ ತರಕಾರಿ ಮಾರುಕಟ್ಟೆ ಕಟ್ಟಡದ ಕನ್ನಡ ನಾಮಫಲಕವನ್ನು ತೆರವುಗೊಳಿಸಿ ಉರ್ದು ನಾಮಫಲಕ ಹಾಕಿದ್ದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

23
ಅಧಿಕಾರಿಗಳಿಗೆ ಮಸಿ ಬಳಿದ ಕರವೇ ಕಾರ್ಯಕರ್ತರು

ಈ ಘಟನೆಯಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಎಸ್. ಮಾಳಗಿ ಮತ್ತು PWD ಮುಖ್ಯ ಎಂಜಿನಿಯರ್ ಅಮಿನ್ ಮುಕ್ತಾರ್ ಅವರ ಮುಖಕ್ಕೆ ಕರವೇ ಕಾರ್ಯಕರ್ತರು ಮಸಿ ಬಳಿದ ಘಟನೆ ನಡೆಯಿತು. ನಾರಾಯಣ ಗೌಡ ಬಣದ ಕರವೇ ಕಾರ್ಯಕರ್ತರು, ಕನ್ನಡ ಭಾಷೆಗೆ ಅವಮಾನ ಮಾಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಕನ್ನಡ ನಾಮಫಲಕವನ್ನು ತೆರವುಗೊಳಿಸಿ ಉರ್ದು ಫಲಕ ಹಾಕಿರುವುದು ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ. ಕೂಡಲೇ ಕನ್ನಡ ನಾಮಫಲಕವನ್ನು ಮರಳಿ ಅಳವಡಿಸಬೇಕು," ಎಂದು ಕರವೇ ಕಾರ್ಯಕರ್ತರು ಆಗ್ರಹಿಸಿದ್ದಾರೆ.

33
ಕರವೇ ಎಚ್ಚರಿಕೆ

ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಯ್ತು. ಕನ್ನಡ ನಾಮಫಲಕವನ್ನು ಮರಳಿ ಅಳವಡಿಸುವವರೆಗೆ ಪ್ರತಿಭಟನೆ ಮುಂದುವರಿಯುವುದಾಗಿ ಕರವೇ ಎಚ್ಚರಿಕೆ ನೀಡಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories