ಪಶ್ಚಿಮ ದಿಕ್ಕು: (ಕೆಂಗೇರಿ ಉಪನಗರ ): ಜ್ಞಾನಪೀಠ ಪ್ರಶಸ್ತಿ ಪುರಸ್ಕತರು ಹಾಗೂ ರಾಷ್ಟ್ರಕವಿಗಳಾದ ಕುವೆಂಪು, ದ.ರಾ.ಬೇಂದ್ರೆ, ಶಿವರಾಮಕಾರಂತ, ಮಾಸ್ತಿ ವೆಂಕಟೇಶ ಅಯ್ಯಾಂಗಾರ್, ವಿ.ಕೃ. ಗೋಕಾಕ್, ಡಾ. ಯು. ಆರ್. ಅನಂತ ಮೂರ್ತಿ, ಡಾ. ಗಿರೀಶ್ ಕಾರ್ನಾಡ್, ಡಾ. ಚಂದ್ರಶೇಖರ ಕಂಬಾರ, ಮಂಜೇಶ್ವರ ಗೋವಿಂದ ಪೈ, ಡಾ. ಜಿ.ಎಸ್. ಶಿವರುದ್ರಪ್ಪ ಅವರ ಫೋಟೋ ಮೆರವಣಿಗೆಯಲ್ಲಿ ಬರಲಿದೆ.
ಉತ್ತರ ದಿಕ್ಕು : (ಹೆಬ್ಬಾಳ) ಈ ದಿಕ್ಕಿನಿಂದ
ಕದಂಬರು, ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರ ಅರಸರು, ಗಂಗರು, ಮೈಸೂರು ರಾಜ್ಯರ ಲಾಂಛನ ಹಾಗೂ ಹಲ್ಮಿಡಿ ಶಾಸನದ ಪ್ರತಿರೂಪ ಇರಲಿದೆ.
ದಕ್ಷಿಣ ದಿಕ್ಕು : (ಬಸವನಗುಡಿ ಬುಲ್ ಟೆಂಪಲ್ ) ಇನ್ನು ದಕ್ಷಿಣ ದಿಕ್ಕಿನಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ, ಕನಕದಾಸರು, ಪುರಂದರದಾಸರು, ಸಂಚಿ ಹೊನ್ನಮ್ಮ, ದಾನ ಚಿಂತಾಮಣಿ ಅತ್ತಿಮಬ್ಬೆ, ಅಕ್ಕಮಹಾದೇವಿ, ಕುಮಾರವ್ಯಾಸ, ಸಂತ ಶಿಶುನಾಳ ಷರೀಫ, ರೆವರೆಂಡ್ ಎಫ್ ಕಿಟ್ಟೆಲ್, ಬಿ.ಎಲ್. ರೈಸ್ ಅವರ ಪಲ್ಲಕ್ಕಿ ಬರಲಿದ್ದು, ನಾಲ್ಕು ದಿಕ್ಕುಗಳಿನಿಂದ ಮೆರವಣಿಗೆ ಸಾಗಿ ಅಂತಿಮವಾಗಿ ನಾಡದೇವಿ ಭುವನೇಶ್ವರಿ ಪ್ರತಿಮೆ ಇರುವ ವಿಧಾನಸೌಧದ ಬಳಿ ತಲುಪಲಿವೆ. ಅಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರತಿಯೊಂದು ದಿಕ್ಕಿನಲ್ಲಿ ಶಾಸಕರು ಮೆರವಣಿಗೆ ಚಾಲನೆ ನೀಡಲಾಗಿದ್ದು, ಹತ್ತಾರು ಕಲಾ ತಂಡಗಳು ಸೇರಿದಂತೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ನಾಡದೇವಿ ಭುವನೇಶ್ವರಿ ಪ್ರತಿಮೆ ಅನಾವರಣದ ಬಳಿಕ ಕನ್ನಡ ಗೀತೆಗಳ ಕಾರ್ಯಕ್ರಮ ಮತ್ತು ಹೊನ್ನ ಬಿತ್ತೇವು – ನೃತ್ಯ ರೂಪಕ ಕಾರ್ಯಕ್ರಮ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ ಎಂದು ಸಚಿವರು ವಿವರಿಸಿದರು.
ಪ್ರತಿಮೆಯ ವೈಶಿಷ್ಟ್ಯ:
ನೆಲಮಟ್ಟದಿಂದ ಪ್ರತಿಮೆಯ ಎತ್ತರ - 43 ಅಡಿ 6 ಇಂಚು
ಪ್ರತಿಮೆಯ ಲೋಹದ ಒಟ್ಟು ತೂಕ - 31.50 ಟನ್
ಭುವನೇಶ್ವರಿ ಪ್ರತಿಮೆ - 20 ಟನ್
ಕರ್ನಾಟಕ ನಕ್ಷೆ - 11.50 ಟನ್
ಭುವನೇಶ್ವರಿ ಪ್ರತಿಮೆಯ ಒಟ್ಟು ವಿಸ್ತೀರ್ಣ (ಉದ್ಯಾನವನ ಸೇರಿದಂತೆ) - 4500 ಚ.ಮೀ
ಕಲ್ಲು ಕಟ್ಟಡದ ಪೀಠದ ವಿವರ - ಕಲ್ಲಿನ ಹೊಯ್ಸಳ ಶೈಲಿಯ ಪೀಠ ಮತ್ತು ಪ್ರದಕ್ಷಣ ಪಥದ ಸುತ್ತ ಕರ್ಣಕೂಟ ಮತ್ತು ಅಲಂಕಾರಿಕ ಕಲ್ಲಿನ ಕೈಪಿಡಿ ನಿರ್ಮಿಸಲಾಗಿದೆ.
ಕಾಮಗಾರಿಯ ಅಂದಾಜು ವೆಚ್ಚ : 21.24 ಕೋಟಿ
ಕಾಮಗಾರಿ ನಿರ್ವಹಣೆ: ಲೋಕೋಪಯೋಗಿ ಇಲಾಖೆ