ಬಿಪಿಎಲ್ ಕಾರ್ಡ್ ರದ್ದಾದರೆ ಹೀಗೆ ಮಾಡಿ, 24 ಗಂಟೆಯೊಳಗೆ ವಾಪಸ್ ಕೊಡ್ತೇವೆ: ಸಚಿವ ಮುನಿಯಪ್ಪ!

Published : Sep 17, 2025, 11:50 AM IST

ಕೇಂದ್ರ ಸರ್ಕಾರದ 7 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ ರದ್ದತಿಗೆ ಸೂಚಿಸಿದ್ದು, ಅನರ್ಹರನ್ನು ಎಪಿಎಲ್‌ಗೆ ವರ್ಗಾಯಿಸಲಾಗುವುದು. ಈ ವೇಳೆ ನಿಮ್ಮ ಕಾರ್ಡ್ ಎಪಿಎಲ್‌ಗೆ ಹೋದರೆ ತಕ್ಷಣ ನೀವು ಈ ಕೆಲಸ ಮಾಡಬೇಕು. ಆಗ 24 ಗಂಟೆಯೊಳಗೆ ಕಾರ್ಡ್ ಸರಿಪಡಿಸಿ ದವಸ ಧಾನ್ಯ ನೀಡಲಾಗುವುದು.

PREV
16

ಬೆಂಗಳೂರು (ಸೆ.17): ಕೇಂದ್ರ ಸರ್ಕಾರ 7 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಗೈಡ್‌ಲೈನ್ಸ್ ನೀಡಿದೆ. ಅದರಂತೆ ಅನರ್ಹ ಬಿಪಿಎಲ್ ಕಾರ್ಡ್‌ದಾರರನ್ನು ಎಪಿಎಲ್‌ಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಒಂದು ವೇಳೆ ಅರ್ಹ ಬಿಪಿಎಲ್ ಕಾರ್ಡ್‌ದಾರರನ್ನು ಎಪಿಎಲ್‌ಗೆ ವರ್ಗಾವಣೆ ಮಾಡಿದ್ದರೆ ಸರ್ಕಾರಕ್ಕೆ ಅರ್ಜಿ ಸಲ್ಲಿಕೆ ಮಾಡಿದರೆ, 24 ಗಂಟೆಯೊಳಗೆ ಅದನ್ನು ಸರಿಪಡಿಸಿ ದವಸ ಧಾನ್ಯಗಳನ್ನು ಕೊಡಲಾಗುತ್ತದೆ ಎಂದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

26

ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವುದು ಕರ್ನಾಟಕವಾಗಿದ್ದು, ರಾಜ್ಯದ ಒಟ್ಟು ಕಾರ್ಡ್‌ಗಳ ಪೈಕಿ 70ರಿಂದ 75 ಶೇಕಡಾ ಕಾರ್ಡ್‌ಗಳು ಬಿಪಿಎಲ್ ವರ್ಗದಲ್ಲಿವೆ. ಈ ಹಿನ್ನೆಲೆಯಲ್ಲಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಪರಿಷ್ಕರಣೆ ಪ್ರಕ್ರಿಯೆ ಆರಂಭಿಸುವುದು ಅನಿವಾರ್ಯವಾಗಿದೆ.

ಆದ್ದರಿಂದ ಅನರ್ಹ ಬಿಪಿಎಲ್‌ ಕಾರ್ಡ್‌ದಾರರನ್ನು ಎಪಿಎಲ್‌ಗೆ ವರ್ಗಾಯಿಸಲಾಗುವುದು, ನಿಜವಾದ ಬಡವರಿಗೆ ಮಾತ್ರ ಸಬ್ಸಿಡಿ ಸೌಲಭ್ಯ ನೀಡಲಾಗುತ್ತದೆ. ಆದರೆ, ಯಾವುದೇ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನವರು) ರೇಷನ್ ಕಾರ್ಡ್‌ಗಳನ್ನು ರದ್ದು ಮಾಡುವ ಪ್ರಶ್ನೆಯೇ ಇಲ್ಲ ಸ್ಪಷ್ಟನೆ ನೀಡಿದ್ದಾರೆ.

36

ಅರ್ಹರು ಎಪಿಎಲ್‌ಗೆ ಹೋದರೆ ತಕ್ಷಣ ಅರ್ಜಿ ಸಲ್ಲಿಸಿ:

ಅನೇಕ ಅನರ್ಹ ಫಲಾನುಭವಿಗಳು ಬಿಪಿಎಲ್ ಕಾರ್ಡ್ ಪಡೆದುಕೊಂಡು ಸರ್ಕಾರದ ಸಬ್ಸಿಡಿ ಸೌಲಭ್ಯಗಳನ್ನು ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಅನರ್ಹರನ್ನು ಗುರುತಿಸಿ ಅವರ ಕಾರ್ಡ್‌ಗಳನ್ನು ರದ್ದು ಮಾಡುವುದಿಲ್ಲ. ಬದಲಾಗಿ ಅವರನ್ನು ಎಪಿಎಲ್ (ಬಡತನ ರೇಖೆಗಿಂತ ಮೇಲಿನವರು) ವರ್ಗಕ್ಕೆ ವರ್ಗಾಯಿಸಲಾಗುವುದು. ಇದರಿಂದ ನಿಜವಾದ ಬಡವರಿಗೆ ಸರಕಾರದ ಸಬ್ಸಿಡಿ ಸೌಲಭ್ಯಗಳು ತಲುಪುತ್ತವೆ. 

ಇನ್ನು ಪರಿಷ್ಕರಣೆ ಸಂದರ್ಭದಲ್ಲಿ ತಪ್ಪಾಗಿ ಬಿಪಿಎಲ್‌ನಿಂದ ಎಪಿಎಲ್‌ಗೆ ಹೋಗಿದವರು ತಕ್ಷಣವೇ ಅರ್ಜಿ ಸಲ್ಲಿಸಬಹುದಾಗಿದೆ. 'ಅರ್ಜಿ ಸಲ್ಲಿಸಿದವರನ್ನು 24 ಗಂಟೆಗಳೊಳಗೆ ಪುನಃ ಬಿಪಿಎಲ್ ಪಟ್ಟಿಗೆ ಸೇರಿಸಿ ಅವರಿಗೆ ದವಸ ಧಾನ್ಯಗಳನ್ನು ನೀಡಲಾಗುವುದು' ಎಂದೂ ಅವರು ಭರವಸೆ ನೀಡಿದರು.

46

ಕೇಂದ್ರದ ಮಾರ್ಗಸೂಚಿ ಮತ್ತು ರಾಜ್ಯದ ನಿರ್ಧಾರ

ಕೇಂದ್ರ ಸರ್ಕಾರವು ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆಗಾಗಿ ರಾಜ್ಯಗಳಿಗೆ ಮಾರ್ಗಸೂಚಿ ನೀಡಿದ್ದು, ಕರ್ನಾಟಕದಲ್ಲಿ ಸುಮಾರು 7 ಲಕ್ಷ ಅನರ್ಹ ಕಾರ್ಡ್‌ಗಳನ್ನು ತೆಗೆದುಹಾಕುವಂತೆ ನಿರ್ದೇಶನ ನೀಡಿದೆ. ಈ ಕುರಿತು ರಾಜ್ಯ ಸರ್ಕಾರ ಈಗಾಗಲೇ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಂದಿನ ಕಾರ್ಯಯೋಜನೆ ರೂಪಿಸಿದೆ. ಮುಂದಿನ ತಿಂಗಳಲ್ಲಿ ಹೊಸ ಪರಿಷ್ಕೃತ ಬಿಪಿಎಲ್ ಕಾರ್ಡ್ ವಿತರಣಾ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ. ಅರ್ಹರಾಗಿರುವ ಪ್ರತಿಯೊಬ್ಬರಿಗೂ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

56

ಸಿಎಂ ಹೇಳಿಕೆಯ ಸ್ಪಷ್ಟನೆ

ಮುನಿಯಪ್ಪ ಅವರು, 'ಮುಖ್ಯಮಂತ್ರಿಯವರ ಹೇಳಿಕೆಯನ್ನು ತಪ್ಪಾಗಿ ಅರ್ಥಮಾಡಿಕೊಳ್ಳಲಾಗಿದೆ. ಕಾರ್ಡ್‌ಗಳನ್ನು ರದ್ದು ಮಾಡುವುದಿಲ್ಲ; ಕೇವಲ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ. ಸರ್ಕಾರದ ಈ ಕ್ರಮವು ಪಡಿತರ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಿ ನಿಜವಾದ ಬಡ ಕುಟುಂಬಗಳಿಗೆ ನ್ಯಾಯ ಒದಗಿಸುವ ಉದ್ದೇಶ ಹೊಂದಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಸಚಿವರು ಸಾರ್ವಜನಿಕರಿಗೆ ಮನವಿ ಮಾಡಿದರು.

66

ಬುಲೆಟ್ ಪಾಯಿಂಟ್ಸ್

  • ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವುದು ಕರ್ನಾಟಕ.
  • ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳು ಒಟ್ಟು 70-75% ಪ್ರಮಾಣದಲ್ಲಿವೆ.
  • ಅನರ್ಹ ಕಾರ್ಡ್‌ದಾರರನ್ನು ರದ್ದು ಮಾಡದೇ ಎಪಿಎಲ್ ವರ್ಗಕ್ಕೆ ವರ್ಗಾಯಿಸಲಾಗುವುದು.
  • ತಪ್ಪಾಗಿ ಎಪಿಎಲ್‌ಗೆ ಸೇರಿಸಿದ ಬಿಪಿಎಲ್ ಫಲಾನುಭವಿಗಳಿಗೆ 24 ಗಂಟೆಯಲ್ಲಿ ಪುನಃ ಬಿಪಿಎಲ್ ಕಾರ್ಡ್ ಕೊಡಲಾಗುತ್ತದೆ.
  • ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 7 ಲಕ್ಷ ಅನರ್ಹ ಕಾರ್ಡ್‌ಗಳನ್ನು ತೆಗೆದುಹಾಕುವ ಯೋಜನೆ.
  • ಅಧಿಕಾರಿಗಳ ಜೊತೆ ಸಭೆ ನಡೆಸಿ ಪರಿಷ್ಕರಣೆ ಪ್ರಕ್ರಿಯೆಗೆ ತಯಾರಿ ಪೂರ್ಣ.
  • ಮುಂದಿನ ತಿಂಗಳಲ್ಲಿ ಹೊಸ ಬಿಪಿಎಲ್ ಕಾರ್ಡ್ ವಿತರಣಾ ಪ್ರಕ್ರಿಯೆ ಆರಂಭ.
Read more Photos on
click me!

Recommended Stories