ಮಾಜಿ ಪ್ರಧಾನಿ ದೇವೇಗೌಡರಿಗೆ 1.25 ಕೋಟಿ ರೂ ಕಾರು ಖರೀದಿಗೆ ರಾಜ್ಯ ಸರ್ಕಾರ ಒಪ್ಪಿಗೆ, ಈ ಕುರಿತು ರಾಜ್ಯ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ. ದೇವೇಗೌಡರಿಗೆ ಸರ್ಕಾರ ನೀಡುತ್ತಿರುವ ಕಾರು ಯಾವುದು?
ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್‌ಡಿ ದೇವೇಗೌಡರು ದೇಶ ಕಂಡ ಅತ್ಯಂತ ಮೇರು ರಾಜಕಾರಣಿ. ಕರ್ನಾಟಕ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ದೇವೇಗೌಡರು ತಮ್ಮ 92ರ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಜೆಡಿಎಸ್ ಪಕ್ಷ ಸಂಘಟನೆಯಲ್ಲೂ ತೊಡಗಿಸಿಕೊಂಡಿದ್ದಾರೆ. ಇದೀಗ ಮಾಜಿ ಪ್ರಧಾನಿಗೆ ದುಬಾರಿ ಕಾರು ಖರೀದಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
26
1.25 ಕೋಟಿ ರೂ ಕಾರು
ಮಾಜಿ ಪ್ರಧಾನಿ ದೇವೇಗೌಡರಿಗೆ ಓಡಾಡಲು ರಾಜ್ಯ ಸರ್ಕಾರ 1.25 ಲಕ್ಷ ರೂಪಾಯಿ ಕಾರು ನೀಡುತ್ತಿದೆ. ಹೌದು, ಐಷಾರಾಮಿ ಹಾಗೂ ಗರಿಷ್ಠ ಸುರಕ್ಷತೆಯ Volvo XC 90 (ವೋಲ್ವೋ ಎಕ್ಸ್‌ಸಿ 90 ) ಕಾರು ಖರೀದಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿದೆ.
36
ಸರ್ಕಾರದ ಅಧಿಸೂಚನೆ
ದೇವೇಗೌಡರಿಗೆ ಕಾರು ಖರೀದಿಸಲು ಒಪ್ಪಿಗೆ ಸೂಚಿಸರುವ ಕುರಿತು ಸರ್ಕಾರ ಹೊರಡಿಸಿದ ಅಧಿಸೂಚನೆಯಲ್ಲಿ ಮಹತ್ವದ ಮಾಹಿತಿ ನೀಡಲಾಗಿದೆ. ಹೆಚ್.ಡಿ ದೇವೇಗೌಡರು ಇವರಿಗೆ VOLVO-XC90 ವಾಹನವನ್ನು ರೂ.1,25,65,388/-ಗಳ ವೆಚ್ಚದಲ್ಲಿ ಮೆ: Martial Motors Pvt. Ltd., ಬೆಂಗಳೂರು ಇವರಿಂದ ನೇರವಾಗಿ ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ. ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ದೃಢಪಡಿಸಿಕೊಳ್ಳುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ದೇವೇಗೌಡರಿಗೆ ಸರ್ಕಾರ ಖರೀದಿಗೆ ಒಪ್ಪಿಗೆ ನೀಡಿರುವ ವೋಲ್ವೋ ಕಾರು ಹಲವು ವಿಶೇಷತೆಗಳನ್ನು ಹೊಂದಿದೆ. 2.0 ಲೀಟರ್ ಟರ್ಬೋ ಎಂಜಿನ್ ಹೊಂದಿರುವ ಈ ಕಾರು ಮೈಲ್ಡ್ ಹೈಬ್ರಿಡ್ ಪವರ್‌ಟ್ರೇನ್ ಹೊಂದಿದೆ. 250 hp ಪವರ್ ಹಾಗೂ 360 Nm ಪೀಕ್ ಟಾರ್ಕ್ ಸಾಮರ್ಥ್ಯ ಹೊಂದಿದೆ.
56
ದೇವೇಗೌಡರಿಗಾಗಿ ಕೆಲ ಮಾಡಿಫಿಕೇಶನ್
ಲೆವೆಲ್ 2 ಅಡಾಸ್ (ADAS) ಫೀಚರ್, ಹಿಲ್ ಸ್ಟಾರ್ಟ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಪಾರ್ಕಿಂಗ್ ಅಸೆಸ್ಟೆಂಟ್, ಎಬಿಎಸ್, ಎಬಿಡಿ, 7 ಏರ್ ಬ್ಯಾಗ್, 360 ಡಿಗ್ರಿ ಕ್ಯಾಮೆರಾ ಸೇರಿದಂತೆ ಗರಿಷ್ಠ ಸುರಕ್ಷತಾ ಫೀಚರ್ಸ್ ಈ ಕಾರಿನಲ್ಲಿದೆ. ಇನ್ನು ಕಾರನ್ನು ಮಾಡಿಫಿಕೇಶನ್ ಮಾಡಲು ಸಾಧ್ಯವಿದೆ. ಸದ್ಯ ದೇವೇಗೌಡರಿಗೆ ಕಾರು ಹತ್ತಿ ಇಳಿಯಲು, ಕಾರಿನಲ್ಲಿ ಕುಳಿತುಕೊಳ್ಳಲು ಕೆಲ ಮಾಡಿಫಿಕೇಶನ್ ಮಾಡುವ ಸಾಧ್ಯತೆಗಳಿವೆ.
66
ಹತ್ತು ಹಲವು ಫೀಚರ್ಸ್
12.3 ಇಂಚಿನ್ ಇನ್ಸ್‌ಸ್ಟ್ರುಮೆಂಟ್ ಕ್ಲಸ್ಟರ್, 11.2 ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, ಪನರೋಮಿಕ್ ಸನ್‌ರೂಫ್, ಕ್ಲೈಮೇಟ್ ಕಂಟ್ರಲ್ ಸೇರಿದಂತೆ ಹಲವು ಫೀಚರ್ಸ್ ಈ ಕಾರಿನಲ್ಲಿದೆ.
ಹತ್ತು ಹಲವು ಫೀಚರ್ಸ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ