ಬೆಂಗಳೂರಿನಲ್ಲಿನ ಬೆಂಗಳೂರು ಅಪಾರ್ಟ್‌ಮೆಂಟ್ ಅಸೋಸಿಯೇಷನ್, ಪ್ರಜಾಪಿತ ಬ್ರಹ್ಮಕುಮಾರಿ ಸಂಸ್ಥೆ, ಜೈನ್ ಯುನಿರ್ವಸಿಟಿ, ಲೂಲು ಮಾಲ್ ಹಾಗೂ ಮಾಲ್ ಆಫ್ ಏಷ್ಯಾ, ಸ್ಥಳಗಳಲ್ಲಿ ಯೋಗ ತರಬೇತಿ, ಆಯುಷ್ ವೈದ್ಯ ಪದ್ಧತಿಗಳ ಕುರಿತು ಅರಿವು ಹಾಗೂ ಆಯುಷ್ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯುಷ್ ಇಲಾಖಾ ವತಿಯಿಂದ ನಡೆಸಲಾಗುತ್ತಿದೆ. ಈ ಕಾರ್ಯಕ್ರಮಗಳಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಯೋಗ ಗಂಗೋತ್ರಿ ಟ್ರಸ್ಟ್, ಶ್ರೀ ಪತಂಜಲಿ ಯೋಗಾಶ್ರಮ ಟ್ರಸ್ಟ್, ಸಂಯಮ ಟ್ರಸ್ಟ್ ಹಾಗೂ ಇನ್ನಿತರ ಖಾಸಗಿ ಯೋಗ ಸಂಸ್ಥೆಗಳು ಅಗತ್ಯ ಸಹಕಾರವನ್ನು ನೀಡಲಿದ್ದು, ಮಾನಸಿಕ ಆರೋಗ್ಯ ಹಾಗೂ ದೈಹಿಕ ಆರೋಗ್ಯದ ಕುರಿತು ಸಾರ್ವಜನಿಕರಿಗೆ ಮಾಹಿತಿ ದೊರೆಯಲಿದೆ.