2026-27ನೇ ಸಾಲಿನ ವಿದ್ಯಾರ್ಥಿ ಉಚಿತ ಬಸ್ ಪಾಸ್ (school and college students free bus pass) ಜೂ.12ರಿಂದಲೇ ವಿತರಣೆಗೆ 123 ಕೇಂದ್ರ ಆರಂಭಿಸಲಾಗಿದೆ. ಜೂನ್ 12 ರಿಂದ ಆರಂಭವಾಗಲಿದೆ. ಈಗಾಗಲೇ ಹಣ ಪಾವತಿಸಿ ಪಾಸ್ ಪಡೆದವರಿಗೆ 15 ದಿನದಲ್ಲಿ ಹಣ ವಾಪಸ್ ನೀಡಲಾಗುವುದು. ಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ದೊಡ್ಡ ಸಿಹಿಸುದ್ದಿ ನೀಡಿದೆ. 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಎಲ್ಲಾ ನಾಲ್ಕು ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ 'ಉಚಿತ ಬಸ್ ಪಾಸ್' ವಿತರಿಸಲು ಅಧಿಕೃತವಾಗಿ ಚಾಲನೆ ನೀಡಲಾಗಿದೆ.
26
ನಾಲ್ಕೂ ಸಾರಿಗೆ ನಿಗಮಗಳಲ್ಲಿ ಅನ್ವಯ
ಈ ಯೋಜನೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (KKRTC) ಬಸ್‌ಗಳಲ್ಲಿ ಪ್ರಯಾಣಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.
36
ಜೂನ್ 12 ರಿಂದ ವಿತರಣೆ ಆರಂಭ:
ಸೇವಾಸಿಂಧು ಪೋರ್ಟಲ್ ಮೂಲಕ ಈಗಾಗಲೇ ಮೇ 29 ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 12, 2026 ರಿಂದ ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು ಎಂದು ನಿಗಮ ತಿಳಿಸಿದೆ. ಈ ಹಿಂದೆ ಇದ್ದ ಶೈಕ್ಷಣಿಕ ಅರ್ಹತೆ, ದೂರದ ಮಿತಿ ಮತ್ತು ಪಾಸ್‌ನ ಕಾಲಾವಧಿಯ ನಿಯಮಾವಳಿಗಳೇ ಈ ಬಾರಿಯೂ ಮುಂದುವರಿಯಲಿವೆ.
ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಪಡೆಯಲು ಕರ್ನಾಟಕ ಸರ್ಕಾರದ ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices/ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಶಾಲೆ ಅಥವಾ ಕೆಫೆಗಳಿಂದ ಸುಲಭವಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಿಗಮದ ವ್ಯಾಪ್ತಿಯಲ್ಲಿರುವ 123 ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ಕೆಎಸ್‌ಆರ್‌ಟಿಸಿ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.
56
ಹಣ ಪಾವತಿಸಿದವರಿಗೆ 15 ದಿನದಲ್ಲಿ ಮರುಪಾವತಿ:
ಈಗಾಗಲೇ 2026-27ನೇ ಸಾಲಿಗೆ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ನಿಗಮವು ಬಂಪರ್ ಆಫರ್ ನೀಡಿದೆ. ಅಂತಹ ವಿದ್ಯಾರ್ಥಿಗಳು ಪಾವತಿಸಿರುವ ಸಂಪೂರ್ಣ ಮೊತ್ತವನ್ನು 15 ದಿನಗಳ ಒಳಗಾಗಿ ಮರುಪಾವತಿ (Refund) ಮಾಡಲಾಗುವುದು. ಈ ಮರುಪಾವತಿ ಪ್ರಕ್ರಿಯೆಯ ಬಗ್ಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
66
ಗಡಿ ಭಾಗದ ವಿದ್ಯಾರ್ಥಿಗಳಿಗೂ ಸೌಲಭ್ಯ:
ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು ನೆರೆ ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ನೆರೆ ರಾಜ್ಯದ ಗಡಿ ಭಾಗದಲ್ಲಿ ವಾಸವಿದ್ದು ಕರ್ನಾಟಕದ ವಿದ್ಯಾಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳೂ ಸಹ ಈ ಉಚಿತ ಬಸ್ ಪಾಸ್ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಯೋಜನೆಯಿಂದಾಗಿ ರಾಜ್ಯದ ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಶಿಕ್ಷಣಕ್ಕೆ ಸಾರಿಗೆ ವೆಚ್ಚದ ಹೊರೆ ತಪ್ಪಿದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ